ಬೆಂಗಳೂರು:ಸಂಸತ್ತಿನಲ್ಲಿ ಕರ್ನಾಟಕದ ನೀರಾವರಿ ಯೋಜನೆಗಳಾದ ಕೃಷ್ಣಾ, ಕಾವೇರಿ ಅಂತರಾಜ್ಯ ಜಲ ವಿವಾದಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇನೆ.  ಸಂಸತ್ತಿನಲ್ಲಿ ಪ್ರಮಾಣಿಕವಾಗಿ ಕನ್ನಡಿಗರ ಪರವಾಗಿ ಧ್ವನಿ ಎತ್ತುವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಮೇಲೆ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ನಾನು ಸಂಸದನಾಗಿ ಆಯ್ಕೆಯಾಗಿ ದೆಹಲಿಗೆ ಹೋದರೂ, ಕರ್ನಾಟಕದ ರಾಜಕಾರಣದಲ್ಲಿ ನಾನು ಸಕ್ರಿಯನಾಗಿರುತ್ತೇನೆ. ನಮ್ಮ ವರಿಷ್ಠರು ಅದೇ ಕಾರಣಕ್ಕೆ ಕೆಲವು ನಿರ್ಣಯ ತೆಗೆದುಕೊಂಡಿದ್ದಾರೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಪಡೆಯುವ  ಬಗ್ಗೆ‌ ರಾಜ್ಯ ಸರ್ಕಾರ ನಿಯಮಾನುಸಾರ ಮನವಿ ಸಲ್ಲಿಸಬೇಕು. ಹಿಂದೆ ನಾವು ಎಐಬಿಪಿಯಲ್ಲಿ ಸುಮಾರು ಆರು ತಿಂಗಳು ದೆಹಲಿಯಲ್ಲಿ ನಮ್ಮ ಅಧಿಕಾರಿಗಳನ್ನು ಇಟ್ಟು ಸುಮಾರು 3800 ಕೊಟಿ ರೂ. ತಂದಿದ್ದೆ ಎಂದು ನೆನಪಿಸಿದರು.
ಕೇಂದ್ರದ ಬಜೆಟ್‌ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಮೀಸಲಿಟ್ಟಿರುವ 5000 ಕೋಟಿ ರೂ ತರಲು ರಾಜ್ಯದ ಸಚಿವರು ಹಾಗೂ ಕೇಂದ್ರ ಸರ್ಕಾರದ ಸಚಿವರ ಜೊತೆ ಮಾತನಾಡಿ ಹಣ ತರಲು ಪ್ರಯತ್ನಿಸುತ್ತೇನೆ.
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ನಾವು ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದ್ದೇವು. ಇದುವರೆಗೂ ಕೇಂದ್ರ ಸರ್ಕಾರ ಯಾವುದೇ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಿಲ್ಲ. ಆದರೆ, ನಮ್ಮ ಒತ್ತಾಸೆಯ ಕಾರಣಕ್ಕೆ ಈ ಯೋಜನೆಗೆ ವಿಶೇಷವಾಗಿ 5000 ಕೋಟಿ ರೂ. ನೀಡುವ ಭರವಸೆ ನೀಡಿದ್ದರು ಎಂದು ತಿಳಿಸಿದರು.
ಇದೇ ವೇಳೆ, ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಆಯ್ಕೆಯಾದ ಹಿನ್ನೆಲೆ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ.ಶಿಗ್ಗಾವಿ ಕ್ಷೇತ್ರದ ಜನತೆಗೆ ಕೃತಜ್ಞತೆ ಹೇಳುತ್ತೇನೆ. ನಿರಂತರ ವಾಗಿ 4 ಬಾರಿ ಆಯ್ಕೆ ಮಾಡಿ ಅಭಿವೃದ್ಧಿ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.
ಶಿಗ್ಗಾಂವಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಇನ್ನಷ್ಟು ಅಭಿವೃದ್ಧಿಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದೇನೆ. ಸಿಎಂ ಬೆಂಗಳೂರಿಗೆ ಬಂದ ತಕ್ಷಣ ಅವರ ಬಳಿ ಚರ್ಚಿಸಿ ಅಭಿವೃದ್ಧಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಚರ್ಚಿಸುತ್ತೇನೆ‌. ಹಾವೇರಿ ಜಿಲ್ಲೆಯಲ್ಲಿ ಶಿಗ್ಗಾವಿ ಬರುವುದರಿಂದ ಅದರ ಅಭಿವೃದ್ಧಿಗೆ ನನ್ನ ಶ್ರಮ ಮುಂದುವರೆಯಲಿದೆ ಎಂದು ಬೊಮ್ಮಾಯಿ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + fourteen =
Remember me
