ಮಧುಗಿರಿ:ಇಂಡಿಯಾ ಎಂಬುದನ್ನು ಭಾರತ ಎಂದು ಮರುನಾಮಕರಣ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂಬ ವಿಚಾರ ಮುನ್ನೆಲೆಗೆ ಬಂದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಇಂಥ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:ಮಕ್ಕಳಿಗೆ ಸಂಸ್ಕೃತಿಯನ್ನು ಪರಿಚಯಿಸಿ: ವ್ಯವಸ್ಥಾಪಕ ನಿರ್ದೇಶಕ ವಿ.ನಂಜುಂಡಯ್ಯ ಕಿವಿಮಾತು
ಮಧುಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ದೇಶದ ಸಂವಿಧಾನವನ್ನು 26ನೇ ನವೆಂಬರ್ 1949 ರಂದು ಅಂಗೀಕಾರ ಮಾಡಿದ್ದಾರೆ. ಅಂದಿನಿಂದ ಭಾರತವನ್ನು ಇಂಡಿಯಾ ಎಂದೇ ಕರೆಯಲಾಗಿದೆ. ಈಗ ಬದಲಾವಣೆ ಮಾಡುವ ಅಗತ್ಯವೇನು ಎಂದು ಹೇಳಿದರು.
ಸಂವಿಧಾನದ ಪೀಠಿಕೆಯಲ್ಲಿಯೂ ಭಾರತದ ಪ್ರಜೆಗಳಾದ ನಾವು ಎಂದೇ ಹೇಳಿದ್ದೇವೆ. ಈಗ ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಿಸಿದರು.
ಇದನ್ನೂ ಓದಿ:ಕೃಷ್ಣಾರ್ಜುನರ ಸ್ನೇಹ ಅಮೋಘ: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಅಭಿಮತ
ಸದ್ಯ ಭಾರತ ಎಂದು ಮರನಾಮಕರಣ ಮಾಡುವ ವಿಚಾರ ರಾಜ್ಯ ರಾಜಕೀಯ ವಲಯದಲ್ಲಿ ಸೇರಿದಂತೆ ದೇಶದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಪರ-ವಿರೋಧ ಹೇಳಿಕೆಗಳು ವ್ಯಾಪಕವಾಗಿ ವ್ಯಕ್ತವಾಗುತ್ತಿದೆ.
‘ಓಜಿ’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಬಿಗ್​ ಬಾಸ್ ಸೀಸನ್​ 7ರ​ ಬೆಡಗಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × four =
Remember me
