​ಉಡುಪಿ:ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ದಲಿತ ಸಿಎಂ ವಿಷಯವನ್ನು ತೇಲಿಬಿಟ್ಟಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಈಗ ಅದೇ ವಿಷಯವನ್ನೇ ಮುಂದಿಟ್ಟುಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್​ ಪ್ರತ್ಯುತ್ತರ ನೀಡಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿರುವ ಅವರು ಈ ವಿಷಯ ತಿಳಿಸಿದರು.
ತಾಕತ್​ ಇದ್ದರೆ ದಲಿತರೊಬ್ಬರನ್ನು ಸಿಎಂ ಮಾಡಿ ಎಂದು ಸವಾಲೆಸಿರುವ ಸಿದ್ದರಾಮಯ್ಯ ವಿರುದ್ಧ ನಳಿನ್​ಕುಮಾರ್ ಕಟೀಲ್​ ಈಗ ದಲಿತ ಅಸ್ತ್ರವನ್ನೇ ಬಿಟ್ಟಿದ್ದಾರೆ. ಸಿದ್ದರಾಮಯ್ಯ ಹಿಂದೆ ಅಹಿಂದ ಹೋರಾಟ ಮಾಡಿದವರು. ಅಹಿಂದ ಹೋರಾಟ ಮಾಡಿ ಮುಖ್ಯಮಂತ್ರಿ ಕೂಡ ಆದವರು. ಆದರೆ ಸಿಎಂ ಆದಮೇಲೆ ಅಹಿಂದವನ್ನು ಮರೆತರು. ಮುಖ್ಯಮಂತ್ರಿ ಆಗಿ ಅವರು ಹಿಂದುಳಿದ ವರ್ಗಕ್ಕೆ ಏನೂ ಮಾಡಿಲ್ಲ. ಮಾತ್ರವಲ್ಲ ದಲಿತ ಮುಖ್ಯಮಂತ್ರಿ ಎಂಬ ಚರ್ಚೆಯನ್ನೇ ಮುಚ್ಚಿಹಾಕಿದರು ಎಂದು ನಳಿನ್​ಕುಮಾರ್ ಕಟೀಲ್ ಹೇಳಿದರು.
ಇದನ್ನೂ ಓದಿ:ಹೊಯ್ಸಳ-ಚೀತಾಗೆ ಇನ್ನು ಹೊಸ ಕಮಾಂಡ್​; ಹತ್ತು ನಿಮಿಷಕ್ಕಿಂತ ಹೆಚ್ಚು ಕಾಲ ಒಂದೇ ಕಡೆ ಇರುವಂತಿಲ್ಲ!
ವಾಜಪೇಯಿ ಸರ್ಕಾರ ಮುಸ್ಲಿಂ ಬಂಧುವನ್ನು ರಾಷ್ಟ್ರಪತಿ ಮಾಡಿದೆ, ನರೇಂದ್ರ ಮೋದಿ ದಲಿತರನ್ನೇ ರಾಷ್ಟ್ರಪತಿ ಆಗಿಸಿದ್ದಾರೆ. ಯಡಿಯೂರಪ್ಪ ಅವರು ಗೋವಿಂದ ಕಾರಜೋಳ ಅವರನ್ನು ಉಪ ಮುಖ್ಯಮಂತ್ರಿ ಮಾಡಿದ್ದಾರೆ. ಈಗ ಕೇಂದ್ರದಲ್ಲಿ ನಾರಾಯಣ ಸ್ವಾಮಿ ಸಚಿವರಾಗಿದ್ದಾರೆ. ಕೇಂದ್ರ ಸಂಪುಟದಲ್ಲಿ ಶೇ. 30 ಎಸ್​-ಎಸ್​ಟಿ ಮಂತ್ರಿಗಳಿದ್ದಾರೆ. ಆದರೆ ಕಾಂಗ್ರೆಸ್​ ದಲಿತರಿಗೆ ಏನು ಮಾಡಿದೆ ಎಂದು ಕಟೀಲ್ ಪ್ರಶ್ನೆ ಮಾಡಿದ್ದಾರೆ.
ಮಾತ್ರವಲ್ಲ, ಕಾಂಗ್ರೆಸ್​ಗಾಗಿ ಹಗಲಿರುಳು ಕೆಲಸ ಮಾಡಿರುವ ಜಿ. ಪರಮೇಶ್ವರ್ ಅವರನ್ನು ಸಿದ್ದರಾಮಯ್ಯ ಮೂಲೆಗುಂಪು ಮಾಡಿದರು. ಪರಮೇಶ್ವರ ಹಾಗೂ ಸಿದ್ದರಾಮಯ್ಯ ಅವರನ್ನು ಸೋಲಿಸಿದ ಇತಿಹಾಸ ಅವರಿಗಿದೆ ಎನ್ನುವ ಮೂಲಕ ಇಬ್ಬರು ಪ್ರಬಲ ದಲಿತ ನಾಯಕರಿಗೆ ಸಿದ್ದರಾಮಯ್ಯ ಅನ್ಯಾಯ ಎಸಗಿದ್ದಾರೆ ಎಂಬುದನ್ನು ನಳಿನ್​ ಕುಮಾರ್ ಕಟೀಲ್ ಪರೋಕ್ಷವಾಗಿ ಹೇಳಿದ್ದಾರೆ.
ಇದನ್ನೂ ಓದಿ:ನಾನು-ನಾನು ಎನ್ನುವವರು ಸಿಎಂ ಆಗಲ್ಲ: ಕಂದಾಯ ಸಚಿವ ಆರ್. ಅಶೋಕ್
ನನಗೆ ಯಾವುದೇ ಮಾಹಿತಿ ಇಲ್ಲ:ಮುಂದಿನ ಸಿಎಂ ಕುರಿತ ಹೈಕಮಾಂಡ್​ ಸಂದೇಶದ ಕುರಿತು ಮಾತನಾಡಿದ ಅವರು, ನಾನು ಬಿಜೆಪಿ ರಾಜ್ಯಾಧ್ಯಕ್ಷ, ಇವತ್ತಿನವರೆಗೆ ನನಗೆ ಯಾವುದೇ ಮಾಹಿತಿ ಬಂದಿಲ್ಲ. ನಾನು ಕೇವಲ ಮಾಧ್ಯಮಗಳಿಂದ ಈ ವಿಚಾರ ತಿಳಿದುಕೊಂಡಿದ್ದೇನೆ, ಈ ಬಗ್ಗೆ ನನಗೆ ಹೇಳಲು ಏನೂ ಇಲ್ಲ. ಸದ್ಯ ರಾಜ್ಯದ ಟ್ರ್ಯಾಕ್ಟರ್ ಈಗ ಯಡಿಯೂರಪ್ಪ ಬಿಡುತ್ತಿದ್ದಾರೆ ಎಂದು ಕಟೀಲ್ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 3 =
Remember me
