ಬೆಂಗಳೂರು:50:50ರ ಅನುಪಾತದಲ್ಲಿ ನಿಯಮ ಬಾಹಿರವಾಗಿ ನಿವೇಶನಗಳನ್ನು ವಿತರಿಸಿರುವ ಅಂಶವನ್ನು ಪ್ರಮುಖವಾಗಿ ಪರಿಗಣಿಸಿ ಮಾಜಿ ಮುಡಾ ಆಯುಕ್ತ ಜಿ.ಟಿ. ದಿನೇಶ್ ಕುಮಾರ್​ರನ್ನು ಅಮಾನತು ಮಾಡಿರುವ ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯನವರ ಪತ್ನಿಗೆ ಪೂರ್ವಾನ್ವಯವಾಗುತಂತೆ 50:50 ಅನುಪಾತದಲ್ಲಿ ನೀಡಿರುವುದೂ ಸಹ ತಪ್ಪು ಎಂದು ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ ಎಂದು ವಿಪಕ್ಷ ನಾಯಕ ಆರ್​. ಅಶೋಕ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:ಗೂಗಲ್​, ಆ್ಯಪಲ್​ ಸಂಸ್ಥೆಯ ಆಫರ್​ ರಿಜೆಕ್ಟ್​ ಮಾಡಿದ ಮಹಿಳೆ! ಈಕೆಯ ನಿರ್ಧಾರದ ಹಿಂದಿದೆ ರೋಚಕ ಕಾರಣ
“ಮುಖ್ಯಮಂತ್ರಿಗಳು ಹಿಂದಿನ ಬಿಜೆಪಿ ಸರ್ಕಾರ ನೇಮಿಸಿದ್ದ ತಾಂತ್ರಿಕ ಸಮಿತಿ ಮೂಡಾ ಅಕ್ರಮದ ಬಗ್ಗೆ ವರದಿ ನೀಡಿ 10 ತಿಂಗಳು ಕಳೆದಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಮೇಲಾಗಿ ತನಿಖೆ ನಡೆಯುತ್ತಿದ್ದರೂ ತಪ್ಪಿತಸ್ಥ ಅಧಿಕಾರಿ ದಿನೇಶ್ ಕುಮಾರ್ ಅವರನ್ನು ಇತ್ತೀಚೆಗಷ್ಟೇ ಕೇವಲ ನಾಲ್ಕು ದಿನಗಳ ಹಿಂದೆ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ನೇಮಕ ಮಾಡುತ್ತೀರಿ. ಈಗ ದಿಢೀರನೆ ದಿನೇಶ್​ರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದೀರಿ” ಎಂದರು.
“ಮುಡಾ ಹಗರಣ ಬಯಲಿಗೆ ಬಂದಾಗಿನಿಂದ ತಾವು ಗಲಿಬಿಲಿಗೊಂಡಿದ್ದೀರಿ, ಮಂಕಾಗಿದ್ದೀರಿ, ಮಾನಸಿಕವಾಗಿ ಕುಗ್ಗಿ ಹೋಗಿದ್ದೀರಿ ಎಂದು ಸ್ವತಃ ತಮ್ಮ ಪಕ್ಷದವರೇ ಹೇಳುತ್ತಿದ್ದಾರೆ. ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟು ಅಧಿಕಾರದಿಂದ ನಿರ್ಗಮಿಸಿ. ನಿಮ್ಮ ಗೌರವ ಕಾಪಾಡಿಕೊಳ್ಳುವುದರ ಜತೆಗೆ ರಾಜ್ಯದ ಗೌರವವನ್ನೂ ಉಳಿಸಿ” ಎಂದು ಸಿಎಂ ರಾಜೀನಾಮಗೆ ಒತ್ತಾಯಿಸಿದ್ದಾರೆ.
ಗೂಗಲ್​, ಆ್ಯಪಲ್​ ಸಂಸ್ಥೆಯ ಆಫರ್​ ರಿಜೆಕ್ಟ್​ ಮಾಡಿದ ಮಹಿಳೆ! ಈಕೆಯ ನಿರ್ಧಾರದ ಹಿಂದಿದೆ ರೋಚಕ ಕಾರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − six =
Remember me
