ಬೆಂಗಳೂರು:ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸುತ್ತಿದ್ದಂತೆ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಎಂ.ಆರ್. ಸೀತಾರಾಮ್ ಅವರನ್ನು ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಸ್ತುವಾರಿ ಉಪಾಧ್ಯಕ್ಷರನ್ನಾಗಿ ನಿಯೋಜಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಎಂ.ಆರ್. ಸೀತಾರಾಮ್ ಅವರನ್ನು ಈ ಮೊದಲು ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕೆ.ಪಿ.ಸಿ.ಸಿ. ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಕೋಲಾರ ಡಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಇದ್ದ ಕಾರಣದಿಂದ ಕೆಪಿಸಿಸಿ ಉಪಾಧ್ಯಕ್ಷರಾದ ಎಂ. ನಾರಾಯಣ ಸ್ವಾಮಿಯವರನ್ನು ಹೆಚ್ಚುವರಿಯಾಗಿ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಉಸ್ತುವಾರಿಯಾಗಿ ನಿಯೋಜಿಸಲಾಗಿತ್ತು.
ಆದರೆ ಇದೀಗ ಈ ಹಿಂದೆ ನೇಮಿಸಿದಂತೆ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಸ್ತುವಾರಿ ಉಪಾಧ್ಯಕ್ಷರಾಗಿ ಮುಂದುವರೆದು, ಕಾರ್ಯನಿರ್ವಹಿಸಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಎಂ. ನಾರಾಯಣ ಸ್ವಾಮಿ ಅವರು ಎಂದಿನಂತೆ ಕೆಪಿಸಿಸಿ ಕಾರ್ಯಕ್ರಮ, ಸಭೆಗಳು ಹಾಗೂ ಕಂಟ್ರೋಲ್ ರೂಂ ಉಸ್ತುವಾರಿಯಾಗಿ ಮುಂದುವರೆಯಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − one =
Remember me
