ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಲುಸಾಲು ಟ್ವೀಟ್​​ ಮಾಡುವ ಮೂಲಕವಾಗಿ ಬಿಜೆಪಿ ಸರ್ಕಾರಕ್ಕೆ ಪ್ರಶ್ನೆ ಮಾಡಿ ಕಿಡಿಕಾರಿದ್ದಾರೆ.
ಭ್ರಷ್ಟ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಲೋಕಾಯುಕ್ತ ಪೊಲೀಸರು ಸಚಿತ್ರವಾಗಿ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದಾರೆ. ಆದರೆ ನೀವು ಮಾತ್ರ ಬಾಯಿ ಬಿಚ್ಚುತ್ತಿಲ್ಲ ಯಾಕೆ? ಅವರ ಲೂಟಿಯಲ್ಲಿ ನಿಮಗೂ ಪಾಲಿದೆಯಾ ಮೋದಿ ಅವರೆ ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿಯ ಸದ್ಯದ ಸರ್ವಶಕ್ತ ನಾಯಕರಾದ ನಿಮ್ಮ ಕೃಪಾಶೀರ್ವಾದ ಇಲ್ಲದೆ, ಭ್ರಷ್ಟ ಶಾಸಕರೊಬ್ಬರು ಕಾನೂನಿಗೆ ಅಂಜದೆ, ಮಾನ-ಮರ್ಯಾದೆಗೆ ಅಳುಕದೆ ಪ್ರಜಾತಂತ್ರ ವ್ಯವಸ್ಥೆಯನ್ನೇ ಅಣಕಿಸುವಂತೆ ಮೆರವಣಿಗೆ ಮಾಡಿಸಿಕೊಳ್ಳಲು ಸಾಧ್ಯವೇ? ನ ಖಾವೂಂಗಾ, ನಾ ಖಾನೆ ದೂಂಗಾ ಎಂಬ ನಿಮ್ಮ ಘೋಷಣೆಯನ್ನು ಈಗ ನೀವು ‘ತುಮ್ ಖಾವೋ, ಮುಜೆ ಬಿ ಖಿಲಾವೋ’ ( ನೀವು ತಿನ್ನಿ, ನನಗೂ ತಿನ್ನಿಸಿ) ಎಂದು ಬದಲಾಯಿಸಿ ಕೊಂಡಿದ್ದೀರಾ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:VIDEO| ಪಾನಿಪುರಿ ಮಾರಾಟ ಮಾಡುವ BTech ಪದವೀಧರೆ; ಇಲ್ಲಿದೆ ನೋಡಿ ಸ್ಫೂರ್ತಿದಾಯಕ ಕಥೆ
ಅಟಲಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಪಕ್ಷದ ಅಧ್ಯಕ್ಷರಾಗಿದ್ದ ಬಂಗಾರು ಲಕ್ಷ್ಮಣ್ ಲಂಚ ಪಡೆಯುವಾಗ ಕ್ಯಾಮೆರಾದ ಕಣ್ಣಲ್ಲಿ ಸಿಕ್ಕಿ ಹಾಕಿಕೊಂಡಿದ್ದರು. ತಕ್ಷಣ ವಾಜಪೇಯಿ ಅವರು ಲಕ್ಷ್ಮಣ್ ಅವರಿಂದ ರಾಜೀನಾಮೆ ಕೊಡಿಸಿದ್ದರು. ವಾಜಪೇಯಿ ನೇತೃತ್ವದಲ್ಲಿ ಬಿಜೆಪಿ ಇದ್ದಾಗ, ಬಿಎಸ್​ವೈ, ಜನಾರ್ದನ ರೆಡ್ಡಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕೃಷ್ಣಯ್ಯ ಶೆಟ್ಟಿ, ಸಂಪಂಗಿ ಮೊದಲಾದವರು ಭ್ರಷ್ಟಾಚಾರದ ಆರೋಪದಲ್ಲಿ ಸಚಿವ ಸ್ಥಾನವನ್ನು ಕಳೆದುಕೊಂಡು ಜೈಲುಪಾಲಾದರಲ್ಲಾ? ಈಗ್ಯಾಕೆ ಹೀಗೆ ಆಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಈಜುಕೊಳದಲ್ಲಿ ಮಹಿಳೆಯರಿಗೆ ಟಾಪ್‌ಲೆಸ್ ಆಗಿ ಈಜಾಡಲು ಅನುಮತಿ ನೀಡಿದ ಬರ್ಲಿನ್!
ಸದನದಲ್ಲಿ ಬ್ಲೂಫಿಲ್ಮ್ ನೋಡಿದ್ದ ಕಾರಣಕ್ಕಾಗಿ ಮೂವರು ನಾಯಕರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಅತ್ಯಾಚಾರದ ಆರೋಪ ಹೊತ್ತಿದ್ದ ಇನ್ನೊಬ್ಬ ಸಚಿವರೂ ರಾಜೀನಾಮೆ ನೀಡಬೇಕಾಯಿತು. ಅದು ವಾಜಪೇಯಿ ಕಾಲ, ಇದು ಮೋದಿ ಕಾಲವೇ? ಎಂದು ನರೇಂದ್ರ ಮೋದಿ ಅವರಿಗೆ ಪ್ರಶ್ನೆಗಳ ಸರಿಮಳೆ ಸುರಿಸಿದ್ದಾರೆ.
ಕಳೆದ ಬಾರಿಯ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ 10% ಕಮಿಷನ್ ಸರ್ಕಾರ ಎಂದು ಆಧಾರರಹಿತ ಆರೋಪ ಮಾಡಿದ್ದಿರಿ. ಈ ಬಾರಿ ನಿಮ್ಮ ಸರ್ಕಾರ 40% ಕಮಿಷನ್ ಕೇಳಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಗುತ್ತಿಗೆದಾರರು ನಿಮಗೆ ಪತ್ರ ಬರೆದರೂ ಯಾಕೆ ಉತ್ತರಿಸುತ್ತಿಲ್ಲ. ನಾನು ಸಿಎಂ ಆಗಿದ್ದಾಗ ಸಚಿವ ಸಂತೋಷ್ ಲಾಡ್ ಮೇಲೆ ಅಕ್ರಮ ಗಣಿಗಾರಿಕೆಯ ಆರೋಪ ಕೇಳಿ ಬಂದಿದ್ದಕ್ಕಾಗಿ ರಾಜೀನಾಮೆ ಕೊಡಿಸಿದ್ದೆ ಎಂಟು ಆರೋಪಗಳನ್ನು ಧೈರ್ಯದಿಂದ ಸಿಬಿಐ ತನಿಖೆಗೆ ಒಪ್ಪಿಸಿದ್ದೆ. ಕಾಂಗ್ರೆಸ್ ದೆಹಲಿಯ ಹೈಕಮಾಂಡ್‌ಗೆ ಎಟಿಎಂ ಎಂದು ಗೇಲಿ ಮಾಡಿದ್ದೀರಿ. ನಿಮ್ಮ ಸಚಿವರು ಮತ್ತು ಶಾಸಕರು ಕೋಟಿ ಕೋಟಿ ಲೂಟಿ ಮಾಡಿದ್ದಾರೆ. ನಿರ್ಭೀತಿಯಿಂದ ಇದ್ದಾರೆ ಎಂದರೆ ರಾಜ್ಯ ನಿಮ್ಮ ಪಕ್ಷದ ಎಟಿಎಂ ಎಂದು ಅರ್ಥೈಸಬಹುದಾ? #AnswerMadiModi ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಸರಣಿ ಪ್ರಶ್ನೆ ಕೇಳಿದ್ದಾರೆ.
ಕಳೆದ ಬಾರಿಯ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ 10% ಕಮಿಷನ್ ಸರ್ಕಾರ ಎಂದು ಆಧಾರರಹಿತ ಆರೋಪ ಮಾಡಿದ್ದಿರಿ. ಈ ಬಾರಿ ನಿಮ್ಮ ಸರ್ಕಾರ 40% ಕಮಿಷನ್ ಕೇಳಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಗುತ್ತಿಗೆದಾರರು ನಿಮಗೆ ಪತ್ರ ಬರೆದರೂ ಯಾಕೆ ಉತ್ತರಿಸುತ್ತಿಲ್ಲ@narendramodiಜೀ? 7/10#AnswerMadiModi
— Siddaramaiah (@siddaramaiah)March 12, 2023

ಪರಕೀಯ ಮಹಿಳೆಗೆ ಜನಿಸಿದ ಮಗ ದೇಶಭಕ್ತನಾಗಲು ಸಾಧ್ಯವಿಲ್ಲ; ರಾಹುಲ್​ ಗಾಂಧಿ ವಿರುದ್ಧ ಪ್ರಜ್ಞಾ ಠಾಕೂರ್ ವಾಗ್ದಾಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
