ತುಮಕೂರು:ಸಿದ್ಧಗಂಗಾ ಮಠದ ನೂತನ ಉತ್ತರಾಧಿಕಾರಿಗಳ ಅದ್ಧೂರಿ ಪಟ್ಟಾಭಿಷೇಕಕ್ಕೂ ಚುನಾವಣಾ ನೀತಿಸಂಹಿತೆ ತೊಡಕಾಗಿದ್ದು, ಮೂವರೂ ಉತ್ತರಾಧಿಕಾರಿಗಳ ಪೀಠಾರೋಹಣ ಸರಳವಾಗಿಯೇ ನೆರವೇರಲಿದೆ ಎಂದು ಮಠದ ಮೂಲಗಳು ತಿಳಿಸಿವೆ.
ವಿಧಾನಸಭಾ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿ ಇರುವುದರಿಂದ ತುಮಕೂರಿನ ಸಿದ್ದಗಂಗಾ ಮಠದ ಮೂವರು ನೂತನ ಉತ್ತರಾಧಿಕಾರಿಗಳ ಪಟ್ಟಾಭಿಷೇಕ ಕಾರ್ಯಕ್ರಮ ಸರಳವಾಗಿ ಆಚರಿಸಲು ಮುಂದಾದ ಸಿದ್ಧಗಂಗಾ ಮಠದ ಆಡಳಿತ ಮಂಡಳಿ ನಿರ್ಧರಿಸಿದೆ.
ಇದನ್ನೂ ಓದಿ:ತಾನೂ ಕೋಟ್ಯಧಿಪತಿ, ಮಕ್ಕಳಿಬ್ಬರೂ ಕೋಟ್ಯಧಿಪತಿ, ಹೆಂಡತಿಯೂ ಕೋಟಿ ರೂ. ಮೌಲ್ಯದ ಚಿನ್ನಾಭರಣದ ಒಡತಿ, ಆದ್ರೆ ಸ್ವಂತ ಕಾರಿಲ್ಲ!
ತುಮಕೂರಿನ ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಮನೋಜ್ ಕುಮಾರ್, ರಾಮನಗರ ಜಿಲ್ಲೆ‌ ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠದ ಉತ್ತರಾಧಿಕಾರಿಯಾಗಿ ಹರ್ಷಾ, ವಿಜಯಪುರ ಬಸವಕಲ್ಯಾಣ ಮಠದ ಉತ್ತರಾಧಿಕಾರಿ ಗೌರಿಶಂಕರ್ ನೇಮಕಗೊಂಡಿದ್ದು, ಬಸವ ಜಯಂತಿಯಂದು ಇವರ ಪಟ್ಟಾಭಿಷೇಕ ನಡೆಯಲಿದೆ.
ಇದನ್ನೂ ಓದಿ:ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ; ಮಾಜಿ ಪ್ರಧಾನಿ ಮೊಮ್ಮಗನ ವಾರ್ಷಿಕ ಆದಾಯ ಇಷ್ಟು!
ಇದೇ 23ರ ಭಾನುವಾರ ಬೆಳಗ್ಗೆ 5ರಿಂದ ಸಿದ್ಧಗಂಗೆಯ ಹಳೇ ಮಠದ ಆವರಣದಲ್ಲಿ ಶ್ರೀಮಠದ ಭಕ್ತಾದಿಗಳು, ಸಾರ್ವಜನಿಕರು ಮತ್ತು ಹಿತೈಷಿಗಳ ಸಮ್ಮುಖದಲ್ಲಿ ಸರಳವಾಗಿ ಪಟ್ಟಾಭಿಷೇಕ ನೆರವೇರಲಿದೆ ಎಂದು ಮಠದ ಮೂಲಗಳು ತಿಳಿಸಿವೆ.
‘ಈ ಸಲ ಯಾರಿಗೆ ಮತ ಹಾಕಲಿ?’ ಎಂದು ಕೇಳಿದರೆ ಇದು ಏನನ್ನುತ್ತೆ?: ಕೃತಕ ಬುದ್ಧಿಮತ್ತೆಯ ಬುದ್ಧಿಮಾತು!

ನಾನು ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ನನ್ನ ಮೇಲೆ ಯಾಕಿಷ್ಟು ದ್ವೇಷ?: ಸುಮಲತಾಗೆ ಎಚ್​ಡಿಕೆ ಪ್ರಶ್ನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + eight =
Remember me
