ಬೆಂಗಳೂರು:ಬೆಂಗಳೂರಿನಲ್ಲಿ ಯುವ ಉದ್ಯಮಿಯೊಬ್ಬರು ನಾಪತ್ತೆಯಾಗಿದ್ದು, ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಜಿ ಮುಖ್ಯಮಂತ್ರಿ ದಿ. ಧರ್ಮಸಿಂಗ್ ಅವರ ಸಂಬಂಧಿ ಸಿದ್ದಾರ್ಥ ದೇವೇಂದರ್ ಸಿಂಗ್(28) ಕಾಣೆಯಾದವರು. ಜ.19ರ ಬೆಳಗಿನ ಜಾವ 5 ಗಂಟೆ ಸುಮಾರಿನಲ್ಲಿ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಸ್ನೇಹಿತರನ್ನು ಭೇಟಿಯಾಗಲು ಅಮೆರಿಕಾಗೆ ಹೋಗುತ್ತಿರುವುದಾಗಿ ತಂದೆಗೆ ಸಿದ್ದಾರ್ಥ ದೇವೇಂದರ್ ಸಿಂಗ್ ಮೊಬೈಲ್​ನಿಂದ ವಾಟ್ಸ್​ಆ್ಯಪ್ ಮೆಸೇಜ್​ ಬಂದಿದೆ. ಬಳಿಕ ಸಿದ್ದಾರ್ಥ್​ ಮೊಬೈಲ್​ ಸ್ವಿಚ್ ಆಫ್ ಬಂದಿದೆ. ಸಿದ್ದಾರ್ಥ್​ ಇತ್ತ ಅಮೆರಿಕಾಗೂ ಹೋಗಿಲ್ಲ, ಅತ್ತ ಮೊಬೈಲ್​ ಫೋನ್​ ಕೂಡ ಕನೆಕ್ಟ್​ ಆಗಿಲ್ಲ.ಇದನ್ನೂ ಓದಿರಿನಿವೃತ್ತ ಉಪನ್ಯಾಸನ ಪತ್ನಿ, ಇಬ್ಬರು ಮಕ್ಕಳು ನಾಲೆಗೆ ಹಾರಿ ಆತ್ಮಹತ್ಯೆ! ಸಾವಿಗೂ ಮುನ್ನ ನಡೆದಿತ್ತು ವಾಕ್ಸಮರ
ಮಗನಿಗಾಗಿ ಹುಡಕಾಟ ನಡೆಸಿದರೂ ಸುಳಿವು ಸಿಗದ ಹಿನ್ನೆಲೆಯಲ್ಲಿ ತಂದೆ ದೇವೇಂದರ್ ಸಿಂಗ್ ಅವರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕೇಸ್​ ದಾಖಲಿಸಿದ್ದಾರೆ.
ಈ ನಡುವೆ ನೆಲ್ಲೂರು ಕಾಡಿನಲ್ಲಿ ಅಪರಿಚ ಶವ ಪತ್ತೆಯಾಗಿದ್ದು, ಈ ಬಗ್ಗೆ ನೆಲ್ಲೂರು ಪೊಲೀಸರ ಮಾಹಿತಿ ಆಧರಿಸಿ ಅಮೃತಹಳ್ಳಿ ಪೊಲೀಸರ ತಂಡ ಆಂಧ್ರದ ನೆಲ್ಲೂರಿನ ಅರಣ್ಯ ಪ್ರದೇಶಕ್ಕೆ ಇಂದು(ಭಾನುವಾರ) ಭೇಟಿ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಡಿನಲ್ಲಿ ದುಷ್ಕರ್ಮಿಗಳು ಹೂತು ಹಾಕಿರುವ ಶವವನ್ನು ಹೊರತೆಗೆದ ಬಳಿಕವಷ್ಟೇ ಅದು ಯಾರದ್ದು? ಎಂಬುದು ಗೊತ್ತಾಗಲಿದೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು ಸಮೀಪ ಭೀಕರ ಅಪಘಾತ: ಮೂವರು ಯುವಕರು ಸ್ಥಳದಲ್ಲೇ ದುರ್ಮರಣ

ಪತ್ನಿಯನ್ನ ಜಾತ್ರೆಗೆ ಕಳಿಸಿ ಮನೆಗೆ ಬಂದವ ಪರಸ್ತ್ರೀ ಜತೆ ಹೆಣವಾದ! ಆ ಕೋಣೆಯಲ್ಲಿ ನಡೆದಿದ್ದೇನು?

ನಿವೃತ್ತ ಉಪನ್ಯಾಸನ ಪತ್ನಿ, ಇಬ್ಬರು ಮಕ್ಕಳು ನಾಲೆಗೆ ಹಾರಿ ಆತ್ಮಹತ್ಯೆ! ಸಾವಿಗೂ ಮುನ್ನ ನಡೆದಿತ್ತು ವಾಕ್ಸಮರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − nine =
Remember me
