ತುಮಕೂರು:ತ್ರಿವಿಧ ದಾಸೋಹಿ, ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 4ನೇ ಪುಣ್ಯ ಸಂಸ್ಮರಣೋತ್ಸವ ಇಂದು(ಶನಿವಾರ) ಸಿದ್ಧಗಂಗಾ ಮಠದಲ್ಲಿ ನಡೆಯುತ್ತಿದ್ದು, ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಮಠಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸಿದ್ದಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಬಳಿಕ ಮಾತನಾಡಿದ ಸಿಎಂ, ಪರಮಪೂಜ್ಯರ ಗದ್ದುಗೆಗೆ ನಮಸ್ಕಾರ ಮಾಡಿ ಆಶೀರ್ವಾದ ಪಡೆದಿದ್ದೇನೆ. ದಾಸೋಹ ದಿನ ಇಡೀ ರಾಜ್ಯದಲ್ಲಿ ಆಚರಣೆ ಆಗುತ್ತೆ. ವಿಭಿನ್ನ, ವಿಶೇಷವಾಗಿ ಆಚರಿಸೋ ಬಗ್ಗೆ ಚರ್ಚೆ ಮಾಡಲಾಗುತ್ತೆ. ಫೆಬ್ರವರಿ ತಿಂಗಳಲ್ಲಿ ಅಧಿಕೃತವಾಗಿ ಸರ್ಕಾರದಿಂದ ಆಚರಣೆ ಮಾಡ್ತೀವಿ. ಸಾರ್ವತ್ರಿಕ ರಜೆ ಇರೋದಿಲ್ಲಾ. ಇನ್ನು ಶಿವಕುಮಾರ ಶ್ರೀಗಳ ಹುಟ್ಟೂರಲ್ಲಿ ಪುತ್ಥಳಿ ನಿರ್ಮಾಣ ಕಾಮಗಾರಿ ಶೀಘ್ರವೇ ಪುನರಾರಂಭ ಆಗಲಿದೆ ಎಂದರು. ಪುಣ್ಯ ಸಂಸ್ಮರಣೋತ್ಸವ ಹಿನ್ನೆಲೆ ಶ್ರೀ ಮಠದ ಗೋಸಲ ಸಿದ್ದೇಶ್ವರ ಭವ್ಯ ವೇದಿಕೆಯಲ್ಲಿ ನಡೆದ ವೇದಿಕೆ ಕಾರ್ಯಕ್ರಮವನ್ನು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು ನೇತೃತ್ವ ವಹಿಸಿದ್ದರು.
ಬೆಂಗಳೂರು ಬೇಲಿಮಠದ ಶ್ರೀ ಶಿವರುದ್ರಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಕೇಂದ್ರ ಸಚಿವ ಭಗವಂತ ಖೂಬಾ, ಸಚಿವರಾದ ಆರಗ ಜ್ಞಾನೇಂದ್ರ, ಬಿ.ಸಿ.ನಾಗೇಶ್, ವಿ.ಸೋಮಣ್ಣ, ಜೆ.ಸಿ.ಮಾಧುಸ್ವಾಮಿ, ಎಸ್.ಟಿ. ಸೋಮಶೇಖರ್, ಸಂಸದ ಜಿ.ಎಸ್.ಬಸವರಾಜ್, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಬಿ.ವೈ.ವಿಜಯೇಂದ್ರ, ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಸಿದ್ಧಗಂಗೆಯತ್ತ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ.
ನಟಿ ರಚಿತಾ ರಾಮ್ ವಿರುದ್ಧ ಮದ್ದೂರು ಠಾಣೆಯಲ್ಲಿ ಕೇಸ್​!

ಇಂದು ಡಾ.ಶಿವಕುಮಾರ ಸ್ವಾಮೀಜಿ 4ನೇ ಪುಣ್ಯ ಸಂಸ್ಮರಣೋತ್ಸವ: ಸಿದ್ಧಗಂಗೆಯತ್ತ ಲಕ್ಷಾಂತರ ಭಕ್ತರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
