ಬೆಂಗಳೂರು:ಜಾತಿ ಜನಗಣತಿ ವರದಿ ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.
ಈ ಹಿಂದೆ ಜಾತಿ ಜನಗಣತಿ ವರದಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. 2013ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಾತಿ ಜನಗಣತಿ ಶುರು ಮಾಡಿಸಿದ್ದರು. ಇದನ್ನು 2015ರ ಏಪ್ರಿಲ್-ಮೇ ತಿಂಗಳಿನಲ್ಲಿ ನಡೆಸಲಾಗಿತ್ತು.
ಈ ಜಾತಿ ಜನಗಣತಿ ಸಮೀಕ್ಷಾ ವರದಿ ತಯಾರಿಸಲು 162 ಕೋಟಿ ರೂ ವೆಚ್ಚ ಮಾಡಲಾಗಿತ್ತು. ಆದರೆ ಆಗ ವರದಿ ಸೋರಿಕೆಯಾಗಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಆ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು ಇದುವರೆಗೂ ಸರ್ಕಾರಕ್ಕೆ ಸಲ್ಲಿಸಿಲ್ಲ.
ಸಿದ್ದರಾಮಯ್ಯ, ಕುಮಾರಸ್ವಾಮಿ, ಯಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಈ ನಾಲ್ವರು ಸಿಎಂಗಳು ವರದಿ ಸ್ವೀಕರಿಸದ ಕಾರಣ ಅದು ಆಯೋಗದ ಬಳಿಯೇ ಉಳಿದುಕೊಂಡಿದೆ. ಜಾತಿಗಣತಿ ನಡೆಸಬಾರದು, ಈಗ ನಡೆಸಿರುವುದು ಅಸಿಂಧು ಎಂದು ಕೆಲವರು ಈ Steps ಹೈಕೋರ್ಟ್‌ನಲ್ಲಿ ರಿಟ್ ಪಿಟಿಷನ್ ಹಾಕಿದ್ದಾರೆ.
ಕರ್ನಾಟಕದಲ್ಲಿ ನಡೆದಿರುವ ಜಾತಿಗಣತಿ ವರದಿಯನ್ನು ಆಯೋಗವು ಸರ್ಕಾರಕ್ಕೆ ಸಲ್ಲಿಸಲು ನಿರ್ದೇಶನ ನೀಡಬೇಕೆಂದು ಮತ್ತೆ ಕೆಲವರು ಅರ್ಜಿಹಾಕಿದ್ದು ಅದು ವಿಚಾರಣೆಯಲ್ಲಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ ಜಾತಿ ಜನಗಣತಿ ವರದಿ ಸ್ವೀಕರಿಸಲು ನಿರ್ಧಾರ ಮಾಡಿದ್ದು ವರದಿ ಸ್ವೀಕರಿಸಿ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಕೂಡ ನೀಡಲು ಸಜ್ಜಾಗಿದ್ದಾರೆ. ಅನುಮೋದನೆ ಬಳಿಕವೇ  ವರದಿಯನ್ನು ಬಹಿರಂಗ ಪಡಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + nineteen =
Remember me
