ಬೆಂಗಳೂರು:ಕೋವಿಡ್ -19 ನಿಂದ ಸಂಕಷ್ಟಕ್ಕೆ ಸಿಲುಕಿರುವ ರೇಷ್ಮೆ ರೀಲರ್ಸ್ ಹಾಗೂ ಟ್ರೇಡರ್ಸ್ ಗಳಿಗೆ ಇಲಾಖೆ ಸಂತಸದ ಸುದ್ದಿ ನೀಡಿದೆ. rIಲರ್ಸ್ ಹಾಗೂ ಟ್ರೇಡರ್ಸ್ ಗಳ ಜೊತೆ ಪ್ರತ್ಯೇಕ ಸಭೆ ನಡೆಸಿದ ಸಚಿವ ಡಾ. ನಾರಾಯಣಗೌಡ, ಸಮಸ್ಯೆಗಳನ್ನು ಆಲಿಸಿ ಪರಿಹಾರವನ್ನೂ ಸೂಚಿಸಿದ್ದಾರೆ. ಸಚಿವರು ತೆಗೆದುಕೊಂಡ ನಿರ್ಧಾರದಿಂದ ನೂಲುಬಿಚ್ಚಣಿಕೆದಾರರು (ರೀಲರ್ಸ್) ಹಾಗೂ ಟ್ರೇಡರ್ಸ್ ಸಂತಸಗೊಂಡಿದ್ದಾರೆ.
ಅಡಮಾನ ಸಾಲ ಮಿತಿ ಈ ವರೆಗೆ ಒಂದು ಲಕ್ಷ ರೂ. ಇತ್ತು. ಅದನ್ನ ಈಗ 2 ಲಕ್ಷ ರೂಪಾಯಿಗೆ ಏರಿಕೆ ಮಾಡುವುದಾಗಿ ಸಚಿವರು ಸಭೆಯಲ್ಲಿ ತಿಳಿಸಿದ್ದಾರೆ. ರೇಷ್ಮೆ ಗೆ ಹೆಚ್ಚಿನ ದರ ನಿಗದಿ ಮಾಡುವ ಬಗ್ಗೆಯೂ ಪರಿಶೀಲಿಸುವ ಭರವಸೆ ನೀಡಿದ್ದಾರೆ.
ಇದನ್ನೂ ಓದಿ:ಕರೊನಾ ವೈರಸ್​ ಹೊರತಾಗಿಯೂ ಜೀವಂತ ಪ್ರಾಣಿ ಮಾರುಕಟ್ಟೆಗಳನ್ನ ಮುಚ್ಚಬಾರದು: ಡಬ್ಲ್ಯುಎಚ್​ಒ ಮಾತಿನ ಮರ್ಮವೇನು
ಆ ಬಳಿಕ ಟ್ರೇಡರ್ಸ್ ಗಳ ಜೊತೆ ಸಭೆ ನಡೆಸಿ ಕುಂದುಕೊರತೆ ಆಲಿಸಿದ್ದಾರೆ. ಹೊರ ರಾಜ್ಯಗಳಿಗೆ ರೇಷ್ಮೆ ಸಾಗಿಸಲು ಸಾಧ್ಯವಾಗುತ್ತಿಲ್ಲ. ಕೋವಿಡ್ 19 ಬರುವುದಕ್ಕು ಮುನ್ನ ಹೆಚ್ಚಿನ ಬೆಲೆಗೆ ರೇಷ್ಮೆ ಖರೀದಿಸಲಾಗಿತ್ತು. ಈಗ ಹೊರರಾಜ್ಯಗಳಲ್ಲಿ ವಹಿವಾಟು ನಡೆಸುವುದು ಕಷ್ಟವಾಗಿದೆ. ಅಲ್ಲದೆ ಹೊರ ರಾಜ್ಯಗಳಲ್ಲಿ ನಡೆಸಿದ ವಹಿವಾಟಿನ ಹಣ ಕೂಡ ಬರದೆ ಬಾಕಿಯಾಗಿದೆ. ಇದರಿಂದ ಹೊಸದಾಗಿ ಖರೀದಿಗು ಸಮಸ್ಯೆ ಆಗಿದೆ. ಲಾಕ್ ಡೌನ್ ಮುಗಿದ ತಕ್ಷಣ ಚೀನಾ, ವಿಯೆಟ್ನಾಂ ಸೇರಿದಂತೆ ಬೇರೆ ಬೇರೆ ದೇಶಗಳಿಂದ ರೇಷ್ಮೆ ಆಮದಾಗುತ್ತೆ. ಆಗ ರಾಜ್ಯದ ರೇಷ್ಮೆ ದರ ಕುಸಿಯುವ ಸಾಧ್ಯತೆ ಇದೆ. ಹೀಗಾಗಿ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವರಲ್ಲಿ ಟ್ರೇಡರ್ಸ್ ಮನವಿ ಮಾಡಿದ್ರು.
ಆ್ಯಂಟಿ ಡಂಪಿಂಗ್ ಚಾರ್ಜ್ ಏರಿಕೆ ಸಂಬಂಧ ತಕ್ಷಣವೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಸಚಿವರು ಸಭೆಯಲ್ಲಿ ತಿಳಿಸಿದ್ದಾರೆ. ಅಲ್ಲದೆ ರೇಷ್ಮೆ ಆಮದಿಗೂ ಮಿತಿ ಹೇರುವ ಪ್ರಯತ್ನ ಮಾಡಲಾಗುವುದು. ಇನ್ನು ಹೊರ ರಾಜ್ಯಗಳಿಗೆ ರೇಷ್ಮೆ ಸಾಗಿಸಲು ಕಮರ್ಷಿಯಲ್ ವೆಹಿಕಲ್ ಗೆ ಯಾವುದೆ ಸಮಸ್ಯೆ ಇಲ್ಲ. ಜೊತೆ ಅಗತ್ಯವಿದ್ದಲ್ಲಿ ಪಾಸ್ ವ್ಯವಸ್ಥೆ ಕೂಡ ಮಾಡಲಾಗುವುದು. ಈಗಾಗಲೆ ಕೋರಿಯರ್ ಸರ್ವಿಸ್ ಕೂಡ ಆರಂಭವಾಗಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಮುಂದುವರಿದ ಕರೊನಾ ಅಟ್ಟಹಾಸ: ಇಂದು 30 ವಯಸ್ಸಿಗಿಂತ ಕೆಳಗಿನವರಲ್ಲೇ ಹೆಚ್ಚು ಪ್ರಕರಣ ಪತ್ತೆ
ಟ್ರೇಡರ್ಸ್ ಈ ಎಲ್ಲ ಸೌಲಭ್ಯ ಬಳಸಿಕೊಂಡು ವಹಿವಾಟು ನಡೆಸಬಹುದು. ಯಾವುದೆ ಸಂದರ್ಭದಲ್ಲಿ ವಹಿವಾಟು ನಡೆಸಲು ಸಮಸ್ಯೆ ಎದುರಾದರೆ ತಕ್ಷಣ ಸರ್ಕಾರ ನಿಮ್ಮ ನೆರವಿಗೆ ಬರಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.
ಬಹುಮಹಡಿ ಕಟ್ಟಡದಲ್ಲಿ ನಡೆದ ಸಭೆಯಲ್ಲಿ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಕಮಿಷನರ್ ಶೈಲಜಾ ಮತ್ತಿತರರಿದ್ದರು.
ಅಧಿಕಾರಿಗಳು ಕರೆ ಸ್ವೀಕರಿಸಿದ್ದರೆ ಬದುಕಿ ಬರುತ್ತಿದ್ದರೆ 16 ವಲಸೆ ಕಾರ್ಮಿಕರು?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 − 7 =
Remember me
