ನವದೆಹಲಿ:ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದು, ರಾಜಕೀಯ ಸಂರ್ಘಷಕ್ಕೆ ನಾಂದಿ ಹಾಡಿದೆ. ರಾಜ್ಯಪಾಲರ ಈ ನಡೆ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವಿನ ಗುದ್ದಾಟಕ್ಕೆ ಎಡೆ ಮಾಡಿಕೊಟ್ಟಿದ್ದು, ರಾಜ್ಯ ಕಾಂಗ್ರೆಸ್​ ಸರ್ಕಾರ ಗವರ್ನರ್​ಗೆ ಟಕ್ಕರ್​ ಕೊಡಲು ಒಂದಿಲ್ಲೊಂದು ಯೋಜನೆ ರೂಪಿಸುತ್ತಿದೆ. ಇದರ ನಡುವೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್​ ಕಾಂಗ್ರೆಸ್​ ಹೈಕಮಾಂಡ್​ಅನ್ನು ಭೇಟಿ ಮಾಡಿದ್ದು, ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ.
ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿರುವ ಕಾಂಗ್ರೆಸ್​ ಹೈ ಕಮಾಂಡ್​ ಸಿಎಂ ಸಿದ್ದರಾಯ್ಯಗೆ ಫುಲ್​ ಸಪೋರ್ಟ್​ ನೀಡುವುದಾಗಿ ಹೇಳಿದ್ದಾರೆ. ಇದರ ಜೊತೆಗೆ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಚಾರ್ಜ್​ಶೀಟ್​ ಸಲ್ಲಿಸಿದ್ದು, ಇದರಲ್ಲಿ ಶಾಸಕರಾದ ದದ್ದಲ್​ ಹಾಗೂ ನಾಗೇಂದ್ರ ಅವರ ಹೆಸರನ್ನು ಕೈ ಬಿಡಲಾಗಿದ್ದು, ಕ್ಲೀನ್​ ಚಿಟ್​ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಎರಡು ವಿಚಾರಕ್ಕೆ ಸಂಬಂಧಿಸಿದಂತೆ ದೋಸ್ತಿ ನಾಯಕರಿಗೆ ಟಕ್ಕರ್​ ಕೊಡಲು ಕೈ ನಾಯಕರು ಯೋಜನೆ ರೂಪಿಸುತ್ತಿದ್ದು, ಮುಂದಿನ ನಡೆಯ ಕುರಿತು ಹೈಕಮಾಂಡ್​ ಜೊತೆ ಚರ್ಚಿಸುತ್ತಿದ್ದಾರೆ. ಇದರ ಜೊತೆಗೆ ಮುಂಬರುವ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ, ಬಿಬಿಎಂಪಿ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್​ ಚುನಾವಣೆ ತಯಾರಿ ಬಗ್ಗೆಯೂ ಮಾತುಕತೆ ನಡೆಯಲಿದೆ ಎಂದು ಹೇಳಲಾಗಿದ್ದು, ಈ ಬಗ್ಗೆ ಸಭೆಯ ನಂತರ ಅಧಿಕೃತವಾಗಿ ತಿಳಿಯಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + nineteen =
Remember me
