ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯವರ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತರು ತಡೆಯೊಡ್ಡಿದ ಘಟನೆ ಯಶವಂತಪುರದ ಬಿ.ಕೆ.ನಗರದಲ್ಲಿ ಮಂಗಳವಾರ (ಅ.27) ರಾತ್ರಿ ನಡೆದಿದೆ.
ಅಭ್ಯರ್ಥಿ ಕುಸುಮಾ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಯಶವಂತಪುರ ಕಾರ್ಪೋರೇಟರ್ ಜಿ.ಕೆ. ವೆಂಕಟೇಶ್​ ಬೆಂಬಲಿಗರಿಂದ ಗಲಾಟೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ:ತಾರತಮ್ಯ ಆರೋಪ ಹೊತ್ತಿದ್ದ ಫೇಸ್​​ಬುಕ್​ ಇಂಡಿಯಾದ ಸಾರ್ವಜನಿಕ ನೀತಿ ನಿರ್ದೇಶಕಿ ಅಂಖಿ ದಾಸ್​ ರಾಜೀನಾಮೆ
ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿಯ ಕಾರ್ಯಕರ್ತರು ಮೋದಿ… ಮೋದಿ ಎಂದು ಘೋಷಣೆ ಕೂಗಿದರೆ, ಕಾಂಗ್ರೆಸ್ ಕಾರ್ಯಕರ್ತರು ಹೌದು ಹುಲಿಯ ಎಂದು ಕೂಗಿದರು. ಈ ವೇಳೆ ಸ್ಥಳದಲ್ಲಿ ಕೊಂಚ ಬಿಗುವಿನ ವಾತಾವರಣ ಉಂಟಾಗಿತ್ತು.
ಸಿದ್ದರಾಮಯ್ಯ ವಾಹನಕ್ಕೆ ಜಾಗ ಕೊಡದೇ ಗದ್ದಲ ಎಬ್ಬಿಸಲು ಜಿ.ಕೆ ವೆಂಕಟೇಶ್​ ಬೆಂಬಲಿಗರು ಯತ್ನಿಸಿದರು. ಈ ವೇಳೆ ಪೊಲೀಸ್ ಆಯುಕ್ತರಿಗೆ ಫೋನಾಯಿಸಿದ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಸ್ಥಳದಿಂದ ಬಿಜೆಪಿ ಕಾರ್ಯಕರ್ತರನ್ನು ವಾಪಸ್ ಕಳುಹಿಸಿದ ಹೊರತು ಸ್ಥಳದಿಂದ ಕದಲೋದಿಲ್ಲ ಅಂತ ಸಿದ್ದರಾಮಯ್ಯ ಪಟ್ಟು ಹಿಡಿದರು. ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದ ಬಳಿಕ‌ ಸಿದ್ದರಾಮಯ್ಯ ಸ್ಥಳದಿಂದ ತೆರಳಿದರು.
ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿದೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twelve − 9 =
Remember me
