ಬೆಂಗಳೂರು:ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಬಿ.ಎಸ್​​. ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ತಮ್ಮ ಪಕ್ಷದ ವರಿಷ್ಠರನ್ನು ಭೇಟಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಹಲವು ಊಹಾಪೋಹಗಳು ಕೇಳಿಬಂದಿದ್ದಲ್ಲದೆ ಬಿಜೆಪಿ ಮಾತ್ರವಲ್ಲದೆ, ರಾಜ್ಯ ರಾಜಕೀಯದಲ್ಲೂ ಒಂದು ಸಂಚಲನ ಉಂಟಾಗಿತ್ತು. ಅಂಥದ್ದೇ ಒಂದು ಸಂಚಲನಕ್ಕೆ ಕಾರಣವಾಗುವಂತಹ ಬೆಳವಣಿಗೆ ಇದೀಗ ಕಾಂಗ್ರೆಸ್​ನಲ್ಲೂ ಕಾಣಿಸಿಕೊಂಡಿದೆ.
ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ವರಿಷ್ಠ ರಾಹುಲ್​ ಗಾಂಧಿ ದೆಹಲಿಗೆ ಬರಲು ಹೇಳಿದ್ದು, ಸಿದ್ದರಾಮಯ್ಯ ಅವರು ಈಗಾಗಲೇ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ರಾಹುಲ್ ಗಾಂಧಿ ಬುಲಾವ್ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಶಾಸಕ ಜಮೀರ್ ಅಹಮದ್​ ಖಾನ್​ ಕೂಡ ದೆಹಲಿಗೆ ಹೊರಟಿದ್ದಾರೆ.
ಕಾಂಗ್ರೆಸ್​ನಿಂದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎನ್ನುವ ಕುರಿತು ಈಗಾಗಲೇ ಹುಟ್ಟಿಕೊಂಡಿರುವ ಚರ್ಚೆ ಹಿನ್ನೆಲೆಯಲ್ಲಿ ಈ ಸಿದ್ದರಾಮಯ್ಯ ಅವರನ್ನು ಪಕ್ಷದ ಮುಖಂಡರು ದೆಹಲಿಗೆ ತೆರಳಿದ್ದಾರೆ. ಮಾತ್ರವಲ್ಲ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಬಣಗಳ ಮಧ್ಯೆ ಉಂಟಾಗಿರುವ ಮೇಲಾಟದ ಸಂಬಂಧವೂ ವಿಷಯ ಪ್ರಸ್ತಾಪವಾಗಲಿದೆ ಎನ್ನಲಾಗಿದ್ದು, ಒಟ್ಟಾರೆಯಾಗಿ ಈ ಭೇಟಿ ಕಾಂಗ್ರೆಸ್​​ನಲ್ಲೂ ಒಂದು ಸಂಚಲನ ಹುಟ್ಟುಹಾಕಿರುವ ಲಕ್ಷಣಗಳು ಗೋಚರಿಸಲಾರಂಭಿಸಿವೆ.
ಸಿಎಂ ಹುದ್ದೆಗೆ ಮತ್ತೆ ಕತ್ತಿ ವರಸೆ | ಮುಖ್ಯಮಂತ್ರಿ ಸ್ಥಾನ ಖಾಲಿಯಾದರೆ ನೆಕ್ಸ್ಟ್​ ನಾನೇ ಇದ್ದೇನೆ: ಸಚಿವ ಉಮೇಶ್​ ಕತ್ತಿ

ಕೋವಿಡ್​ನಿಂದ ಬಚಾವಾದರೂ ನೆಮ್ಮದಿ ಇಲ್ಲ; ಕಂಡುಬಂದಿದೆ ಮತ್ತೊಂದು ರೋಗ, ಬೋನ್​ ಡೆತ್!

ಆತ್ಮಹತ್ಯೆ ಮಾಡಿಕೊಳ್ಳುವವರಲ್ಲಿ ಪುರುಷರೇ ಹೆಚ್ಚು, ಏಕೆ?; ಗೃಹಿಣಿಯರಿಗೆ ಖುಷಿ ಕೊಟ್ಟೀತು ಈ ಅಧ್ಯಯನ ವರದಿ!

ಗಂಡನನ್ನು ಕೊಲೆ ಮಾಡಿಸಿದ 9 ತಿಂಗಳ ಬಳಿಕ ಸಿಕ್ಕಿಬಿದ್ದ ಪತ್ನಿ-ಪ್ರಿಯಕರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 14 =
Remember me
