ಬೆಂಗಳೂರು:ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯಲ್ಲಿ ಸೋಲಿನ ಭಯ ಹುಟ್ಟಿಕೊಂಡಿದೆ. ಸಾರ್ವಜನಿಕವಾಗಿ ಎದೆಯುಬ್ಬಿಸಿ ಏನೇ ಕೊಚ್ಚಿಕೊಂಡರೂ ಆಂತರ್ಯದಲ್ಲಿರುವ ಆತ್ಮಸಾಕ್ಷಿ ಸತ್ಯವನ್ನೇ ಹೇಳುತ್ತದೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ@narendramodiನೇತೃತ್ವದ ಕೇಂದ್ರ@BJP4Indiaಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ…
ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶವಾಗಿದೆ. ನಮ್ಮ ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳಾದ ಸಾಮಾನ್ಯ ಜನರಿಂದ ಸಂಗ್ರಹವಾಗಿರುವ ಹಣ, ಅದರಲ್ಲಿರುವುದು ದೊಡ್ಡ ಉದ್ಯಮಪತಿಗಳದ್ದಲ್ಲ. ಹೀಗಿದ್ದರೂ ಯಾಕೆ ಇಂತಹ ಕ್ರಮ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿ ಸರಸ ಸಲ್ಲಾಪ; ನ್ಯಾಯ ಕೊಡಿಸುವಂತೆ ದೂರು
ಚುನಾವಣಾ ಬಾಂಡ್ ಗಳ ಮೂಲಕ ಉದ್ಯಮಿಗಳಿಂದ ಸಾವಿರಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿ ತಮ್ಮ ಖಾತೆಗೆ ತುಂಬಿಸಿಕೊಂಡಿರುವ ಭಾರತೀಯ ಜನತಾ ಪಕ್ಷದ ಬಗ್ಗೆ ಚುನಾವಣಾ ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಆಯೋಗ ತಕ್ಷಣ ಇದನ್ನು ಗಮನಿಸಿ ನಮ್ಮ ಪಕ್ಷಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು.
“ಪ್ರಧಾನಿ@narendramodiಅವರು ಒಂದು ಮುಖವಾಡ ಅಷ್ಟೆ, ಅದರ ಹಿಂದೆ ಸರ್ಕಾರವನ್ನು ಮುನ್ನಡೆಸುವ ಒಂದು “ದುಷ್ಟ ಶಕ್ತಿ’’ ಇದೆ ಎಂದು ನಮ್ಮ ನಾಯಕರಾಗಿರುವ@RahulGandhiಅವರು ಹೇಳಿರುವುದು ಸರಿಯಾಗಿದೆ. ಆ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು…
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯಲ್ಲಿ ಸೋಲಿನ ಭಯ ಹುಟ್ಟಿಕೊಂಡಿದೆ. ಸಾರ್ವಜನಿಕವಾಗಿ ಎದೆಯುಬ್ಬಿಸಿ ಏನೇ ಕೊಚ್ಚಿಕೊಂಡರೂ ಆಂತರ್ಯದಲ್ಲಿರುವ ಆತ್ಮಸಾಕ್ಷಿ ಸತ್ಯವನ್ನೇ ಹೇಳುತ್ತದೆ. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಾಯಲ್ಲಿ ಹೇಳಿಕೊಂಡರೂ ವಾಸ್ತವದ ಸ್ಥಿತಿ ಏನೆನ್ನುವುದು ನರೇಂದ್ರ ಮೋದಿಗೆ ಗೊತ್ತಿದೆ. ಈ ಭಯದ ಕಾರಣದಿಂದಲೇ ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುವ ಸೇಡಿನ ಕ್ರಮಕ್ಕೆ ಮುಂದಾಗಿದೆ.
“ಪ್ರಧಾನಿ ನರೇಂದ್ರಮೋದಿಯವರು ಒಂದು ಮುಖವಾಡ ಅಷ್ಟೆ, ಅದರ ಹಿಂದೆ ಸರ್ಕಾರವನ್ನು ಮನ್ನಡೆಸವ ಒಂದು “ದುಷ್ಟ ಶಕ್ತಿ’’ ಇದೆ ಎಂದು ನಮ್ಮ ನಾಯಕರಾಗಿರುವ ರಾಹುಲ್ ಗಾಂಧಿಯವರು ಹೇಳಿರುವುದು ಸರಿಯಾಗಿದೆ. ಈ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + eleven =
Remember me
