ಬೆಂಗಳೂರು:ಅಶ್ಲೀಲ ವಿಡಿಯೋ ಪ್ರಕರಣದ ವಿಚಾರವಾಗಿ ಕರ್ನಾಟಕ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಮಾತನಾಡಿದ್ದಾರೆ. ವಿಡಿಯೋ ಹೊರಬಿದ್ದು 26 ದಿನಗಳಾದರೂ ಸಂತ್ರಸ್ತೆಯನ್ನು ಹುಡುಕಲಾಗದಿರುವುದು ನಾಚಿಕೆಗೇಡಿನ ವಿಚಾರ ಎಂದು ಅವರು ದೂರಿದ್ದಾರೆ.
ಇಂದು ಟ್ವಿಟ್ಟರ್​ನಲ್ಲಿ ಸಾಲು ಸಾಲು ಟ್ವೀಟ್​ ಮಾಡುವ ಮೂಲಕ ಸಿದ್ದರಾಮಯ್ಯನವರು ರಾಜ್ಯ ಸರ್ಕಾರದ ಕಾಲೆಳೆದಿದ್ದಾರೆ. ಈ ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ. ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ? ಪತ್ತೆ ಹಚ್ಚಲು ಆಗದಿರಲು ಎಂದು ಅವರು ದೂರಿದ್ದಾರೆ.
“ದಿನಕ್ಕೊಂದು ತಿರುವು ಪಡೆದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಸಿಡಿ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಬೇಕಾದರೆ ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ಹೊರಬಂದು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು. ಕಾನೂನುಬದ್ಧವಾದ ಅವಳ ಹಕ್ಕನ್ನು ಚಲಾಯಿಸದಂತೆ ತಡೆಯುತ್ತಿರುವವರು ಯಾರು? ಸಿಡಿಯಲ್ಲಿರುವ ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ?” ಎಂದು ಅವರು ಪ್ರಶ್ನಿಸಿದ್ದಾರೆ.
ಯುವತಿಗೆ ರಾಜ್ಯ ಸರ್ಕಾರದ ಮೇಲಾಗಲಿ, ಪೊಲೀಸರ ಮೇಲಾಗಲಿ ನಂಬಿಕೆ ಇಲ್ಲ ಎನ್ನುವುದು ವಿಡಿಯೋ ನೋಡಿದರೆ ಗೊತ್ತಾಗುತ್ತದೆ. ಪೊಲೀಸರೇ ಆಕೆ ವಿರುದ್ಧ ಸಂಚು ರೂಪಿಸುತ್ತಿದ್ದಾರೆ ಎನ್ನುವ ಅರ್ಥದಲ್ಲಿ ಆಕೆ ಮಾತಾನಾಡುತ್ತಿದ್ದಾಳೆ. ಈ ಬಗ್ಗೆ ಗೃಹ ಸಚಿವರಾದ ಬೊಮ್ಮಾಯಿ ಅವರು ಗಮನ ಹರಿಸಬೇಕು ಎಂದು ಅವರು ಹೇಳಿದ್ದಾರೆ.
ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ. ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ? 5/5#RameshJarkiholiCDCase
— Siddaramaiah (@siddaramaiah)March 28, 2021

ಡಿಕೆಶಿಗಾಗಿಯೇ ಗೋವಾಕ್ಕೆ ಹೋಗಿದ್ದೆ ಎಂದ ಸಿಡಿ ಲೇಡಿ: ಯಾರ್ರಿ ಅವಳು ಅಂದ್ರು ‘ಬಂಡೆ’

“ರೊಕ್ಕ ಕೊಟ್ಟು ಗೋವಾಗೆ ಕಳಿಸ್ತಿದಾರೆ…” ಸಿಡಿ ಲೇಡಿಯ ಎರಡನೇ ಆಡಿಯೋದಲ್ಲಿ ಸ್ಫೋಟಕ ಮಾಹಿತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 3 =
Remember me
