ಬೆಂಗಳೂರು :ಮುಖ್ಯಮಂತ್ರಿಗಳಿಗೆ ಏನಾದರೂ ಅಹವಾಲು ಸಲ್ಲಿಸಬೇಕು ಎಂದಾದರೆ ಬೇರೆ ಬೇರೆ ಇ-ಮೇಲ್ ಐಡಿಗಳಿಗೆ ಇನ್ನು ಇ-ಮೇಲ್​ ಮಾಡಬೇಕಾಗಿಲ್ಲ. ಒಂದೇ ಒಂದು ಇ-ಮೇಲ್ ಐಡಿಗೆ ಕಳುಹಿಸಿದರೆ ಸಾಕು. ಜನವರಿ 1ರಿಂದ ಇದು ಚಾಲ್ತಿಗೆ ಬರಲಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಜನವರಿ ಒಂದರಿಂದ ಅಹವಾಲು ಸ್ವೀಕಾರಕ್ಕೆ[email protected]ಇ-ಮೇಲ್ ಐಡಿಯನ್ನು ಮಾತ್ರ ಬಳಕೆಯಲ್ಲಿ ಇರಲಿದೆ. ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ 2020ರ ಆಗಸ್ಟ್ ತಿಂಗಳಿನಿಂದ ಇ-ಮೇಲ್ ಮೂಲಕ ಸ್ವೀಕೃತವಾಗುವ ಅಹವಾಲುಗಳನ್ನು ಇ-ಆಫೀಸ್ ನಲ್ಲಿಯೇ ನಿರ್ವಹಿಸಲಾಗುತ್ತಿದೆ. ಪ್ರಸ್ತುತ ಮುಖ್ಯಮಂತ್ರಿಗಳ ಸಚಿವಾಲಯವು 3 ಸಕ್ರಿಯ ಇ-ಮೇಲ್ ವಿಳಾಸಗಳನ್ನು ಹೊಂದಿದ್ದು, ಇದರಿಂದ ಅಹವಾಲು ಪುನರಾವರ್ತನೆಯಾಗುತ್ತಿದೆ ಹಾಗೂ ಅನಗತ್ಯ ಗೊಂದಲ ಉಂಟಾಗುತ್ತಿದೆ.
ಇದನ್ನೂ ಓದಿ:ಸಿಎಂ ಕುರ್ಚಿ ಹೋದ್ರೂ ಚಿಂತೆ ಇಲ್ಲ, ಅಂಟಿಕೊಂಡು ಕುಳಿತಿಲ್ಲ – ಬಿಹಾರ ಸಿಎಂ ನಿತೀಶ್ ಕುಮಾರ್ ಗರಂ
ಈ ಹಿನ್ನೆಲೆಯಲ್ಲಿ ಅಹವಾಲು ಸಲ್ಲಿಕೆ ಮತ್ತು ನಿರ್ವಹಣೆಯನ್ನು ಸರಳಗೊಳಿಸಲು ಏಕ ವಿಳಾಸವನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿ, ಮುಂದಿನ ದಿನಗಳಲ್ಲಿ ತಮ್ಮ ಅಹವಾಲು ಮತ್ತು ಇತರ ಸಂವಹನವನ್ನು[email protected]ಮೇಲ್ ಐಡಿ ಮೂಲಕವೇ ಮಾಡುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಸುಗ್ರೀವಾಜ್ಞೆ ಮೂಲಕವೇ ಗೋಹತ್ಯೆ ನಿಷೇಧ ಮತ್ತೆ ಜಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
