ಬೆಂಗಳೂರು:ಹುಲಿ ಸಂರಕ್ಷಣಾ ಯೋಜನೆಯ ಸುವರ್ಣ ಮಹೋತ್ಸವ ಪ್ರಯುಕ್ತ ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ#SaveNandini&#AnswerMadiModiಎಂಬ ಹ್ಯಾಶ್​​ಟ್ಯಾಗ ಅಡಿಯಲ್ಲಿ ಸರಣಿ ಟ್ವೀಟ್​ಗಳನ್ನು ಮಾಡುವ ಮೂಲಕ ಕುಟುಕಿದ್ಧಾರೆ.
ಈ ಕುರಿತು ಟ್ವೀಟ್​ ಮಾಡಿರುವ ಸಿದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕನ್ನಡಿಗರು ಕಟ್ಟಿದ್ದ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯಿತು. ಈಗ ನಮ್ಮ ನಂದಿನಿಯನ್ನು ಮುಕ್ಕಲು ಹೊರಟಿದ್ದೀರಾ.ನಮ್ಮ ವಿಜಯಾ ಬ್ಯಾಂಕನ್ನು ನುಂಗಿದ ಬರೋಡಾ ಬ್ಯಾಂಕ್ ಗುಜರಾತ್ ನದ್ದು, ಬಂದರು, ಏರ್ ಪೋರ್ಟ್ ನುಂಗಿದ ಅದಾನಿ ಗುಜರಾತ್ ನವರು, ಈಗ ಕೆಎಂಎಫ್ ನುಂಗಲು ಹೊರಟಿರುವ ಅಮುಲ್ ಗುಜರಾತ್​ನದ್ದು ಎಂದು ಟ್ವೀಟ್​ ಮಾಡಿ ಕಿಡಿಕಾರಿದ್ದಾರೆ.
ಈ ಗುಜರಾತಿ ಆಕ್ರಮಣ ಇನ್ನು ಸಹಿಸಲು ಸಾಧ್ಯ ಇಲ್ಲ. ಕರ್ನಾಟಕದಲ್ಲಿ ಅಮುಲ್ ಉತ್ಪನ್ನಗಳ ಮಾರಾಟವನ್ನು ಗೌರವಪೂರ್ವಕವಾಗಿ ನಿಲ್ಲಿಸಿ. ಕನ್ನಡಿಗರ ನಾಡಪ್ರೇಮ, ಸ್ವಾಭಿಮಾನವನ್ನು ಕೆಣಕಲು ಹೋಗಬೇಡಿ ಪರಿಣಾಮ ನೆಟ್ಟಗಾಗದು. ಕೇಂದ್ರ ಸಹಕಾರ ಸಚಿವ ಅಮಿತ್​ ಷಾ ಅಮುಲ್ ಜೊತೆ ಕೆಎಂಎಫ್ ವಿಲೀನದ ಪ್ರಸ್ತಾವ ಮಾಡಿದ ದಿನದಿಂದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ಪ್ರಹಾರ ಶುರುವಾಗಿದೆ, ಏನಿದು ನಿಮ್ಮ ಕರಾಮತ್ತು ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿ@narendramodiಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕನ್ನಡಿಗರು ಕಟ್ಟಿದ್ದ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯಿತು.ಈಗ ನಮ್ಮ ನಂದಿನಿಯನ್ನು ಮುಕ್ಕಲು ಹೊರಟಿದ್ದೀರಾ? 1/17#AnswerMadiModi#SaveNandinipic.twitter.com/6xLq6pIXP2
ಇದ್ದಕ್ಕಿದ್ದ ಹಾಗೆ ಮಾರುಕಟ್ಟೆಯಿಂದ ನಂದಿನಿ ಹಾಲು ಮತ್ತಿತರ ಉತ್ಪನ್ನಗಳು ಮಾಯವಾಗುತ್ತಿವೆ. ಗುಜರಾತ್ ನಿಂದ ನೀವು ಕಳುಹಿಸುತ್ತಿರುವ ಅಮುಲ್ ಹಾಲು ಮತ್ತು ಉತ್ಪನ್ನಗಳ ಮಾರಾಟದ ಬಿರುಸು ಹೆಚ್ಚಾಗಿದೆ. ಇವೆಲ್ಲವೂ ಸಹಜ ಬೆಳವಣಿಗೆಯೇ. ಭರವಸೆ ನೀಡಿದಂತೆ ಯುವಜನರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡಲಿಲ್ಲ, ಬದಲಿಗೆ ನಮ್ಮ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳಲ್ಲಿನ ಕನ್ನಡಿಗರ ಉದ್ಯೋಗಗಳನ್ನು ಕಿತ್ತುಕೊಂಡಾಯಿತು. ಈಗ ರೈತರ ಹೊಟ್ಟೆಗೆ ಹೊಡೆಯುವ ಹುನ್ನಾರವೇ ಎಂದು ಕುಟುಕಿದ್ಧಾರೆ.
ಇದನ್ನೂ ಓದಿ:ರಾಹುಲ್​ ಗಾಂಧಿ ಕೋಲಾರ ಪ್ರವಾಸ; ಮತ್ತೊಮ್ಮೆ ಮುಂದೂಡಿಕೆ
ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಕ್ಷೀರಧಾರೆ ಮತ್ತು ಕ್ಷೀರಭಾಗ್ಯ ಯೋಜನೆಗಳು ಅನ್ನಭಾಗ್ಯ ಯೋಜನೆಯ ರೀತಿಯಲ್ಲಿಯೇ ನನಗೆ ಸಂತೃಪ್ತಿ ತಂದ ಯೋಜನೆಗಳು. ಗೋಭಕ್ತಿ ಎಂದರೆ ಗೋಮಾಂಸ ಮಾರಾಟಕ್ಕೆ ಲೈಸೆನ್ಸ್ ಕೊಡುವುದೇ. ಹಾಲಿನ ಸಬ್ಸಿಡಿಯನ್ನು ಲೀಟರಿಗೆ 5 ರೂ.ಹೆಚ್ಚಿಸಿ ನಾನು ಕ್ಷೀರಧಾರೆ ಯೋಜನೆ ಜಾರಿಗೊಳಿಸಿದ್ದೆ. ಇದರಿಂದಾಗಿ 20-12-2013 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು.
ಹಾಲು ಹೆಚ್ಚಾಯಿತು ಎಂದು ನಾವು ಖರೀದಿ ಕಡಿಮೆ ಮಾಡಿರಲಿಲ್ಲ. ಹೆಚ್ಚುವರಿ ಹಾಲನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ನೀಡಲು ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆವು. ಇದು ಗೋಸಂಪತ್ತು, ರೈತ ಸಂಪತ್ತು ಮತ್ತು ಮಕ್ಕಳ ಸಂಪತ್ತು ಬೆಳೆಸಿದ ನಮ್ಮ ಆಡಳಿತಶೈಲಿ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. 99 ಲಕ್ಷ ಲೀಟರ್ ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಸಂಗ್ರಹವಾಗುತ್ತಿದೆ. ಇದು ನೀವು ಮತ್ತು ಅಮಿತ್​ ಷಾ ಸೇರಿಕೊಂಡು ಕೆಎಂಎಫ್​ ವಿರುದ್ಧ ಮಾಡಿದ ಷಡ್ಯಂತ್ರವೇ ಎಂದು ಕುಟುಕಿದ್ಧಾರೆ.
ಹಾಲಿನ ಸಬ್ಸಿಡಿಯನ್ನು ಲೀಟರಿಗೆ 5 ರೂ.ಹೆಚ್ಚಿಸಿ ನಾನು ಕ್ಷೀರಧಾರೆ ಯೋಜನೆ ಜಾರಿಗೊಳಿಸಿದ್ದೆ. ಇದರಿಂದಾಗಿ 20-12-2013 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು.8/17#SaveNandini#AnswerMadiModipic.twitter.com/sc9kR6LNjr

ಕೆಎಂಎಫ್ ಹಾಲು ಖರೀದಿಸುತ್ತಿಲ್ಲ ಎಂದು ಹಳ್ಳಿಗಳಲ್ಲಿ ಪಶುಪಾಲಕರು ಗೋಳಾಡುತ್ತಿದ್ದಾರೆ. ಹಾಲು ಸಂಗ್ರಹದ ಪ್ರಮಾಣ ಕಡಿಮೆಯಾಗಿರುವ ಕಾರಣದಿಂದಾಗಿ ಪ್ರತಿದಿನ ಸುಮಾರು 11 ಕೋಟಿ ರೂಪಾಯಿ ಹಣ ರೈತರ ಕೈತಪ್ಪಿ ಹೋಗುತ್ತಿದೆ. ಇದೇನಾ ನಿಮ್ಮ ರೈತರ ಆದಾಯ ದುಪ್ಟಟ್ಟುಗೊಳಿಸುವ ಯೋಜನೆ. ಗುಜರಾತ್ ರಾಜ್ಯದ ಅಮುಲ್ ಪ್ರವೇಶದಿಂದ ನಂದಿನಿಯ ಬೇಡಿಕೆ ಇನ್ನಷ್ಟು ಕುಸಿದು ಕೆಎಂಎಫ್ ಹಾಲಿನ ಸಂಗ್ರಹ ಕಡಿಮೆಯಾಗಲಿದೆ. ಗ್ರಾಮೀಣ ಭಾಗದಲ್ಲಿ ಕೃಷಿಕರ ಪ್ರಮುಖ ಆದಾಯದ ಮೂಲವಾದ ಹೈನುಗಾರಿಕೆಗೆ ಯಾಕೆ ಕಲ್ಲು ಹಾಕುತ್ತಿದ್ದೀರಾ ಎಂದು ಸರಣಿ ಟ್ವೀಟ್​ಗಳನ್ನು ಮಾಡುವ ಮೂಲಕ ರಾಜ್ಯ-ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. .
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 7 =
Remember me
