ಬೆಂಗಳೂರು:ಬೆಣ್ಣೆ ನಗರಿ ದಾವಣಗೆರೆಯಲ್ಲಿ ಹುಟ್ಟುಹಬ್ಬದ ಅಮೃತಮಹೋತ್ಸವ ಆಚರಿಸಿಕೊಳ್ಳುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೂ​ ಮೂಲಕ ಶುಭಕೋರಿರುವ ಬಿಜೆಪಿ, ಟೀಕಾ ಪ್ರಹಾರವನ್ನೂ ನಡೆಸಿದೆ.
ಸರಣಿ ಕೂ​ ಮಾಡಿರುವ ಬಿಜೆಪಿ 75 ನೇ ವರ್ಷದ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅವರಿಗೆ ಅಭಿನಂದನೆಗಳು. ನಕಲಿ ಗಾಂಧಿ ಕುಟುಂಬ ಹೊರತುಪಡಿಸಿ, ಇದೇ ಮೊದಲ ಬಾರಿಗೆ ಕಾಂಗ್ರೆಸ್ಸಿಗರಿಂದ ಬೇರೊಬ್ಬ ವ್ಯಕ್ತಿಯ “ವ್ಯಕ್ತಿಪೂಜೆ” ನಡೆಸುವಂತೆ ಮಾಡಿದ ಸಿದ್ದರಾಮಯ್ಯ ಅವರ ಹಠಕ್ಕೂ ಅಭಿನಂದನೆಗಳು ಎಂದಿದೆ.
–BJP KARNATAKA (@BJP4Karnataka)3 Aug 2022

ಗಾಂಧಿ ಕುಟುಂಬದ ಹೊರತಾದ ವ್ಯಕ್ತಿಯ ವೈಭವೀಕರಣವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಸಹಿಸುವುದಿಲ್ಲ. ದೇವರಾಜ ಅರಸು, ಬಂಗಾರಪ್ಪ ಅವರ ರಾಜಕೀಯ ಜೀವನದ ಅಂತ್ಯ ಹೇಗಾಯಿತು ಎಂಬುದನ್ನು ರಾಜ್ಯದ ಜನತೆ ಮರೆತಿಲ್ಲ. ಸಿದ್ದರಾಮಯ್ಯನವರಿಗೆ ಎಚ್ಚರಿಕೆಯ ಕರೆಗಂಟೆಯಿದು ಎಂದು ಬಿಜೆಪಿ ಟಾಂಗ್​ ಕೊಟ್ಟಿದೆ.
–BJP KARNATAKA (@BJP4Karnataka)3 Aug 2022

ರಾಜ್ಯದಲ್ಲಿ ಮೂರು ಜನರು ಹತ್ಯೆಗೀಡಾಗಿದ್ದಾರೆ. ಕಳೆದೆರೆಡು ದಿನಗಳಲ್ಲಿ 11 ಸಾವು ಸಂಭವಿಸಿದೆ. ಅಲ್ಲದೆ, ಕಾಂಗ್ರೆಸ್ ಕಾರ್ಯಕರ್ತ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಕಾಂಗ್ರೆಸ್ಸಿಗರೇ, ಕರ್ನಾಟಕದಲ್ಲಿ ಇಂತಹ ಪರಿಸ್ಥಿತಿ ಇರುವಾಗ ಸೂತಕದ ಮನೆಯಲ್ಲಿ ಸಂಭ್ರಮದ ವಾತಾವರಣ ಎಷ್ಟು ಸರಿ ಎಂದು ಬಿಜೆಪಿ ಪ್ರಶ್ನಿಸಿದೆ.
ಒಬ್ಬ ಕಾರ್ಯಕರ್ತನನ್ನು ಕಳೆದುಕೊಂಡೆವು ಎಂಬ ಕಾರಣಕ್ಕೆ ನಾವು ಜನೋತ್ಸವ ಕಾರ್ಯಕ್ರಮವನ್ನೇ ರದ್ದು ಮಾಡಿದ್ದೇವೆ. ಆದರೆ, ಅಮೃತ ಮಹೋತ್ಸವಕ್ಕೆ ಆಗಮಿಸುತ್ತಿದ್ದ ಕಾಂಗ್ರೆಸ್‌ ಕಾರ್ಯಕರ್ತ ಅಪಘಾತದಲ್ಲಿ ಮೃತಪಟ್ಟಾಗಲೂ ಕಾಂಗ್ರೆಸ್‌ ಕೇಕ್‌ ಕತ್ತರಿಸಿಕೊಂಡು ಸಂಭ್ರಮಿಸುತ್ತಿದೆ. ಕಾರ್ಯಕರ್ತನ ಸಾವಿಗೂ ಇಲ್ಲಿ ಬೆಲೆಯಿಲ್ಲ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಪ್ರತಿ ಕೂನಲ್ಲೂ ಜನವಿರೋಧಿ ಕಾಂಗ್ರೆಸ್​ ಎಂಬ ಹ್ಯಾಶ್​ಟ್ಯಾಗ್​ ಮೂಲಕ ಕಾಂಗ್ರೆಸ್​ ಅನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.
ಭಾರಿ ಮಳೆಗೆ ಅವಾಂತರ ಸೃಷ್ಟಿ ಹಿನ್ನೆಲೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್​: ಬದಲಿ ಮಾರ್ಗ ಹೀಗಿದೆ…

ಮುರುಘಾ ಮಠಕ್ಕೆ ಭೇಟಿ ನೀಡಿದ ರಾಹುಲ್​ ಗಾಂಧಿಗೆ ಲಿಂಗದೀಕ್ಷೆ ನೀಡಿದ ಡಾ. ಶಿವಮೂರ್ತಿ ಮುರುಘಾ ಶರಣರು

ಸಿದ್ದರಾಮೋತ್ಸವದಲ್ಲಿ ಕೈ ಕಾರ್ಯಕರ್ತರಿಗೆ ಭರ್ಜರಿ ಭೋಜನ ವ್ಯವಸ್ಥೆ: ಹೀಗಿದೆ ನೋಡಿ ಊಟದ ಮೆನು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
