ಮಂಡ್ಯ:ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾವು ಮುಖ್ಯಮಂತ್ರಿ ಆಗಿದ್ದಾಗ ಟಿಪ್ಪು ಸುಲ್ತಾನ್ ಪರವಹಿಸಿದ್ದಲ್ಲದೆ, ಟಿಪ್ಪು ಜಯಂತಿ ಆಚರಿಸಲು ಹಠಕ್ಕೆ ಬಿದ್ದು ಒಂದು ವರ್ಗದ ತೀವ್ರ ಆಕ್ರೋಶಕ್ಕೆ ಒಳಗಾಗಿದ್ದರು. ಅದಾಗ್ಯೂ ಆಗಾಗ ಟಿಪ್ಪುವನ್ನು ವಹಿಸಿಕೊಂಡು ಮಾತನಾಡುತ್ತಲೇ ಬಂದಿರುವ ಸಿದ್ದರಾಮಯ್ಯ ಇದೀಗ ಮತ್ತೊಮ್ಮೆ ಟಿಪ್ಪು ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
ಈ ಸಲ ಅವರು ನೇರವಾಗಿ ಟಿಪ್ಪು ಸುಲ್ತಾನ್ ಪರವಾಗಿ ಮಾತನಾಡದಿದ್ದರೂ, ಪರೋಕ್ಷವಾಗಿ ಟಿಪ್ಪುವತ್ತ ತಮ್ಮ ಒಲವು ಇರುವುದನ್ನು ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಅವರು ಇದೀಗ ಮತ್ತೊಮ್ಮೆ ಟಿಪ್ಪುವನ್ನು ವಹಿಸಿಕೊಂಡು ಮಾತನಾಡಲು ಕಾರಣ ಟಿಪ್ಪು ಎಕ್ಸ್​ಪ್ರೆಸ್​.
ಮೈಸೂರು-ಬೆಂಗಳೂರು ಟಿಪ್ಪು ಎಕ್ಸ್​ಪ್ರೆಸ್​ ರೈಲಿಗೆ ಒಡೆಯರ್ ಎಕ್ಸ್​ಪ್ರೆಸ್ ಹಾಗೂ ಮೈಸೂರು-ತಾಳಗುಪ್ಪ ಎಕ್ಸ್​ಪ್ರೆಸ್​ ರೈಲಿಗೆ ಕುವೆಂಪು ಎಕ್ಸ್​ಪ್ರೆಸ್​ ಎಂದು ಮರು ನಾಮಕರಣ ಮಾಡಿ ರೈಲ್ವೆ ಇಲಾಖೆ ಇಂದು ಆದೇಶ ಹೊರಡಿಸಿದೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಿದ್ದರಾಮ್ಯಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಭಾರತ್​ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ಇಂದು ಮಂಡ್ಯದಲ್ಲಿ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಬಿಜೆಪಿಯವರು ಬರೀ ಧರ್ಮ ರಾಜಕೀಯ ಮಾಡುತ್ತಾರೆ. ಒಡೆಯರ್ ಹೆಸರು ಇಡಲಿ ಪರವಾಗಿಲ್ಲ. ಆದರೆ ಬೇರೆ ರೈಲುಗಳು ಇರಲೇ ಇಲ್ವಾ? ಎಂದು ಪ್ರಶ್ನಿಸುವ ಮೂಲಕ ಟಿಪ್ಪು ಎಕ್ಸ್​ಪ್ರೆಸ್​ ಹೆಸರನ್ನು ತೆಗೆದು ಹಾಕಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿಯವರು ಯಾವಾಗಲೂ ಜಾತಿ-ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ. ಬರೀ ದ್ವೇಷ ಹುಟ್ಟು ಹಾಕುವ ಕೆಲಸ ಮಾಡುತ್ತಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಡೆಯರ್ ಎಕ್ಸ್​​ಪ್ರೆಸ್​ ಆಗಿ ಬದಲಾದ ಟಿಪ್ಪು ಎಕ್ಸ್​ಪ್ರೆಸ್​: ರಾಜ್ಯದ 2 ರೈಲುಗಳಿಗೆ ಹೊಸ ಹೆಸರು; ವಿವರ ಇಲ್ಲಿದೆ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + twenty =
Remember me
