ಹುಬ್ಬಳ್ಳಿ:ಚುನಾವಣೆ ಹತ್ತಿರ ಇದೆ ಎನ್ನುವಾಗ ರಾಜಕಾರಣಿಗಳ ಟೆಂಪರ್​ ರನ್​ ಇತ್ಯಾದಿಗಳು ನಡೆಯುವುದು ಸಾಮಾನ್ಯವಾಗಿದ್ದು, ಇಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಸ್ಕ್​ ಧರಿಸಿಕೊಂಡು ದೇವಸ್ಥಾನವೊಂದಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ, ಕಾರ್ಯಕ್ರಮಕ್ಕೂ ಮುನ್ನ ಸಂಶಿ ಗ್ರಾಮದ ಕರಿಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.
ಇದನ್ನೂ ಓದಿ:ಸಾರ್ವಜನಿಕರೇ.. ಬಿಎಂಟಿಸಿಯಲ್ಲಿ ಮಾಸ್ಕ್ ಕಡ್ಡಾಯ; ತಕ್ಷಣದಿಂದಲೇ ಜಾರಿ..
ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸಿಯೇ ಪೂಜೆಯಲ್ಲಿ ಪಾಲ್ಗೊಂಡ ಅವರು, ಬಳಿಕ ದೇವಸ್ಥಾನದ ಅರ್ಚಕರ ಮನೆಯಲ್ಲಿ ಉಪಾಹಾರ ಸೇವಿಸಿದರು. ದೇವಸ್ಥಾನ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ ನಡೆದಿದ್ದ ಈ ಪೂಜೆಯಲ್ಲಿ ಅವರು ಪಾಲ್ಗೊಂಡು ಹೊರಬರುವಾಗ, ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಅಭಿಮಾನಿಗಳು ಘೋಷಣೆ ಕೂಗಿದರು.
ಕರೊನಾ ರೋಗಿಗಳನ್ನು ನೋಡುತ್ತಲೇ ಸುಸ್ತಾಗಿ ಕುಸಿದುಬಿದ್ದ ಡಾಕ್ಟರ್​: ವಿಡಿಯೋ ವೈರಲ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + fourteen =
Remember me
