ಮೈಸೂರು:ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಫಿಕ್ಸ್ ಎಂದು ಅಧಿಕೃತ ಆದೇಶ ಬರುತ್ತಿದ್ದಂತೆ, ಸಿದ್ದರಾಮಯ್ಯ ಹುಟ್ಟೂರಲ್ಲಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸುತ್ತಿದ್ದಾರೆ.
ಸಿದ್ದರಾಮನ ಹುಂಡಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಸಿದ್ದರಾಮಯ್ಯ ಫ್ಲೆಕ್ಸ್​ಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ.
ಇತ್ತ ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ಮನೆ ಮುಂದೆ ಸಂಭ್ರಮ ಕಳೆಗಟ್ಟಿದೆ. ದೂರುದೂರಿನಿಂದ ಬಂದಿರುವ ಅಭಿಮಾನಿಗಳು ಸಿದ್ದರಾಮಯ್ಯ ಮನೆಯತ್ತ ಆಗಮಿಸುತ್ತಿದ್ದಾರೆ. ಸಿದ್ದರಾಮಯ್ಯ ಮನೆ ಸುತ್ತ ಬ್ಯಾನರ್​ಗಳ ಅಬ್ಬರ ಜೋರಾಗಿದೆ. ಸಿದ್ದರಾಮಯ್ಯ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಸಂಭ್ರಮಿಸುತ್ತಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ಖಚಿತವಾಗುತ್ತಿದ್ದಂತೆ ಅವರ ನಿವಾಸದ ಬಳಿ ಪೊಲೀಸರು ಬ್ಯಾರಿಕೇಡ್ ಅಳವಡಿಸುತ್ತಿದ್ದಾರೆ. ಹೆಚ್ಚಿನ ಅಭಿಮಾನಿಗಳು ಹಾಗೂ ಕಾರ್ಯಕರ್ತರು ನಿವಾಸದ ಬಳಿ ಸೇರುತ್ತಿರುವ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಠಾಣೆಯ ಪೊಲೀಸರಿಂದ ಹೆಚ್ಚಿನ ಭದ್ರತೆ ನಿಯೋಜಿಸಲಾಗುತ್ತಿದೆ. ಇನ್ಸ್​ಪೆಕ್ಟರ್​ ಶಿವಸ್ವಾಮಿ ನೇತೃತ್ವದಲ್ಲಿ ಭದ್ರತೆ ಏರ್ಪಡಿಸಲಾಗಿದೆ.
ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ ನಗರದ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿದೆ. ಸಿಎಂ ಸ್ಥಾನ ಖಚಿತವಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ದೆಹಲಿಯಿಂದ ಬೆಂಗಳೂರಿಗೆ ತೆರಳಲಿದ್ದಾರೆ. ದೆಹಲಿ ಪ್ರವಾಸ ಫಲ ನೀಡಿದ್ದು, ಸಂಜೆ ಒಳಗೆ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ ಬರಲಿದ್ದಾರೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.
ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ: ಸದ್ಯದಲ್ಲೇ ಅಧಿಕೃತ ಘೋಷಣೆ, ನಾಳೆ ಪ್ರಮಾಣ ವಚನ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
