ಮೈಸೂರು:ಜೆಡಿಎಸ್ ಹಾಗೂ ಬಿಜೆಪಿ ಜತೆಗೆ ನಮ್ಮ ಪಕ್ಷದ ಕೆಲವರು ಸೇರಿಕೊಂಡು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಿದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
ಬಾದಾಮಿಯಲ್ಲಿ ಗೆಲ್ಲದಿದ್ದರೆ ನನ್ನ ರಾಜಕೀಯ ಭವಿಷ್ಯವೇ ಮಂಕಾಗಿ ಹೋಗುತ್ತಿತ್ತು. ನಾನು ಮತ್ತೆ ಚುನಾವಣೆಗೆ ನಿಲ್ತಿನೋ, ಇಲ್ವೋ ಗೊತ್ತಿಲ್ಲ. ಆದರೆ, ಚಾಮುಂಡೇಶ್ವರಿ ಕ್ಷೇತ್ರದ ಸೋಲಿನ ಮರ್ವಘಾತ ಮಾತ್ರ ಸಹಿಸಿಕೊಳ್ಳಲು ಆಗುತ್ತಿಲ್ಲ. ನಾನು ನಾಮಪತ್ರ ಸಲ್ಲಿಸಿದ ಬಳಿಕ ಬಾದಾಮಿಗೆ ಹೋಗಲೇ ಇಲ್ಲ. ಆದರೂ ಅಲ್ಲಿನ ಜನ ನನ್ನನ್ನು ಗೆಲ್ಲಿಸಿದರು. ನೀವು ಸೋಲಿಸಿದ ಹಾಗೆ ಅವರೂ ಸೋಲಿಸಿದ್ದರೆ ಗತಿ ಏನಾಗುತ್ತಿತ್ತು ಎಂದು ಪ್ರಶ್ನಿಸಿದರು. ದೇವರಾಜ ಅರಸು ನಂತರ ಸಿದ್ದರಾಮಯ್ಯ 5 ವರ್ಷ ಮುಗಿಸಿದರು ಎನ್ನುವ ಹೊಟ್ಟೆ ಉರಿ ಎಂದರು.
ಚಾಮರಾಜಪೇಟೆಯಲ್ಲಿ ಸ್ಪರ್ಧೆ?:ಇದು ನನ್ನ ಕೊನೇ ಚುನಾವಣೆ ಎಂದು ಸಿದ್ದರಾಮಯ್ಯ ಘೋಷಿಸಿಕೊಂಡಿದ್ದರು. ಆದರೂ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರು ಎಲ್ಲಿಂದ ಕಣಕ್ಕಿಳಿಯಬೇಕೆಂಬ ಬಗ್ಗೆ ವ್ಯಾಪಕ ಚರ್ಚೆ ಆರಂಭವಾಗಿದೆ. ಸ್ವತಃ ಅವರೇ ಈ ವಿಚಾರವನ್ನು ಚರ್ಚೆಗೆ ಹರಿಯಬಿಟ್ಟಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯ ಅನುಯಾಯಿಯಾಗಿ ಜೆಡಿಎಸ್​ನಿಂದ ಕಾಂಗ್ರೆಸ್​ಗೆ ಜಿಗಿದ ಜಮೀರ್ ಅಹ್ಮದ್ ಹಾಗೂ ಮಾಜಿ ಶಾಸಕ ಆರ್.ವಿ.ದೇವರಾಜ್ ಚಾಮರಾಜಪೇಟೆ ಕ್ಷೇತ್ರದಲ್ಲಿ ಭೂಮಿಕೆ ಸಿದ್ಧಪಡಿಸಲು ತಯಾರಿ ನಡೆಸಿದ್ದಾರೆ. ಸಿದ್ದರಾಮಯ್ಯ ಗಮನಕ್ಕೆ ಈ ವಿಷಯ ತಂದಿದ್ದೇವೆ, ಅವರು ಏನೂ ಹೇಳಿಲ್ಲ. ಅವರು ಸ್ಪಷ್ಟ ಮಾಡಿದರೆ ಅಗತ್ಯ ತಯಾರಿ ಮಾಡುತ್ತೇವೆ ಎಂದು ಜಮೀರ್ ಹೇಳಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
