ಹಾವೇರಿ:ಕರೊನಾ ಹಾವಳಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹರಡುತ್ತಿರುವಾಗಲೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಯಾವುದಾದರೂ ಆಸ್ಪತ್ರೆಗೆ ಭೇಟಿ ಕೊಟ್ಟು ಸಂತ್ರಸ್ತರಿಗೆ ಸಮಾಧಾನ ಹೇಳಿದ್ದಾರಾ ಎಂದು ಅವರ ಮಾಜಿ ಶಿಷ್ಯ, ಹಾಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಪ್ರಶ್ನಿಸಿದ್ದಾರೆ.
‘‘ಸಿದ್ದರಾಮಯ್ಯ ಅವರು ವಿಧಾನಸಭೆಯ ವಿರೋಧ ಪಕ್ಷದ ನಾಯಕರ ಸ್ಥಾನದಲ್ಲಿದ್ದಾರೆ. ಆ ಸ್ಥಾನದ ಜವಾಬ್ದಾರಿಯನ್ನು ತೆಗೆದುಕೊಂಡು ನಿರ್ವಹಣೆ ಮಾಡಿದ್ದಾರೆಯೇ? ಯಾವುದಾದರೂ ಕೋವಿಡ್-19 ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆಯೇ? ಮನೆಯಲ್ಲಿ ಆರಾಮವಾಗಿದ್ದುಕೊಂಡು, ವಿರೋಧ ಪಕ್ಷದವರಾಗಿ ಸರ್ಕಾರದ ವಿರುದ್ಧ ಏನು ಹೇಳಬೇಕೋ ಅದನ್ನು ಹೇಳುತ್ತಿದ್ದಾರೆ ಅಷ್ಟೇ’’ ಎಂದು ಸುದ್ದಿಗಾರರ ಎದುರು ಟೀಕಿಸಿದರು.ಇದನ್ನೂ ಓದಿರಿಇಡೀ ರಾಜ್ಯ ಮತ್ತೆ ಸ್ತಬ್ಧ! ವೀಕೆಂಡ್​ ಲಾಕ್​ಡೌನ್​ಗೆ ಕ್ಷಣಗಣನೆ
‘‘ಕೋವಿಡ್-19ಗೆ ಮೀಸಲಾದ ಹಣ ದುರ್ಬಳಕೆಯಾಗಿದೆ ಎಂಬುದಾಗಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇದರ ಬಗ್ಗೆ ಈಗಾಗಲೇ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಆದರೂ ಸಿದ್ದರಾಮಯ್ಯ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಯಾವ ಕಂಪನಿಯಲ್ಲಿ ಏನಾಗಿದೆ ಎಂಬುದನ್ನು ಆಧಾರ ಸಮೇತ ಸಾಬೀತುಪಡಿಸಲಿ’’ ಎಂದು ಸವಾಲೆಸೆದರು.
ಈ ಮದುವೆಗೆ ಹೋಗಿದ್ದ 20ಕ್ಕೂ ಹೆಚ್ಚು ಜನರಿಗೆ ಕರೊನಾ ಪಾಸಿಟಿವ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
