ಬೆಂಗಳೂರು:ನಿನ್ನೆಯಿಂದ ಮಾಧ್ಯಮದಲ್ಲಿ ರೌಡಿ ಸೈಲೆಂಟ್ ಸುನೀಲ (Silent sunila) ನ ಬಗ್ಗೆ ಭಾರಿ ಚರ್ಚೆಯಾಗುತ್ತಿದೆ. ಮೊನ್ನೆ (ನ.27) ಸೈಲೆಂಟ್ ಸುನೀಲ್​ ನೇತೃತ್ವದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಬಿಜೆಪಿ ನಾಯಕರು ಪಾಲ್ಗೊಂಡ ಬಳಿಕ ಸುನೀಲ ಬಿಜೆಪಿ (BJP) ಸೇರುತ್ತಾನೆ ಮತ್ತು ಚಾಮರಾಜಪೇಟೆ (Chamarajapet) ಕ್ಷೇತ್ರದಿಂದ ಸ್ಪರ್ಧಿಸುತ್ತಾನೆ ಎಂಬ ವಿಚಾರ ಹರಿದಾಡುತ್ತಿದ್ದು, ಕಾಂಗ್ರೆಸ್​ ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು. ಅಲ್ಲದೆ, ಬಿಜೆಪಿ ವಿರುದ್ಧ ಸಾಕಷ್ಟು ಟೀಕೆಗಳು ಸಹ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಪಕ್ಷದ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ (Nalin Kumar Kateel) ಪತ್ರಿಕಾ ಪ್ರಕಟಣೆ ಹೊರಡಿಸಿ, ಸ್ಪಷ್ಟನೆ ನೀಡಿದ್ದಾರೆ.
ಸಾಕಷ್ಟು ಟೀಕೆಗಳು ವ್ಯಕ್ತವಾದರೂ ಇಷ್ಟು ದಿನ ಸೈಲೆಂಟ್ ಆಗಿದ್ದ ಬಿಜೆಪಿ ತಡವಾಗಿ ಎಚ್ಚೆತ್ತುಕೊಂಡು, ಡ್ಯಾಮೇಜ್ ಕಂಟ್ರೋಲ್​ಗೆ ದೌಡಾಯಿಸಿದೆ. ಅಷ್ಟೇ ಅಲ್ಲ, ಸೈಲೆಂಟ್ ಸುನಿಲ್ ಜತೆಗೆ ವೇದಿಕೆಯಲ್ಲಿದ್ದ ನಾಯಕರಿಗೆ ಶಾಕ್ ನೀಡಿದೆ‌. ಯಾವುದೇ ಕಾರಣಕ್ಕೂ ಸೈಲೆಂಟ್ ಸುನಿಲ್ ಪಕ್ಷ ಸೇರ್ಪಡೆಗೆ ಅವಕಾಶವಿಲ್ಲ. ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲಿಸುವವರು ಹಾಗೂ ಅಪರಾಧ ಹಿನ್ನೆಲೆಯವರಿಗೆ ಪಕ್ಷಕ್ಕೆ ನೋ ಎಂಟ್ರಿ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಸಾರಿದ್ದಾರೆ‌.
ವಿವರಣೆಗೆ ಫರ್ಮಾನುಈ ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಂದ ವಿವರಣೆ ನೀಡುವಂತೆ ಫರ್ಮಾನು ಹೊರಡಿಸಲು ಪಕ್ಷದ ರಾಜ್ಯಾಧ್ಯಕ್ಷ ನಿರ್ಧರಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಆಗದಂತೆ ಎಚ್ಚರಿಕೆವಹಿಸಲು ತಾಕೀತು ಮಾಡಿದ್ದಾರೆ. ಏನೇ ಇದ್ದರೂ ಪಕ್ಷದ ಗಮನಕ್ಕೆ ತರಬೇಕೆಂದೂ ಸೂಚಿಸಿದ್ದಾರೆ.
ಈ ಮಧ್ಯೆ ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಪ್ರತಿಕ್ರಿಯಿಸುವ ವೇಳೆ ಕಾಂಗ್ರೆಸ್​ನಲ್ಲಿ ಎಷ್ಟು ರೌಡಿಶೀಟರ್​ಗಳಿದ್ದಾರೆ ಲೆಕ್ಕ ಹಾಕಲಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ. ಚಾಮರಾಜಪೇಟೆಯಲ್ಲಿ ಮೂರು ದಿನಗಳ ಹಿಂದೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸೈಲೆಂಟ್ ಸುನಿಲ್ ಜತೆಗೆ ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಬಿಜೆಪಿ ದಕ್ಷಿಣ ಜಿಲ್ಲಾ ಘಟಕದ ಮುಖಂಡರು ಪಾಲ್ಗೊಂಡಿದ್ದರು.
ಕೊರಗಜ್ಜ ದೈವ ಕನ್ನಡದಲ್ಲಿ ಮಾತನಾಡಲು ಹೇಗೆ ಸಾಧ್ಯ? ದೈವಾರಾಧಕರಿಂದ ಪ್ರಶ್ನೆ…

ಬುದ್ಧಿವಂತರು ಮಾತ್ರ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರುವ ಮೊಸಳೆಯನ್ನು ಗುರುತಿಸಲು ಸಾಧ್ಯ!

ನಲ್ಲಿ ಸಂಪರ್ಕ ಇನ್ನು ಸರಳ: ಸಚಿವ ಎಂಟಿಬಿ ನಾಗರಾಜ್ ಹೇಳಿಕೆ; ಇ-ವಾಹನ ನೀತಿ ಶೀಘ್ರ ಜಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + three =
Remember me
