ಬೆಂಗಳೂರು:ಲಾಕ್​ಡೌನ್ ಹಿನ್ನೆಲೆ ಕೇಂದ್ರ ಸರ್ಕಾರ ಪ್ರಕಟಿಸಿರುವ ಪ್ಯಾಕೇಜ್​ಗೆ ಪ್ರತಿಪಕ್ಷ ನಾಯಕ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬಹುಪ್ರಚಾರದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕಟಿಸಿದ 20 ಲಕ್ಷ ಕೋಟಿ ರೂ. ಕೊರೊನಾ ಪ್ಯಾಕೇಜ್ ಕನ್ನಡಿಯೊಳಗಿನ ಗಂಟು ಅಷ್ಟೆ. ಐದು ಕಂತುಗಳಲ್ಲಿ ಬಿಚ್ಚಿಟ್ಟ ಪ್ಯಾಕೇಜ್ ಅಂಕಿ-ಅಂಶಗಳ ಕಸರತ್ತು. ಹಳೆಯ ಸರಕಿಗೆ ಹೊಸ ಹೊದಿಕೆ ಎಂದು ವ್ಯಂಗ್ಯವಾಡಿದ್ದಾರೆ. ಲಕ್ಷಾಂತರ ವಲಸೆ ಕಾರ್ವಿುಕರು, ಮಹಿಳೆಯರು, ಮಕ್ಕಳು ಊರು ಸೇರಲು ಸಾವು-ಬದುಕಿನ ಹೋರಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಬಿರುಗಾಳಿ, ಮಳೆಗೆ ಮನೆಗಳು ಜಖಂ
ಈ ಜನರ ಪ್ರಸ್ತಾವವೇ ಇಲ್ಲದ ಪ್ಯಾಕೇಜ್ ಬೆತ್ತಲೆ ಮನುಷ್ಯನ ಮುಂದೆ ಅರಸನ ಬಟ್ಟೆಗಳ ಮೆರವಣಿಗೆ. ಜನರ ಜೇಬಿಗೆ ದುಡ್ಡು ಹಾಕಿ ಎಂದು ನೊಬೆಲ್ ಪ್ರಶಸ್ತಿ ವಿಜೇತ ವಿದ್ವಾಂಸರು, ಪ್ರಖ್ಯಾತ ಆರ್ಥಿಕ ತಜ್ಞರು ಹೇಳುತ್ತಲೇ ಇದ್ದಾರೆ. ಪ್ರಧಾನಿ ಮೋದಿ ಖಾಲಿಯಾಗಿರುವ ಸರ್ಕಾರದ ಖಜಾನೆ ತುಂಬಲು ಹೊರಟಿದ್ದಾರೆ. ಇದರಿಂದ ಬಡವರಿಗೆ, ಹಸಿದ ಹೊಟ್ಟೆಗಳಿಗೆ, ಕಾರ್ವಿುಕರಿಗೆ, ರೈತರಿಗೆ, ಸಣ್ಣ ವ್ಯಾಪಾರಿಗಳಿಗೆ ದಕ್ಕಿದ್ದೆಷ್ಟು? ಅವರಿಗಾದ ಲಾಭ ಎಷ್ಟು ಎಂಬ ವಿವರ ನೀಡುವಿರಾ ಎಂದು ಪ್ರಶ್ನಿಸಿದ್ದಾರೆ. ದೇಶಪ್ರೇಮದ ವಾರಸುದಾರರೇ ತಾವೆಂದು ಕೊಚ್ಚಿಕೊಳ್ಳುತ್ತಿರುವ ಮೋದಿ ಈಗ ರಕ್ಷಣಾ ಇಲಾಖೆಯ ಎಫ್​ಡಿಐ ಮಿತಿಯನ್ನು ಶೇ.74ಕ್ಕೆ ಹೆಚ್ಚಿಸುವ ಮೂಲಕ ದೇಶದ ಭದ್ರತೆಯ ಜತೆ ರಾಜಿ ಮಾಡಲು ಹೊರಟಿದೆ ಎಂದು ಟೀಕಿಸಿದ್ದಾರೆ.
ವಾರದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳಾ ಪಟ್ಟಿ ಪ್ರಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
