ಮಡಿಕೇರಿ:ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಸಮರ ಅತಿರೇಕ ತಲುಪಿದ್ದು, ನೆರೆ ಹಾನಿ ವೀಕ್ಷಣೆಗಾಗಿ ಕೊಡಗಿಗೆ ಗುರುವಾರ ಆಗಮಿಸಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆಗಳನ್ನು ಎಸೆದು ಪ್ರತಿಭಟನೆ ನಡೆಸಲಾಗಿದೆ. ಕಾಂಗ್ರೆಸ್ ಕೂಡ ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿ, ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ, ಆಗಸ್ಟ್ 26ರಂದು ಕೊಡಗಿನ ಎಸ್​ಪಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಹೇಳಿದೆ. ‘ನಾವು ಮನಸ್ಸು ಮಾಡಿದರೆ ಮುಖ್ಯಮಂತ್ರಿ, ಸಚಿವರು ಸೇರಿ ಬಿಜೆಪಿಯವರು ರಸ್ತೆಯಲ್ಲಿ ತಿರುಗಾಡಲು ಸಾಧ್ಯವಾಗುವುದಿಲ್ಲ’ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.
ನಡೆದದ್ದೇನು?:ಕೊಡಗಿನ ಗಡಿಭಾಗ ತಿತಿಮತಿ ಮೂಲಕ ಸಿದ್ದರಾಮಯ್ಯ ಜಿಲ್ಲೆಗೆ ಪ್ರವೇಶಿಸುತ್ತಿದ್ದಂತೆ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ ಜೋಯಪ್ಪ ನೇತೃತ್ವದಲ್ಲಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಮುಖ್ಯರಸ್ತೆಯಲ್ಲಿ ಕಾರು ತೆರಳುತ್ತಿದ್ದಾಗ ಕಾರ್ಯಕರ್ತನೊಬ್ಬ ತನ್ನ ಕೈಯಲ್ಲಿದ್ದ ವೀರ ಸಾವರ್ಕರ್ ಭಾವಚಿತ್ರವನ್ನು ಸಿದ್ದರಾಮಯ್ಯ ಮಡಿಲಲ್ಲಿ ಇಟ್ಟು ಆಕ್ರೋಶ ಹೊರಹಾಕಿದ. ಮಡಿಕೇರಿಯ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಹಾಗೂ ಮಡಿಕೇರಿಯಿಂದ ಕುಶಾಲನಗರದತ್ತ ತೆರಳುತ್ತಿದ್ದ ವೇಳೆ ಸಿದ್ದರಾಮಯ್ಯ ಇದ್ದ ಕಾರಿನ ಮೇಲೆ ಕೆಲವರು ಮೊಟ್ಟೆ ಎಸೆದರು. ರಸ್ತೆ ಬದಿ ಸಾವರ್ಕರ್ ಭಾವಚಿತ್ರ ಹಿಡಿದು, ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದರು. ಘಟನೆಗೆ ಸಂಬಂಧಿಸಿ ಪೊಲೀಸರು 10 ಜನರನ್ನು ವಶಕ್ಕೆ ಪಡೆದಿದ್ದಾರೆ.
ಯಾಕೆ ಪ್ರತಿಭಟನೆ?:ಟಿಪ್ಪು ಜಯಂತಿ ಆಚರಣೆ, ಕೊಡವರನ್ನು ಗೋಭಕ್ಷಕರೆಂದು ಬಿಂಬಿಸಿದ್ದು, ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರನ್ನು ಅವಮಾನಿಸಿದ ಕಾರಣಕ್ಕೆ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸುವಂತೆ ಸಂಘ ಪರಿವಾರ ಕರೆ ನೀಡಿತ್ತು.
ನಾವು ಮನಸ್ಸು ಮಾಡಿದರೆ ಮುಖ್ಯಮಂತ್ರಿ, ಸಚಿವರು ಸೇರಿ ಬಿಜೆಪಿಯವರಿಗೆ ರಸ್ತೆಯಲ್ಲಿ ತಿರುಗಾಡಲು ಸಾಧ್ಯವಾಗುವುದಿಲ್ಲ. ನನ್ನ ವಿರುದ್ಧ ಪ್ರತಿಭಟನೆ ಮಾಡಲು ಹಣ ಕೊಟ್ಟು ಕರೆಸಿದ್ದಾರೆ. ಇದು ಹೇಡಿಗಳು ಮಾಡುವ ಕೆಲಸ. ಇವರಿಗೆ ಸರ್ಕಾರ ನಡೆಸಲು ಬರುವುದಿಲ್ಲ. ರಾಜ್ಯದಲ್ಲಿ ಸರ್ಕಾರವೇ ಇಲ್ಲ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶ ಇದೆ. ಆದರೆ ಇವರು ಮಾಡಿದ ರೀತಿಯಲ್ಲ. ಸರ್ಕಾರ ಸತ್ತಿದೆ. ಜನರ ಗಮನ ಬೇರೆಡೆ ಸೆಳೆಯುವ ಉದ್ದೇಶದಿಂದ ಸಣ್ಣತನದಿಂದ ವರ್ತಿಸಿದ್ದಾರೆ. ನಾನು ಸಿಎಂ ಆಗಿದ್ದಾಗ ಎಲ್ಲ ಕಾಲದಲ್ಲಿಯೂ ಟಿಪ್ಪು ಜಯಂತಿ ಮಾಡಿದ್ದೇನೆ. ಆವಾಗ ಇವರು ಎಲ್ಲಿಗೆ ಹೋಗಿದ್ದರು? ಎಂದು ಕಿಡಿಕಾರಿದರು. ಈ ಬಾರಿ ಕೊಡಗಿನ ಎರಡೂ ಕ್ಷೇತ್ರಗಳಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಅದಕ್ಕೆ ಹತಾಶೆಯಿಂದ ಹೀಗೆ ಮಾಡಿಸಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದರು.
| ಬಸವರಾಜ ಬೊಮ್ಮಾಯಿಮುಖ್ಯಮಂತ್ರಿ
| ಬಿ.ಎಸ್.ಯಡಿಯೂರಪ್ಪಮಾಜಿ ಸಿಎಂ
26ರಂದು ಎಸ್​ಪಿ ಕಚೇರಿಗೆ ಮುತ್ತಿಗೆ:ಕೊಡಗಿಗೆ ಭೇಟಿ ನೀಡಿದ್ದ ವೇಳೆ ಸೂಕ್ತ ಭದ್ರತೆ ನೀಡುವಲ್ಲಿ ವಿಫಲವಾದ ಪೊಲೀಸ್ ಇಲಾಖೆ ವಿರುದ್ಧ ಆ.26ರಂದು ಎಸ್​ಪಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತಿತಿಮತಿಯಲ್ಲಿ ನನ್ನ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರನ್ನು ಕೂಡಲೇ ಬಂಧಿಸಿದ್ದರೆ ಇಡೀ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿರಲಿಲ್ಲ. ಪೊಲೀಸರು ಆರ್​ಎಸ್​ಎಸ್​ನವರೊಂದಿಗೆ ಶಾಮೀಲಾಗಿ ಪಿತೂರಿ ನಡೆಸಿದ್ದಾರೆ. ಕಾನೂನು ಸುವ್ಯವಸ್ಥೆ ಇಡೀ ಜಿಲ್ಲೆಯಲ್ಲಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಪೊಲೀಸ್ ವೈಫಲ್ಯ ಖಂಡಿಸಿ ಆ.26ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ಮುಂದಿನ ಏಳು ತಿಂಗಳಲ್ಲಿ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈಗ ನಿರ್ಲಕ್ಷ್ಯ ವಹಿಸಿದ ಪೊಲೀಸ್ ಇಲಾಖೆ ವಿರುದ್ಧ ಏನು ಕ್ರಮ ಕೈಗೊಳ್ಳಬೇಕೆಂದು ಚೆನ್ನಾಗಿ ತಿಳಿದಿದೆ ಎಂದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + thirteen =
Remember me
