ಬೆಂಗಳೂರು:ಇಂದು ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇಶದಲ್ಲಿರುವ ಬಹುತೇಕ ಅಣೆಕಟ್ಟುಗಳು ನಿರ್ಮಾಣವಾಗಿದ್ದು ನೆಹರೂ ಅವಧಿಯಲ್ಲಿ. ಕಾಂಗ್ರೆಸ್ ಏನೂ ಮಾಡಿಲ್ಲ ಎನ್ನುವ ನರೇಂದ್ರ ಮೋದಿ ಅವರು ಇವತ್ತಿನವರೆಗೂ ಒಂದೇ ಒಂದು ಅಣೆಕಟ್ಟನ್ನಾಗಲೀ, ಸಾರ್ವಜನಿಕ ಉದ್ದಿಮೆಯನ್ನಾಗಲೀ ಸ್ಥಾಪಿಸಲಿಲ್ಲ. ಇವರಿಗೆ ನೆಹರೂ ಬಗ್ಗೆ ಮಾತನಾಡುವ ಯೋಗ್ಯತೆ ಏನಿದೆ? ಎಂದರು.
ಇದನ್ನೂ ಓದಿ:ಇಂಥವರನ್ನು ಆಯ್ಕೆ ಮಾಡಿಕೊಳ್ಳುವುದೇ ವ್ಯರ್ಥ! ಈ ಮಾತು ಯಾರಿಗೆ ಹೇಳಿದ್ದು? ಗವಾಸ್ಕರ್​ ವಿರುದ್ಧ ಫ್ಯಾನ್ಸ್​ ಕಿಡಿ
“ನೆಹರೂ ಮತ್ತು ಭಾರತೀಯರು ಬ್ರಿಟಿಷರ ವಿರುದ್ಧ ಹೋರಾಡುತ್ತಾ ಜೈಲು ವಾಸ ಅನುಭವಿಸುತ್ತಿದ್ದಾಗ ಆರ್​ಎಸ್ಎಸ್ ಮತ್ತು ಸಂಘ ಪರಿವಾರ ಬ್ರಿಟಿಷರ ವಿರುದ್ಧ ನೆಪಕ್ಕೂ ಸೊಲ್ಲೆತ್ತಲಿಲ್ಲ. ಸ್ವಾತಂತ್ರ್ಯ ಹೋರಾಟದ ಚರಿತ್ರೆ ಇರುವ ನಮಗೆ ಬಿಜೆಪಿ ನಾಯಕರು ದೇಶಭಕ್ತಿಯ ಪಾಠ ಮಾಡುತ್ತಾ ನಗೆಪಾಟಲಿಗೀಡಾಗಿದ್ದಾರೆ. ತಮ್ಮನ್ನು ತೀವ್ರವಾಗಿ ಟೀಕಿಸುತ್ತಿದ್ದ ಲೋಹಿಯಾ ಅವರ ಮಾತನ್ನು ಪಾರ್ಲಿಮೆಂಟಿನಲ್ಲಿ ಕುಳಿತು ನೆಹರೂ ಆಲಿಸುತ್ತಿದ್ದರು, ಸ್ಪಂದಿಸುತ್ತಿದ್ದರು‌. ಇದು ನೆಹರೂ ರೂಢಿಸಿಕೊಂಡಿದ್ದ ರಾಜಕೀಯ ಮೌಲ್ಯ” ಎಂದು ಹೇಳಿದರು.
“ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಜೆಪಿ, ಎನ್​ಡಿಎ ಸೋಲು ಖಚಿತವಾಗಿ ಗೊತ್ತಾಗಿದೆ. ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ. ದೇವರೇ ನನ್ನನ್ನು ಕಳುಹಿಸಿದ್ದು ಎಂದು ಮಾತಾಡುತ್ತಿದ್ದಾರೆ. ಸೋಲಿನ ಸುಳಿವು ಮೋದಿಯವರನ್ನು ಈ ಮಟ್ಟಕ್ಕೆ ಮಾಡಿಟ್ಟಿದೆ. ನಮ್ಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶವನ್ನು ಮಾರ್ಪಡಿಸಲು ಬಿಜೆಪಿ ಮತ್ತು ಮೋದಿ ಯತ್ನಿಸುತ್ತಿದ್ದು, ಇದಕ್ಕೆ ಭಾರತೀಯರು ಅವಕಾಶ ಕೊಡುವುದಿಲ್ಲ ಎಂಬ ನಂಬಿಕೆ ನನಗಿದೆ” ಎಂದರು.
ಇದನ್ನೂ ಓದಿ:ಕಡೆಗೂ ಮೈದಾನದಲ್ಲಿ ನಗು ಚೆಲ್ಲಿದ ಸುನಿಲ್ ನರೈನ್​! ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮದ ವಿಡಿಯೋ ವೈರಲ್
“ಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ. ಸಂವಿಧಾನದ ಆಶಯಗಳಲ್ಲಿ ದೇಶವನ್ನು ಮುನ್ನಡೆಸುವುದು ಕಾಂಗ್ರೆಸ್ ಮಾತ್ರ. ನೆಹರೂ, ಇಂದಿರಾಗಾಂಧಿ ಅವಧಿಯಲ್ಲಿ ಭೂ ಸುಧಾರಣೆ ಮಾಡಿದರು‌, ಕೈಗಾರಿಕೆಗಳನ್ನು ಸ್ಥಾಪಿಸಿದರು. ಈಗ ಬಿಜೆಪಿ ಇದಕ್ಕೆ ವಿರುದ್ಧವಾದ ಕೆಲಸ ಮಾಡುತ್ತಿದೆ. ರೈತರಿಂದ ಭೂಮಿ ಕಿತ್ತುಕೊಳ್ಳುವುದು, ದೇಶದ ಕೈಗಾರಿಕೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದು ಬಿಜೆಪಿಯ ಸಾಧನೆಯಾಗಿದೆ. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಭಾರತ ಬಹುತ್ವದ ದೇಶ. ಈ ಬಹುತ್ವದ ದೇಶವನ್ನು ನಾಶ ಮಾಡಿ ಬಿಜೆಪಿಯ ಮೂಗಿನ ನೇರದ ಹಿಂದೂ ದೇಶ ಮಾಡುವುದು ಅಸಾಧ್ಯ. ಈ ದೇಶ ಪ್ರತಿಯೊಬ್ಬ ಭಾರತೀಯರಿಗೆ ಸೇರಿದ್ದು” ಎಂದಿದ್ದಾರೆ.
ಮುಂದಿನ ವರ್ಷ ಈ 4 ಸ್ಟಾರ್​ ಆಟಗಾರರನ್ನು ಕೈಬಿಡಲಿದೆ ಆರ್​ಸಿಬಿ ಫ್ರಾಂಚೈಸಿ! ಫ್ಯಾನ್ಸ್​ ಕಂಗಾಲು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 6 =
Remember me
