ಬೆಂಗಳೂರು:ಹಲವು ವರ್ಷಗಳಿಂದ ದುಬೈನಲ್ಲಿ ನೆಲೆಸಿರುವ ಮಹಿಳೆಯೊಬ್ಬರ ಬೆಂಗಳೂರಿನ ಮನೆಯ ವಿಳಾಸ ನೀಡಿ ಸಿಮ್ ಕಾರ್ಡ್ ಖರೀದಿಸಿ, ಅದರ ಮೂಲಕ ಅಂತರ್ಜಾಲದಲ್ಲಿ ಅಪ್ರಾಪ್ತರ ನಗ್ನ ವಿಡಿಯೋ ಅಪ್ಲೋಡ್ ಮಾಡಿದ ಪ್ರಕರಣದಲ್ಲಿ ಮಹಿಳೆ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಬೆಂಗಳೂರು ಪೂರ್ವ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಕೋರಿ ಹಾಜೀರಾ ಆಸ್ಮಾ ಎಂಬಾಕೆ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠ ವಜಾಗೊಳಿಸಿದೆ.
ಏನಿದು ಪ್ರಕರಣ?:ಅಪ್ರಾಪ್ತರ ನಗ್ನ ವಿಡಿಯೋವನ್ನು ಅಂತರ್ಜಾಲದಲ್ಲಿ ಅಪ್ಲೋಡ್ ಮಾಡಿದ ಆರೋಪದಲ್ಲಿ ಬೆಂಗಳೂರು ಪೂರ್ವ ವಿಭಾಗದ ಸಿಇಎನ್ ಪೊಲೀಸರು 2021ರ ಜ.16ರಂದು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 ಹಾಗೂ 67(ಬಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಮೊಬೈಲ್ ಸೇವೆ ಒದಗಿಸುವ ಸಂಸ್ಥೆಯಿಂದ ಮಾಹಿತಿ ಪಡೆದ ಪೊಲೀಸರಿಗೆ ಹಾಜೀರಾ ಆಸ್ಮಾ ಅವರ ಬೆಂಗಳೂರಿನ ವಿಳಾಸ ನೀಡಿ ಖರೀದಿಸಿದ್ದ ಸಿಮ್ ಬಳಸಿ ವಿಡಿಯೋ ಅಪ್ಲೋಡ್ ಮಾಡಿರುವ ವಿಚಾರ ತಿಳಿದಿತ್ತು. ತನಿಖೆ ಆರಂಭಿಸಿದ್ದ ಪೊಲೀಸರು ಮೊಹಮ್ಮದ್ ತಾಹಾ ಎಂಬಾತನನ್ನು ಶಂಕಿತ ಆರೋಪಿಯಾಗಿ ಗುರುತಿಸಿದ್ದರು. ಆತ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದ. ಪ್ರಕರಣವಿನ್ನೂ ತನಿಖಾ ಹಂತದಲ್ಲಿರುವಾಗಲೇ ಹಾಜೀರಾ ಎಫ್ಐಆರ್ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಹೈಕೋರ್ಟ್ ಆದೇಶವೇನು?:ಕೃತ್ಯಕ್ಕೆ ಬಳಕೆಯಾಗಿರುವ ಸಿಮ್ ಕಾರ್ಡ್ ಅನ್ನು ಅರ್ಜಿದಾರರು ಖರೀದಿಸಿದ್ದರೇ ಅಥವಾ ಅರ್ಜಿದಾರರ ಫೋಟೋ ಹಾಗೂ ಹೆಸರು ದುರ್ಬಳಕೆ ಮಾಡಿಕೊಂಡು ಪ್ರಕರಣದ ಮತ್ತೊಬ್ಬ ಆರೋಪಿಯಾಗಿರುವ ಮೊಹಮ್ಮದ್ ತಾಹಾ ಎಂಬಾತ ಸಿಮ್ ಖರೀದಿಸಿದ್ದಾನೆಯೇ ಎನ್ನುವುದು ತನಿಖೆಯಿಂದ ತಿಳಿದುಬರಬೇಕಿದೆ. ಅರ್ಜಿದಾರ ಮಹಿಳೆ ಪೊಲೀಸರ ಮುಂದೆ ಹಾಜರಾಗಿ ತಾವು ಯಾವುದೇ ಸಿಮ್ ಖರೀದಿಸಿಲ್ಲ, ತಮ್ಮ ಹೆಸರಿನಲ್ಲಿ ಮತ್ತೊಬ್ಬರು ಖರೀದಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವುದನ್ನು ದೃಢಪಡಿಸಿದರೆ, ಪೊಲೀಸರು ಅವರ ಹೆಸರನ್ನು ತೆಗೆದುಹಾಕಿ ಸಿಮ್ ಖರೀದಿಸಿದ ವ್ಯಕ್ತಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.
ಅರ್ಜಿದಾರರ ಹೆಸರಿನಲ್ಲಿ ಸಿಮ್ ಕಾರ್ಡ್ ಖರೀದಿಯಾಗಿರುವುದರಿಂದ ಪ್ರಕರಣದಲ್ಲಿ ಅವರ ಹೆಸರನ್ನು ತನಿಖಾಧಿಕಾರಿಗಳು ಉಲ್ಲೇಖಿಸಿದ್ದಾರೆ. ಹಾಗೆಂದ ಮಾತ್ರಕ್ಕೆ ಆಕೆಯೇ ಅಪರಾಧಿ ಎಂದರ್ಥವಲ್ಲ. ಅವರು ಶಂಕಿತ ಆರೋಪಿಯಷ್ಟೇ ಆಗಿದ್ದು, ತನಿಖೆಯ ಉದ್ದೇಶಕ್ಕೆ ಅವರ ಉಪಸ್ಥಿತಿ ಅಗತ್ಯವಾಗಿದೆ. ಆದ್ದರಿಂದ, ಈ ಹಂತದಲ್ಲಿ ಎಫ್ಐಆರ್ ರದ್ದುಪಡಿಸಲಾಗದು ಎಂದು ನ್ಯಾಯಾಲಯ ಹೇಳಿದೆ.
ವಾದವೇನು?:ಅರ್ಜಿದಾರರು ಕಳೆದ 13 ವರ್ಷಗಳಿಂದ ದುಬೈನಲ್ಲಿ ನೆಲೆಸಿದ್ದಾರೆ. ಹೀಗಿರುವಾಗ ಬೆಂಗಳೂರಿನ ಮನೆಯ ವಿಳಾಸ ನೀಡಿ ಸಿಮ್ ಖರೀದಿಸಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅವರ ಹೆಸರಿನಲ್ಲಿ ಮತ್ತಾರೋ ಸಿಮ್ ಖರೀದಿಸಿದ್ದರೆ ಅದಕ್ಕೆ ಅರ್ಜಿದಾರರು ಜವಾಬ್ದಾರರಲ್ಲ. ಅವರ ವಿರುದ್ಧದ ತನಿಖೆ ಮುಂದುವರಿಸಿದರೆ ಅದು ಕಾನೂನು ಪ್ರಕ್ರಿಯೆಯ ದುರ್ಬಳಕೆಯಾಗಲಿದೆ. ಆದ್ದರಿಂದ, ಎಫ್ಐಆರ್ ರದ್ದುಪಡಿಸಬೇಕು ಎಂದು ಹಾಜೀರಾ ಪರ ವಕೀಲರು ವಾದ ಮಂಡಿಸಿದ್ದರು. ಆದರೆ, ಈ ವಾದ ಒಪ್ಪದ ನ್ಯಾಯಪೀಠ, ಪ್ರಕರಣದ ನಿಜವಾದ ಅಪರಾಧಿಗಳನ್ನು ಪತ್ತೆ ಹಚ್ಚಲು ಅರ್ಜಿದಾರರನ್ನು ತನಿಖೆಗೆ ಒಳಪಡಿಸಲೇಬೇಕಾಗುತ್ತದೆ ಎಂದು ತಿಳಿಸಿ, ಎಫ್‌ಐಆರ್ ರದ್ದುಪಡಿಸಲು ನಿರಾಕರಿಸಿದೆ.
ಬಾಳಿ ಬದುಕಬೇಕಿದ್ದ ಮಗ-ಸೊಸೆ ಜತೆ ಸಾವಿನ ಮನೆಯ ಕದ ತಟ್ಟಿದ ತಾಯಿ! ಕಿರಿ ಮಗನ ತಪ್ಪಿಗೆ ನಡೆದೇ ಹೋಯ್ತು ಘೋರ ದುರಂತ

ಪ್ರವಾಸಕ್ಕೆ ಹೋಗಿದ್ದ ಪತ್ನಿ, ಮನೆಯಲ್ಲಿ ಕೊಲೆಯಾಗಿ ಬಿದ್ದಿದ್ದ ಪತಿ, ಅಪ್ಪನ‌ ಶವ ಕಂಡು ಬೆಚ್ಚಿಬಿದ್ದ ಮಗಳು… ಕೊಳ್ಳೇಗಾಲದಲ್ಲಿ ಭೀಕರ ಘಟನೆ

ಇಮ್ರಾನ್ ಖಾನ್ ಆಡಿಯೋ ಲೀಕ್​: ನಿಮ್ಮಿಂದಾಗಿ ನನ್ನ ಖಾಸಗಿ ಅಂಗಗಳು ನೋಯುತ್ತಿವೆ.. ಇಂದು ಬರೋಕೆ ಆಗಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 12 =
Remember me
