ಬೆಂಗಳೂರು:ಬೈಯಪ್ಪನಹಳ್ಳಿಯ ಮೂರನೇ ರೈಲ್ವೆ ಟರ್ಮಿನಲ್, ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ರೈಲ್ವೆ ಮಂಡಳಿ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುನೀತ್ ಶರ್ಮಾ ತಿಳಿಸಿದ್ದಾರೆ.ಬೈಯಪ್ಪನಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಶ್ವದರ್ಜೆಯ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ದೇಶದ ಮೊದಲ ಹವಾನಿಯಂತ್ರಿತ ಟರ್ಮಿನಲ್ ಆಗಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸಲು ನಿರ್ಧರಿಸಲಾಗಿದ್ದು, ಅದಕ್ಕಾಗಿ ಪ್ರಧಾನಿಯವರಿಂದ ಸಮಯ ಕೋರಲಾಗಿದೆ. ಶೀಘ್ರದಲ್ಲಿ ದಿನಾಂಕ ನಿಗದಿ ಮಾಡಿ ರೈಲ್ವೆ ಟರ್ಮಿನಲ್ ಲೋಕಾರ್ಪಣೆ ಮಾಡಲಾಗುವುದು ಎಂದು ಹೇಳಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಮತ್ತು ಯಶವಂತಪುರ ರೈಲು ನಿಲ್ದಾಣಗಳಲ್ಲಿನ ಜನದಟ್ಟಣೆ ಮತ್ತು ರೈಲುಗಳ ಸಂದಣಿ ಕಡಿಮೆ ಮಾಡಲು ನೂತನ ಟರ್ಮಿನಲ್ ಸಹಕಾರಿ ಆಗಲಿದೆ. ಸಂಪೂರ್ಣ ಹವಾನಿಯಂತ್ರಿತವಾಗಿರುವ ಈ ಟರ್ಮಿನಲ್‌ನಲ್ಲಿ ಲಿಫ್ಟ್, ಎಸ್ಕಲೇಟರ್, ಓಡಾಟದ ಜಾಗವಿದೆ. ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು.
ನಂತರ ಇದೇ ವೇಳೆ ಯಲಹಂಕದ ರೈಲು ಗಾಲಿ ಕಾರ್ಖಾನೆಗೆ ಭೇಟಿ ನೀಡಿದ ಸುನೀತ್ ಶರ್ಮಾ, ನೈಋತ್ಯ ರೈಲ್ವೆ ಮತ್ತು ರೈಲು ಗಾಲಿ ಕಾರ್ಖಾನೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್ ಕುಮಾರ್‌ಸಿಂಗ್, ನೈಋತ್ಯ ರೈಲ್ವೆ ಕೈಗೊಂಡಿರುವ ಕಾಮಗಾರಿಗಳು, ಯೋಜನೆಗಳ ಕುರಿತು ಮಾಹಿತಿ ನೀಡಿದರು. ಈ ವೇಳೆ ರೈಲು ಗಾಲಿ ಕಾರ್ಖಾನೆ ಪ್ರಧಾನ ವ್ಯವಸ್ಥಾಪಕ ರಾಜೀವ್ ಕುಮಾರ್ ವ್ಯಾಸ್, ಬೆಂಗಳೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶೋಕ್ ಕುಮಾರ್ ವರ್ಮಾ ಸೇರಿ ಇನ್ನಿತರರಿದ್ದರು.
ನಾಳೆಯಿಂದ ರಾಜ್ಯದಲ್ಲಿ ಮಳೆ; ಹವಾಮಾನ ಇಲಾಖೆ ಮೂನ್ಸೂಚನೆ..

ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಕರೊನಾ ಎರಡನೇ ಅಲೆಯ ತೀವ್ರತೆ ಹೆಚ್ಚಳ; ಒಂದೇ ದಿನ 3,082 ಮಂದಿಯಲ್ಲಿ ಸೋಂಕು ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + nineteen =
Remember me
