ಬೆಂಗಳೂರು:ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದು, ಬಿಜೆಪಿ ಹಾಗೂ ಜೆಡಿಎಸ್​ಗೆ ಭಾರೀ ಮುಖಭಂಗವಾಗಿದೆ. ಇನ್ನು ಈ ಕುರಿತು ಪ್ರತಿಕ್ರಿಯಸಿರುವ ಸಿಎಂ ಸಿದ್ದರಾಮಯ್ಯ ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ ಎಂದು ಟೀಕಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಸಿಎಂ ಸ್ವಾರ್ಥ ಸಾಧನೆಯೊಂದೇ ಗುರಿಯಾಗಿರುವ ಈ ಅಪವಿತ್ರ ಮೈತ್ರಿಗೆ “ಗ್ಯಾರಂಟಿ, ವಾರೆಂಟಿ” ಯಾವುದೂ ಇಲ್ಲ ಎಂದು ಲೇವಡಿಯಾಡಿದ್ದಾರೆ.
ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ. ಬಿಜೆಪಿ ಮತ್ತು ಜೆಡಿಎಸ್​​ ಪಕ್ಷಗಳು ಒಟ್ಟಾಗಿ ತಮ್ಮ‌ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಹೊರತಾಗಿಯೂ ಸೋಲು ಕಂಡಿವೆ. ಇದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್​ ಷಾ ಅವರ ನಡುವಿನ ಮೈತ್ರಿಯೇ ಹೊರತು ಎರಡೂ ಪಕ್ಷಗಳ ಮತದಾರರ ನಡುವಿನ ಮೈತ್ರಿಯಲ್ಲ ಎಂಬುದು ಸಾಬೀತಾಗಿದೆ.
ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆಗಳು.ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ.@BJP4Karnatakaಮತ್ತು@JanataDal_Sಪಕ್ಷಗಳು…
ಇದನ್ನೂ ಓದಿ:ಕಾಟೇರ ಬಾಕ್ಸ್​ಆಫೀಸ್​ ಕಲೆಕ್ಷನ್​; ನನಗೆ ನಾಲ್ಕು ನೋಟಿಸ್​ ಬಂದಿದೆ ಎಂದ ರಾಕ್​ಲೈನ್​ ವೆಂಕಟೇಶ್
ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನ ಜಾತ್ಯತೀತ ಮುಖವಾಡ ಕಳಚಿದೆ, ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ. ಕುಟುಂಬದ ಹಿತಕ್ಕಾಗಿ‌ ಕೋಮುವಾದಿಗಳ ಜೊತೆ ಕೈಜೋಡಿಸಿರುವ ಜೆಡಿಎಸ್ ಪಕ್ಷವನ್ನು ಹಾಗೂ ಸದಾಕಾಲ ಕುಟುಂಬ ರಾಜಕಾರಣದ ವಿರುದ್ಧ ಟೀಕೆ ಮಾಡಿ, ಒಂದು ಕುಟುಂಬವೇ ರಾಜಕೀಯ ಪಕ್ಷದಂತಿರುವ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿಯನ್ನು ಮತದಾರ ಬಂಧುಗಳ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.
ಸ್ವಾರ್ಥ ಸಾಧನೆಯೊಂದೇ ಗುರಿಯಾಗಿರುವ ಈ ಅಪವಿತ್ರ ಮೈತ್ರಿಗೆ “ಗ್ಯಾರಂಟಿ, ವಾರೆಂಟಿ” ಯಾವುದೂ ಇಲ್ಲ. ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ಹಾಗೂ ಜೆಡಿಎಸ್​ ಪಕ್ಷಗಳನ್ನು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಕುಟುಕಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
