ಮೈಸೂರು:ನಾನು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ, ನಮ್ಮೂರಿನ ರಾಮಮಂದಿರಕ್ಕೆ ದೇಣಿಗೆ ನೀಡುತ್ತೇನೆ ಎಂದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ, ಮೈಸೂರು ತಾಲೂಕಿನ ಸಿದ್ದರಾಮನ ಹುಂಡಿಯ ರಾಮ ಮಂದಿರ ಇದೀಗ ಲೋಕಾರ್ಪಣೆಗೆ ಸಿದ್ದವಾಗಿದೆ.
ಹೌದು, ಏಪ್ರಿಲ್ 19ರ ಸೋಮವಾರದಂದು ಬೆಳಿಗ್ಗೆ ಮೈಸೂರು ತಾಲೂಕಿನ ಸಿದ್ದರಾಮನಹುಂಡಿಯಲ್ಲಿ ರಾಮ ಮಂದಿರ ಲೋಕಾರ್ಪಣೆಯಾಗಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ನಡೆಸಿ ಮಂದಿರ ಲೋಕಾರ್ಪಣೆಗೊಳ್ಳಲಿದೆ.
ಇದನ್ನೂ ಓದಿ:ತಾಯಿಯ ಮೇಲಿನ ಸಿಟ್ಟಿಗೆ ಮೂರು ತಿಂಗಳ ಮಗುವನ್ನು ಜೀವಂತವಾಗಿ ಹೂತುಹಾಕಿದ ಚಿಕ್ಕಮ್ಮ!
ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಮುಂದಾಳತ್ವದಲ್ಲಿ ಈ ರಾಮ ಮಂದಿರ ನಿರ್ಮಾಣವಾಗಿದೆ. ಪಾರ್ವತಿ ಸಿದ್ದರಾಮಯ್ಯ ಗ್ರಾಮಕ್ಕೆ ಬಂದಾಗಲೆಲ್ಲ ಈ ರಾಮನ ದೇಗುಲಕ್ಕೆ ಬರುತ್ತಿದ್ದರಂತೆ. ಶಿಥಿಲವಾದ ದೇವಾಲಯದ ಪುನರ್‌ನಿರ್ಮಾಣಕ್ಕೆ ಗ್ರಾಮಸ್ಥರು ಮನವಿ ಮಾಡಿದಾಗ ಪಾರ್ವತಿ ಸಿದ್ದರಾಮಯ್ಯನವರು ಒಪ್ಪಿಗೆ ಸೂಚಿಸಿ ನೆರವು ನೀಡಿದ್ದಾರೆ. ಅಲ್ಲದೇ ಸ್ಥಳೀಯರು ಕೂಡ ದೇವಾಲಯದ ನಿರ್ಮಾಣಕ್ಕೆ ಕೈಜೋಡಿಸಿದ್ದಾರೆ.
ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ದೇವಾಲಯ ನಿರ್ಮಾಣವಾಗಿದ್ದು, ಗ್ರಾಮದ ದೇಗುಲಗಳಲ್ಲೇ ಇದು ಖ್ಯಾತಿಯಾಗಿದೆ. ಕೊರೊನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ತುಂಬಾ ಸರಳವಾಗಿ ದೇವಾಲಯವನ್ನ ಲೋಕಾರ್ಪಣೆ ಮಾಡಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಸೋಮವಾರ ಬೆಳಗ್ಗೆ ವಿವಿಧ ಪೂಜಾ ಕೈಂಕರ್ಯ, ಕಳಸ ಪ್ರತಿಷ್ಠಾಪನೆ, ಹೋಮ ಹವನಗಳು ನಡೆಯಲಿವೆ. ಬೆಳಗ್ಗೆ 11 ಘಂಟೆಗೆ ಸಿದ್ದರಾಮಯ್ಯ, ಶಾಸಕ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವರು ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
‘ಮಹಾರಾಷ್ಟ್ರ ಸರ್ಕಾರ ಬೆಳಗಾವಿಯಲ್ಲಿ ಕಛೇರಿ ಸ್ಥಾಪಿಸಬೇಕು’ ಎಂದು ಕಿಚ್ಚಿಟ್ಟ ಶಿವಸೇನೆ ನಾಯಕ
ಕೋವಿಡ್: ಪೊಲೀಸ್ ಸಿಬ್ಬಂದಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಡಿಜಿಪಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 13 =
Remember me
