ಬೆಂಗಳೂರು:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಗುತ್ತಿಗೆದಾರರಿಗೆ 50 ಲಕ್ಷ ರೂ. ವರೆಗಿನ ಸರ್ಕಾರಿ ಕಾಮಗಾರಿಗಳಲ್ಲಿ ಮೀಸಲಾತಿ ಜಾರಿಯಲ್ಲಿರುತ್ತದೆ. ಈ ಮೀಸಲಾತಿ ಮಿತಿಯನ್ನು ಒಂದು ಕೋಟಿ ರೂಪಾಯಿಗೆ ಹೆಚ್ಚಿಸುವ ಬಗ್ಗೆ ಆಯವ್ಯಯದಲ್ಲಿ ಘೋಷಣೆ ಆಗಿದ್ದರೂ ಅನುಷ್ಠಾನಕ್ಕೆ ಬರದ್ದಕ್ಕೆ ಇಂದು ಮೌನ ಪ್ರತಿಭಟನೆ ನಡೆಸಲಾಗಿದೆ.
ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಶಾಸಕರ ಭವನದ ಸಭಾಂಗಣ ಕೊಠಡಿಯಲ್ಲಿ ಇಂದು ಸಭೆ ಆಯೋಜಿಸಿತ್ತು. ಅಲ್ಲಿ ಮೀಸಲಾತಿ ಹೆಚ್ಚಳ ಅನುಷ್ಠಾನಕ್ಕೆ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ಅಲ್ಲಿ ಮೌನ ಪ್ರತಿಭಟನೆ ನಡೆಸುವ ಮೂಲಕ ಆಗ್ರಹಿಸಲಾಯಿತು ಎಂದು ಕರ್ನಾಟಕ ರಾಜ್ಯ ಎಸ್​ಸಿ-ಎಸ್​ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎನ್​. ಮಹದೇವಸ್ವಾಮಿ ತಿಳಿಸಿದ್ದಾರೆ.
ಮೀಸಲಾತಿ ಮಿತಿ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿಯವರಿಗೆ ಅನೇಕ ಬಾರಿ ಮನವಿ ಮಾಡಿದ್ದು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅವರು ಆರ್ಥಿಕ ಇಲಾಖೆಗೆ ಸೂಚಿಸಿರುತ್ತಾರೆ. ನಂತರ ಅರ್ಥಿಕ ಇಲಾಖೆಯು ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ಮಿತಿಯನ್ನು 50 ಲಕ್ಷದಿಂದ ಒಂದು ಕೋಟಿ ರೂಪಾಯಿಗೆ ಹೆಚ್ಚಿಸಲು ಕಡತ ಮಂಡಿಸಿರುತ್ತಾರೆ. ಆದರೆ ಇದುವರೆಗೂ ಅನುಮೋದನೆ ನೀಡಿರುವುದಿಲ್ಲ. ಜಾರಿಯಲ್ಲಿರುವ ಮೀಸಲು ಗುತ್ತಿಗೆ ಕಾಮಗಾರಿಗಳಲ್ಲಿ ಪಾಲ್ಗೊಳ್ಳದಂತೆ ತಡೆಯಲು ಸುತ್ತೋಲೆಯನ್ನು ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮೀಸಲಾತಿ ಹೆಚ್ಚಳ ಘೋಷಣೆ ಅನುಷ್ಠಾನ ಸಂಬಂಧ ಈಗಾಗಲೇ ಮುಖ್ಯಮಂತ್ರಿಯವರ ಜತೆ ಮಾತನಾಡಿದ್ದೇವೆ ಎಂದು ಸಮಿತಿ ಅಧ್ಯಕ್ಷರು ಹೇಳಿದ್ದಾರೆ. ಅಲ್ಲದೆ ಮುಂದಿನ ವಾರ ಸಭೆಯಲ್ಲಿ ಮೀಸಲಾತಿ ಮಿತಿ ಹೆಚ್ಚಿಸುವ ವಿಷಯ ಚರ್ಚಿಸಿ ಶಿಫಾರಸ್ಸು ಮಾಡುವುದರ ಜೊತೆಗೆ ಮುಖ್ಯಮಂತ್ರಿಯವರ ಬಳಿ ಒಂದು ನಿಯೋಗ ತೆರಳಿ ಮನವರಿಕೆ ಮಾಡುತ್ತೇವೆ ಎಂದೂ ಭರವಸೆ ನೀಡಿರುತ್ತಾರೆ ಎಂಬುದಾಗಿ ಮಹದೇವಸ್ವಾಮಿ ತಿಳಿಸಿದ್ದಾರೆ.
ನಿಮ್ಮ ದಾಖಲೆಗಳನ್ನು ನೀಡಿ ಬೇರೆ ಯಾರೋ ಸಿಮ್​ ಪಡೆದಿರಬಹುದು!; ಚೆಕ್ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ..

ಮದ್ವೆ ಆಗದೆ 2 ವರ್ಷ ಒಂದೇ ರೂಮಲ್ಲಿದ್ರು ಬ್ಯೂಟಿಷಿಯನ್​-ಬಾರ್ಬರ್; ಕೊನೆಗೆ ಅವನ ಸಿಟ್ಟಿಗೆ ಅವಳ ಪ್ರಾಣವೇ ಹೋಯ್ತು!

ಶಿಕ್ಷಕರ ನೇಮಕಾತಿಗೆ ಹಿನ್ನಡೆ: 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿಗೆ ಹೈಕೋರ್ಟ್ ತಡೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three + fifteen =
Remember me
