ಬಾಗಲಕೋಟೆ:ರಾಷ್ಟ್ರ ರಾಜಕಾರಣದಲ್ಲಿ ತೋವ್ರ ಗದ್ದಲ ಎಬ್ಬಿಸಿರುವ ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ತನಿಖಾ ತಂಡಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಪ್ರಜ್ವಲ್​ ಯಾವ ದೇಶದಲ್ಲಿದ್ದರೂ ಹಿಡಿದು ತರುತ್ತೇವೆ ಅದು ನಮ್ಮ ಜವಾಬ್ದಾರಿ ಎಂದು ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್​ ರೇವಣ್ಣ ಅವರನ್ನು ಕೇಂದ್ರ ಸರ್ಕಾರವೇ ರಕ್ಷಿಸುತ್ತಿದೆ. ಆತನ ವಿರುದ್ಧ ಯಾಕೆ ಕ್ರಮ ಜರುಗಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ರಾಹುಲ್​ ಗಾಂಧಿ ಪ್ರಧಾನಿಯಾದರೆ ದೇಶವನ್ನು ಫಿಟ್​ ಆಗಿಡಲಿದ್ದಾರೆ: ನಟ ಶಿವರಾಜ್​ಕುಮಾರ್
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್​ ರೇವಣ್ಣ ಎಲ್ಲೇ ಇದ್ದರೂ ಹಿಡಿದು ತರುತ್ತೇವೆ. ಪ್ರಜ್ವಲ್​ ರೇವಣ್ಣ ಪಾಸ್​ಪೋರ್ಟ್​ ರದ್ಧತಿಗೆ ಸಂಬಂಧಿಸಿದಂತೆ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಆದರೆ, ಅವರು ಪಾಸ್​ಪೋರ್ಟ್​ ರದ್ದು ಮಾಡುವ ಬದಲು ರಕ್ಷಣೆ ಮಾಡುತ್ತಿದ್ದಾರೆ. ಪ್ರಜ್ವಲ್ ಪ್ರಕರಣ ಮೊದಲೇ ಬಿಜೆಪಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡರು. ಈಗ ಯಾಕೆ ಕ್ರಮ ವಹಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಚುನಾವಣೆ ಪ್ರಚಾರದ ವೇಳೆ ಎಚ್​.ಡಿ. ಕುಮಾರಸ್ವಾಮಿ ಅವರು ನನ್ನ ಮಗ ನಿಖಿಲ್​ ಬೇರೆ ಅಲ್ಲ ಪ್ರಜ್ವಲ್​ ಬೇರೆ ಅಲ್ಲ ಎಂದಿದ್ದರು. ಆದರೆ, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅವರು ಅವರ ಕುಟುಂಬವೇ ಬೇರೆ ನಮ್ಮ ಕುಟುಂಬ ಬೇರೆ ಅಂತಿದ್ದಾರೆ. ಇದು ಹೇಗೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:1 × one =
Remember me
