ಬೆಳಗಾವಿ:ಕಳೆದ ಮೂರು ವರ್ಷಗಳಿಂದ ಬಿಲ್​ ಕೊಡದಿದ್ದಾಗ ಸುಮ್ಮನಿದ್ದ ಗುತ್ತಿಗೆದಾರರು ಈಗ ಯಾಕೆ ಆರೋಪ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಅವರಿಗೆ ನೈತಿಕತೆ ಇದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಈ ಕುರಿತು ಮಾತನಾಡಿದ ಸಿಎಂ ಒಳ್ಳೆಯ ಕೆಲಸ ಮಾಡಿದವರಿಗೆ ನಾವು ತೊಂದರೆ ಕೊಡುವುದಿಲ್ಲ. ಆದರೆ, ಕಳಪೆ ಕಾಮಗಾರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಗುತ್ತಿಗೆದಾರರ ಬಿಲ್​ ಬಾಕಿ ಉಳಿದಿರುವುದು ಯಾರ ಸರ್ಕಾರದ ಅವಧಿಯದ್ದು. ಹಿಂದಿನ ಸರ್ಕಾರ ಗುತ್ತಿಗೆದಾರರ ಬಿಲ್​​ಗಳನ್ನು ಬಾಕಿ ಉಳಿಸಿಕೊಂಡಿದೆ. ಕಳೆದ ಎರಡ್ಮೂರು ವರ್ಷಗಳಿಂದ ಬಿಲ್​ ಯಾಕೆ ಪಾವತಿಸಿಲ್ಲ. ಕಳೆದ ಮೂರು ವರ್ಷಗಳಿಂದ ಬಿಲ್​ ಕೊಡದಿದ್ದಾಗ ಸುಮ್ಮನಿದ್ದ ಗುತ್ತಿಗೆದಾರರು ಈಗ ಯಾಕೆ ಆರೋಪ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಆಗಸ್ಟ್​ 27ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ನಾವು ಅಧಿಕಾರಕ್ಕೆ ಬಂದು ಇನ್ನೂ ಮೂರು ತಿಂಗಳೂ ಕೂಡ ಕಳೆದಿಲ್ಲ. ಶೇ. 40ರಷ್ಟು ಕಮಿಷನ್​ ಬಗ್ಗೆ ನಾವೇ ಆರೋಪಿಸಿದ್ದೆವು. ಗುತ್ತಿಗೆದಾರರು ಕೈಗೊಂಡ ಕಾಮಗಾರಿಗಳ ಕುರಿತು ತನಿಖೆ ನಡೆಸುವಂತೆ ನಾಲ್ಕು ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ. ಅಧಿಕಾರಿಗಳು ನೀಡಿದ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರು ಮರುತನಿಖೆ ಮಾಡಿಸುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಕಾನೂನು ಇಲಾಖೆಯೊಂದಿಗೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
