ಕಲಬುರಗಿ:ಜಿಡಗಾ-ಮುಗಳಖೋಡ-ಕೋಟನೂರ ಮಠದಿಂದ ಕೊಡಮಾಡುವ ಪ್ರತಿಷ್ಠಿತ ರಾಷ್ಟ್ರಮಟ್ಟದ ಸಿದ್ಧಶ್ರೀ ಪ್ರಶಸ್ತಿಗೆ ಕಾಂತಾರ ಸಿನಿಮಾ ನಿರ್ದೇಶಕ ಮತ್ತು ನಟ ರಿಷಬ್​ ಶೆಟ್ಟಿ ಆಯ್ಕೆಯಾಗಿದ್ದಾರೆ.
ಆಳಂದ ತಾಲೂಕಿನ ಜಿಡಗಾ ನವಕಲ್ಯಾಣ ಮಠದಲ್ಲಿ ಡಿ.2ರಂದು ನಡೆಯುವ ಶ್ರೀ ಷಡಕ್ಷರಿ ಶಿವಯೋಗಿ ಡಾ.ಮುರುರಾಜೇಂದ್ರ ಮಹಾಸ್ವಾಮಿಗಳ 38ನೇ ಗುರುವಂದನೆ ಕಾರ್ಯಕ್ರಮದಲ್ಲಿ ರಿಷಬ್​ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ಮಾದನಹಿಪ್ಪರಗಾ ವಿರಕ್ತಮಠದ ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮೀಜಿ ಮತ್ತು ಅಧ್ಯಕ್ಷರಾದ ಚಿನ್ಮಯಗಿರಿ ಮಹಾಂತೇಶ್ವರ ಮಠದ ಶ್ರೀ ವೀರಮಹಾಂತ ಶಿವಾಚಾರ್ಯರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಶಸ್ತಿಯು ಒಂದು ಲಕ್ಷ ನಗದು, 20 ಗ್ರಾಂ ಚಿನ್ನದ ಪದಕ ಹೊಂದಿದೆ. ಕಳೆದ ವರ್ಷ ಕರ್ನಾಟಕ ರತ್ನ ಪುನೀತ್​ ರಾಜಕುಮಾರ್​ ಅವರಿಗೆ ಮರಣೋತ್ತರವಾಗಿ ಸಿದ್ಧಶ್ರೀ ಪ್ರಶಸ್ತಿ ನೀಡಲಾಗಿತ್ತು. ಇದುವರೆಗೆ ಸಿದ್ಧಗಂಗಾದ ಲಿಂಗೈಕ್ಯ ಶ್ರೀ ಡಾ.ಶಿವಕುಮಾರ ಸ್ವಾಮೀಜಿ, ಪಂಡಿತ ಪುಟ್ಟರಾಜ ಗವಾಯಿ ಇತರರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ದೈವ ಕುರಿತು ಅಮೋವಾಗಿರುವ ಸಿನಿಮಾ ನಿರ್ದೇಶಿಸಿ ಇಡೀ ಭಾರತ ಕರ್ನಾಟಕದ ಕಡೆಗೆ ನೋಡುವಂತೆ ಮಾಡಿರುವ ರಿಷಬ್​ ಶೆಟ್ಟಿ ಅವರನ್ನು ಈ ಸಲದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕೆಪಿಎಸ್​ಸಿ ಅಧ್ಯಕ್ಷ ಶಿವಶಂಕ್ರಪ್ಪ ಸಾಹುಕಾರ ಮತ್ತು ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕ ವಿ.ನಾಗೇಂದ್ರ ಪ್ರಸಾದ್​ ಅವರನ್ನೂ ಗೌರವಿಸಲಾಗುತ್ತದೆ. ಗಾಯಕರಾದ ವಿಜಯಪ್ರಕಾಶ್​, ಅನುರಾಧಾ ಭಟ್​, ನಟಿ ಅನುಶ್ರೀ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ವಿಡಿಯೋ ವೈರಲ್​ ಆಗ್ತಿದ್ದಂತೆ ಬಿಡದಿ ಆಸ್ಪತ್ರೆ ವೈದ್ಯೆಯರಿಬ್ಬರ ಅಮಾನತು!

ಡೀಸೆಲ್​ ಖಾಲಿಯಾಗಿ ರಸ್ತೆಯಲ್ಲೇ ನಿಂತ ಆಂಬುಲೆನ್ಸ್​ ಅನ್ನು ತಳ್ಳಿಕೊಂಡೇ ಹೋದ ಮಗಳು-ಅಳಿಯ! ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಅಪ್ಪ ಸಾವು

ನಾನು ಮದ್ವೆ ಆಗ್ಬೇಕು, ಪ್ಲೀಸ್​ ಹೆಣ್ಣು ಹುಡುಕಿ ಕೊಡಿ ಸಾರ್… ಶಿವಮೊಗ್ಗ ಎಸ್ಪಿಗೆ ಜಾತಕ ಕೊಟ್ಟು ಅರ್ಜಿ ಸಲ್ಲಿಸಿದ ಯುವಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + three =
Remember me
