ಬೆಂಗಳೂರು:ಸ್ಯಾಂಡಲ್​ವುಡ್​ ನಟ ರಕ್ಷಿತ್‌ ಶೆಟ್ಟಿ ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿವೆ.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಬಾಲರಾಮ ಮಂದಿರವನ್ನು ನೋಡಲು ರಕ್ಷಿತ್‌ ಶೆಟ್ಟಿ ಅವರು ತಮ್ಮ ಗೆಳೆಯರ ಜತೆ ಅಯೋಧ್ಯೆಗೆ ತೆರಳಿದ್ದಾರೆ. ರಾಮನ ದರ್ಶನವನ್ನು ಪಡೆದಿದ್ದಾರೆ. ಮಂದಿರದ ಮುಂದೆ ನಿಂತಿರುವ ಫೋಟೊಗಳು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ರಕ್ಷಿತ್ ಶೆಟ್ಟಿ ಅವರು ಸಾಂಪ್ರದಾಯಿಕ ಸ್ಟೈಲ್‌ನಲ್ಲಿ ಅವರು ದೇಗುಲಕ್ಕೆ ಭೇಟಿ ನೀಡಿದ್ದಾರೆ. ರಕ್ಷಿತ್ ಶೆಟ್ಟಿ ದೈವಭಕ್ತರು. ಉಡುಪಿ ಮೂಲದ ರಕ್ಷಿತ್ ಶೆಟ್ಟಿ ಅವರು ಆದಾಗೆಲ್ಲ ಅಲ್ಲಿನ ದೇಗುಲಗಳಿಗೆ ಭೇಟಿ ನೀಡುತ್ತಾರೆ.

ರಕ್ಷಿತ್ ಶೆಟ್ಟಿ  ಹೊಸ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಟೆಂಪಲ್ ರನ್ ಕೂಡ ಮಾಡುತ್ತಿದ್ದಾರೆ. ಮೊನ್ನೆಯಷ್ಟೇ ಅಲೆವೂರು ಜೋಡು ರಸ್ತೆಯಲ್ಲಿ ನಡೆದ 118ನೇ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದರು.ರಕ್ಷಿತ್‌ ಶೆಟ್ಟಿ ಆಗಾಗ ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತಾರೆ.ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಕೋಲದಲ್ಲಿ ಅವರು ಭಾಗಿ ಆಗಿದ್ದರು. ಇದೀಗಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ.
AI ಟೀಚರ್ : ಭಾರತದ ಮೊದಲ AI ಶಿಕ್ಷಕಿ ‘ಐರಿಸ್’ ಪರಿಚಯಿಸಿದ ಕೇರಳ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 2 =
Remember me
