ಬೆಂಗಳೂರು:ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಆದೇಶ ಬಂದಿರುವುದಕ್ಕೆ ಸಂಬಂಧಿಸಿದಂತೆ ಇಂದು ನಡೆದ ಸರ್ವಪಕ್ಷ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, 11-7-2024ರಂದು ಕಾವೇರಿ ನೀರು ನಿಯಂತ್ರಣ ಸಮಿತಿ 3ನೇ ಸಭೆ ನಡೆದು, ಜುಲೈ 12ರಂದು ಈ ತಿಂಗಳ ಕಡೆಯವರೆಗೆ ಸುಮಾರು 20 ದಿನ, ಪ್ರತಿದಿನ 1 ಟಿಎಂಸಿ ಯಂತೆ 20 ಟಿಎಂಸಿ ನೀರು ಬಿಡಲು ಆದೇಶಿಸಿದ್ದಾರೆ ಎಂದರು.
ಇದನ್ನೂ ಓದಿ:ಮುಂದಿನ ವರ್ಷದಿಂದ ಆನ್‌ಲೈನ್ ಸಿಇಟಿ ನಡೆಸಲು ಚಿಂತನೆ: ಸಚಿವ ಡಾ. ಎಂ.ಸಿ. ಸುಧಾಕರ್
ಸಾಮಾನ್ಯ ವರ್ಷದಲ್ಲಿ ಜೂನ್ ತಿಂಗಳಲ್ಲಿ 9.4 ಟಿಎಂಸಿ, ಜುಲೈನಲ್ಲಿ 31.24 ಟಿಎಂಸಿ ನೀರು ಬಿಡಬೇಕಾಗಿದೆ. ಅಂದರೆ ಒಟ್ಟು 40.43 ಟಿಎಂಸಿ ಬಿಡಬೇಕಾಗಿದೆ. ಇಲ್ಲಿಯವರೆಗೂ 5 ಟಿಎಂಸಿಗೂ ಹೆಚ್ಚು ನೀರು ಬಿಡಲು ಸಾಧ್ಯವಾಗಿದೆ. ಕಾವೇರಿ ತೀರದ ಸಚಿವರು, ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಜುಲೈ 12ರಂದು ಸಭೆ ನಡೆಸಿ ನೀರು ಬಿಡದೇ ಇರಲು ಮತ್ತು ಸರ್ವಪಕ್ಷ ಸಭೆ ಕರೆಯಲು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದೆವು ಎಂದರು.
ಈ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಬಿಜೆಪಿ, ಜೆಡಿಎಸ್, ರೈತ ಸಂಘದವರು, ಕಾನೂನು ತಂಡದ ಮುಖ್ಯಸ್ಥರಾದ ಮೋಹನ್ ಕಾತರಕಿ ಅವರು ಸೇರಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಮ್ಮ ಕಾವೇರಿ ತೀರದ ಜಲಾಶಯಗಳಲ್ಲಿ 63% ಮಾತ್ರ ಭರ್ತಿ ನೀರಿದೆ. ಕಬಿನಿ ಜಲಾಶಯ ಭರ್ತಿಯಾಗಿದ್ದು, ಕಳೆದ ಎರಡು ದಿನ 20 ಸಾವಿರ, 19 ಸಾವಿರ ಹಾಗೂ ಇಂದು 13 ಸಾವಿರ ಕ್ಯೂಸೆಕ್ಸ್ ನೀರು ಹರಿದು ಹೋಗಿದೆ. ಜಲಾಶಯದ ಸುರಕ್ಷತೆಗಾಗಿ ಶೇಖರಿಸಿಡಲು ಸಾಧ್ಯವಾಗದ ನೀರು ಮಾತ್ರ ಹರಿದುಹೋಗಿದೆ ಎಂದು ಹೇಳಿದರು.
ಇದನ್ನೂ ಓದಿ:ಅರಿಯಡ್ಕದಲ್ಲಿ ಸುಂಟರಗಾಳಿ ಅವಾಂತರ : 2 ಮನೆ ನಾಶ : ಹಲವು ನಿವಾಸಗಳಿಗೆ ಹಾನಿ
ವಕೀಲರ ತಂಡದ ಸಲಹೆ ಪ್ರಕಾರ ಹೆಚ್ಚು ಮಳೆ ಬಿದ್ದರೆ ಮಾತ್ರ ಮಳೆ ಪ್ರಮಾಣಕ್ಕೆ ತಕ್ಕಂತೆ, ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕಾಗುತ್ತದೆ. ಇದರ ಜೊತೆಗೆ ಮೇಲ್ಮನವಿ ಹಾಕೋಣ. ನಾವು ಮೊಂಡಾಟ ಮಾಡುತ್ತಿದ್ದೇವೆ ಎಂದು ಕಾವೇರಿ ನೀರು ನಿರ್ವಹಣಾ ಸಮಿತಿಗೆ ಅನ್ನಿಸಬಾರದು ಎನ್ನುವ ಸಲಹೆ ಬಂದಿದೆ ಎಂದು ಹೇಳಿದರು.
5 ಕೋಟಿ ಕೊಡ್ತೀವಿ ಕೇಸ್​ ವಾಪಾಸ್​ ತಗೋ ಅಂತಾರೆ! ಪೊಲೀಸ್​ ಠಾಣೆಯಲ್ಲಿ ಲಾವಣ್ಯ ಕಣ್ಣೀರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + four =
Remember me
