ಕಲಬುರಗಿ:ಕಾಂತಾರ ಚಿತ್ರದ ಬಳಿಕ ದೇಶಾದ್ಯಂತ ಜನಪ್ರಿಯತೆ ಗಳಿಸಿರುವ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಇಂದು ಪ್ರತಿಷ್ಠಿತ ರಾಷ್ಟ್ರೀಯ ಸಿದ್ಧಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆದಿದೆ.
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಜಿಡಗಾ ಗ್ರಾಮದಲ್ಲಿ ಮುಗುಳಖೋಡದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳ 38ನೇ ಗುರುವಂದನ ಕಾರ್ಯಕ್ರಮದಲ್ಲಿ ರಿಷಬ್​ ಶೆಟ್ಟಿಗೆ ಸಿದ್ಧಶ್ರೀ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಗಿದೆ.
ಕಳೆದ ಬಾರಿ ಪುನೀತ್​ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಸಿದ್ಧಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ. ಈ ಸಲ ಇದನ್ನು ಸ್ವೀಕರಿಸಿದ ರಿಷಬ್​ ಶೆಟ್ಟಿ, ಕಾಂತಾರ ಸಿನಿಮಾಗೆ ಮೊದಲ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿದ್ದು ಮತ್ತಷ್ಟು ಉತ್ಸಾಹ ಮೂಡಿದೆ ಎಂದು ಸಂತೋಷ ವ್ಯಕ್ತಪಡಿಸಿದರು.
ಕಾಂತಾರ ಸಿನಿಮಾ ಮಾಡಲು ನನಗೆ ಪುನೀತ್ ರಾಜಕುಮಾರ್ ಅವರು ಪ್ರೇರಣೆ ಎಂದ ರಿಷಬ್​, ಕಾಂತಾರ ಇಷ್ಟು ದೊಡ್ಡಮಟ್ಟದಲ್ಲಿ ಹಿಟ್ ಆಗಲು ಕರ್ನಾಟಕದ ಜನರು ಕಾರಣ, ಇನ್ನುಮುಂದೆ ಸಮಾಜಮುಖಿ ಸಿನಿಮಾಗಳತ್ತ ಹೆಚ್ಚಿನ ಗಮನ ಹರಿಸುತ್ತೇನೆ ಎಂದು ಹೇಳಿದರು.
ಗುರುವಂದನೆ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದು, ಗುರುವಂದನೆ ಪ್ರಯುಕ್ತ ಹಮ್ಮಿಕೊಂಡಿದ್ದ ಸಂಗೀತ ಕಾರ್ಯಕ್ರಮದಲ್ಲಿ ಕಾಂತಾರ ಚಿತ್ರದ ಸಿಂಗಾರ ಸಿರಿಯೇ ಗೀತೆಯನ್ನು ಖ್ಯಾತ ಗಾಯಕರಾದ ವಿಜಯಪ್ರಕಾಶ್ ಮತ್ತು ಅನುರಾದಾ ಭಟ್ ಹಾಡಿದರು. ಇದೇ ಸಂದರ್ಭದಲ್ಲಿ ನೀನೇ ರಾಜಕುಮಾರ ಗೀತೆಯ ಗಾಯನದ ಮೂಲಕವೂ ಪುನೀತ್ ಅವರನ್ನು ಸ್ಮರಿಸಿಕೊಳ್ಳಲಾಯಿತು.
ಆರು ತಿಂಗಳ ಹಿಂದಷ್ಟೇ ಬಡ್ತಿ ಹೊಂದಿದ್ದ ಪೊಲೀಸ್ ಅಧಿಕಾರಿ ಇನ್ನಿಲ್ಲ; ಇನ್​ಸ್ಪೆಕ್ಟರ್ ಪ್ರಾಣ ತೆಗೆದ ಕ್ಯಾನ್ಸರ್​

ನಿಮ್ಮ ದಾಖಲೆಗಳನ್ನು ನೀಡಿ ಬೇರೆ ಯಾರೋ ಸಿಮ್​ ಪಡೆದಿರಬಹುದು!; ಚೆಕ್ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ..

ರಿಪಬ್ಲಿಕ್ ಸ್ಟುಡಿಯೋದಲ್ಲಿ ‘ವಿಜಯಾನಂದ’ ಚಿತ್ರತಂಡ; ಡಿ. 9ರಂದು ಅದ್ಧೂರಿ ಬಿಡುಗಡೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 8 =
Remember me
