ಶಿವಮೊಗ್ಗ:ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಶುಕ್ರವಾರ ಮಧ್ಯಾಹ್ನ ಎರಡು ಬಣಗಳ ನಡುವೆ ಮಾರಾಮಾರಿ ನಡೆದಿದ್ದು, ಪರಿಸ್ಥಿತಿ ಪ್ರಕ್ಷ್ಯುಬ್ಧವಾಗಿದೆ.
ದೇವಸ್ಥಾನ ಆಡಳಿತ ಮಂಡಳಿಯ ಒಳ ಜಗಳ ಸ್ಫೋಟಗೊಂಡಿದ್ದು, ಸಿಗಂಧೂರು ಧರ್ಮದರ್ಶಿ ರಾಮಪ್ಪ ಬೆಂಬಲಿಗರ ಮೇಲೆ ಪ್ರಧಾನ ಅರ್ಚಕ ಶೇಷಗಿರಿ ಭಟ್ಟರ ಬೆಂಬಲಿಗರು ಹಲ್ಲೆ‌ ನಡೆಸಿದ್ದಾರೆ. ದೇವಾಲಯಕ್ಕೆ ಪೂಜೆ ಮಾಡಿಸಲು ಬಂದಿದ್ದ ಭಕ್ತರ ಮೇಲೂ ಹಲ್ಲೆಯಾಗಿದೆ. ದೇವಾಲಯದ ಆಡಳಿತ ಕಚೇರಿಯ ಗ್ಲಾಸ್​ಗಳು, ಪೀಠೋಪಕರಣ ಧ್ವಂಸ ಮಾಡಿದ್ದಾರೆ.
ಪರಿಸ್ಥಿತಿ ಕೈಮೀರುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಪೊಲೀಸರು, ಹತೋಟಿಗೆ ತಂದಿದ್ದಾರೆ. ಪೊಲೀಸರ ಎದುರಲ್ಲೇ ಎರಡೂ ಬಣಗಳ ನಡುವೆ ಮಾತಿನ‌ ಚಕಮಕಿ ಜೋರಾಗಿತ್ತು. ದೇವಾಲಯ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್​ ಬಂದೋಬಸ್ತ್​ ಕಲ್ಪಿಸಲಾಗಿದೆ.

ಬೀದಿಗೆ ಬಂದ ಒಳ ಜಗಳ:ನವರಾತ್ರಿ ಚಂಡಿಕಾ ಹೋಮ ನಡೆಸಲು ಧರ್ಮದರ್ಶಿ ಮಂಡಳಿ ಅಡ್ಡಿ ಪಡಿಸುತ್ತಿದೆ ಎಂದು ಸಿಗಂದೂರು ದೇವಸ್ಥಾನದ ಪ್ರಧಾನ ಅರ್ಚಕ ಶೇಷಗಿರಿ ಭಟ್ ಕುಟುಂಬಸ್ಥರೊಂದಿಗೆ ಶುಕ್ರವಾರ ಬೆಳಗ್ಗೆ ಚೌಡೇಶ್ವರಿ ದೇವಿ ಎದುರು ಮೌನ ಪ್ರತಿಭಟನೆ ನಡೆಸುತ್ತಿದ್ದರು.
ಈ ವೇಳೆ ಧರ್ಮದರ್ಶಿ ರಾಮಪ್ಪ ಕಡೆಯ ಮಂಜಯ್ಯ ಜೈನ್​ ಎಂಬುವವರು ದೇವರ ದರ್ಶನ ಪಡೆಯಲೆಂದು ಬಂದಿದ್ದರು. ಆಗ ಶೇಷಗಿರಿ ಭಟ್ ಕುಟುಂಬಸ್ಥರು ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ಪ್ರಶ್ನಿಸಿದ ಇತರರ ಮೇಲೂ ಕೈಮಾಡಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು.
https://www.facebook.com/VVani4U/videos/1440445262816513
22 ತಿಂಗಳ ಬಳಿಕ ಭಕ್ತರಿಗೆ ಸುಳವಾಡಿ ಕಿಚ್ಚುಗುತ್ತಿ ಮಾರಮ್ಮನ ದರ್ಶನ!

ನೊಂದ ಹೆಣ್ಣು ಮಗಳ ಮೇಲೆ ಕೇಸ್ ಹಾಕಿದ್ದು ಎಷ್ಟು ಸರಿ? ನಾವು ಬೇಲ್​ ಪಡೆಯಲ್ಲ: ಬಿಜೆಪಿ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + eleven =
Remember me
