ಬೆಂಗಳೂರು:ಬಿಜೆಪಿ, ಕಾಂಗ್ರೆಸ್ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿವೆ. ಪಕ್ಷ ಸಂಘಟನೆ, ಅಭ್ಯರ್ಥಿಗಳ ಆಯ್ಕೆಯ ಕಸರತ್ತು ಆರಂಭಿಸಿವೆ.ಈ ನಡುವೆ ಜೆಡಿಎಸ್ ಕೂಡ ಲೋಕಸಮರಕ್ಕೆ ಸನ್ನದ್ಧವಾಗುತ್ತಿದೆ. ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ಬಳಿಕ ಅಂತಃಕಲಹ ಎದುರಿಸಿದ ಜೆಡಿಎಸ್ ನಾಯಕರು ಈಗ ಮೈಕೊಡವಿ ಮೇಲೆದ್ದಿದ್ದಾರೆ.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಬಳಿಕ ಪಕ್ಷದಲ್ಲಿ ಹೊಸ ಚೈತನ್ಯ ಮೂಡಿದೆ. ಪಕ್ಷ ಸಂಘಟನೆಗೆ ಹೊಸ ದಾರಿ ರೂಪಿಸುತ್ತಿದ್ದಾರೆ. ಸಾಲು ಸಾಲು ರಜೆ, ಹೊಸ ವರ್ಷಾಚರಣೆ ಸಂಭ್ರಮದ ಬಿಡುವಿನ ನಡುವೆಯೂ ಕುಮಾರಸ್ವಾಮಿ ಮನೆಯಲ್ಲಿದ್ದರೂ ಸುಮ್ಮನೆ ಕುಳಿತಿಲ್ಲ. ಸೈಲೆಂಟ್ ಆಗಿ ಚುನಾವಣೆಗೆ ಏನೇನು ಸ್ಟ್ರಾಟಜಿ ಮಾಡಬೇಕೋ ಅದೆಲ್ಲಕ್ಕೂ ಭೂಮಿಕೆ ಸಿದ್ಧಪಡಿಸುತ್ತಿದ್ದಾರೆ.ನಾಲ್ಕು ತಿಂಗಳಲ್ಲಿ ಲೋಕಸಭೆ ಚುನಾವಣೆ ಬರುವುದರಿಂದ ಪೂರ್ವ ತಯಾರಿಯಲ್ಲಿ ತೊಡಗಿದ್ದಾರೆ. ಬಿಜೆಪಿ ಜತೆ ಸೇರಿ ಕಾಂಗ್ರೆಸ್‌ನ್ನು ಸೋಲಿಸುವುದು ಹಾಗೂ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಬೇಕಾದ ತಂತ್ರಗಾರಿಕೆ ಮಾಡುತ್ತಿದ್ದಾರೆ.
ಮಂಡ್ಯ, ಕೋಲಾರ, ಹಾಸನ, ತುಮಕೂರು ಜಿಲ್ಲೆಗಳನ್ನು ಗುರಿಯಾಗಿಟ್ಟುಕೊಂಡು ಆಯಾ ಕ್ಷೇತ್ರಗಳ ವ್ಯಾಪ್ತಿಗೆ ಬರುವ ಪಕ್ಷದ ಶಾಸಕರು, ಮುಖಂಡರು, ಜಿಲ್ಲಾಧ್ಯಕ್ಷರುಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ. ಯಾವ ಕ್ಷೇತ್ರದಲ್ಲಿ ಯಾವ ಪಕ್ಷದ ಸಮೀಕರಣ ಏನು?, ಎಲ್ಲಿ ಯಾವ ಜಾತಿ ಪ್ರಾಬಲ್ಯವಿದೆ, ಬಿಜೆಪಿ ಮತ್ತು ಜೆಡಿಎಸ್‌ನ ಪ್ರಭಾವಿ ನಾಯಕರು ಯಾರು? ಯಾವ ತಂತ್ರಗಾರಿಕೆ ಬಳಸಬಹುದು ಎಂಬ ಮಾಹಿತಿಯನ್ನು ಕುಳಿತಲ್ಲೇ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.
ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದ್ದಾರೆ. ಬಿಜೆಪಿ ಜತೆ ಮೈತ್ರಿ ಮಾಡಿಕೊಂಡೂ ಹೊಸ ಹೊಸ ಸವಾಲುಗಳನ್ನು ಎದುರಿಸಲು ಸಜ್ಜಾಗುತ್ತಿದ್ದಾರೆ. ಮೈತ್ರಿ ಮಾಡಿಕೊಂಡೂ ನಿರೀಕ್ಷಿತ ಲಿತಾಂಶ ಬಾರದೇ ಹೋದರೆ ಪಕ್ಷಕ್ಕೆ ಹಾಗೂ ತಮಗೆ ದೊಡ್ಡ ಮುಖಭಂಗುತ್ತದೆ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಂಡು ಕಾರ್ಯಮಗ್ನರಾಗಿದ್ದಾರೆ.ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ನೀಡಿರುವ ವಾಗ್ದಾನ ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.
ಮೈತ್ರಿ ಮಾಡಿಕೊಂಡಿರುವುದರಿಂದ ಪ್ರತಿ ವಿಷಯದಲ್ಲೂ ಅಳೆದೂ ತೂಗಿ ಹೆಜ್ಜೆ ಇಡಬೇಕಾಗುತ್ತದೆ. ಹಾಗಾಗಿ ರಾಜ್ಯ ಬಿಜೆಪಿ ಜತೆ ಉತ್ತಮ ಬಾಂಧವ್ಯ ಬೆಳೆಸಲು ಉತ್ಸುಕತೆ ತೋರಿದ್ದಾರೆ. ಬಿಜೆಪಿ ಹೋರಾಟದ ಜತೆ ಕೈಜೋಡಿಸುವ ಮೂಲಕ ತಮ್ಮ ಪಕ್ಷದ ಅಸ್ಥಿತ್ವ ಉಳಿಸಿಕೊಳ್ಳುವ ಹಾಗೂ ವರ್ಚಸ್ಸು ವೃದ್ಧಿಸಿಕೊಳ್ಳುವ ಸವಾಲೂ ಕುಮಾರಸ್ವಾಮಿಗೆ ಇರುವುದರಿಂದ ಪ್ರತಿಯೊಂದು ವಿಚಾರದಲ್ಲೂ ಎಚ್ಚರಿಕೆ ಹೆಜ್ಜೆ ಇಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × 1 =
Remember me
