ಬೆಂಗಳೂರು:ಬೆಳ್ಳಂಬೆಳಗ್ಗೆ ಮನೆಯಿಂದ ಕೆಲಸಕ್ಕೆ ಹೊರಟಿದ್ದ ಅಕ್ಕ-ತಂಗಿ ಮಾರ್ಗಮಧ್ಯೆ ದುರ್ಮರಣಕ್ಕೀಡಾದ ಘಟನೆ ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯ ತಿಂಡ್ಲು ಬಳಿ ಸಂಭವಿಸಿದೆ.
ತಿಂಡ್ಲು ಬಳಿಯ ದೊಡ್ಡ ಬೆಟ್ಟಹಳ್ಳಿ ನಿವಾಸಿಗಳಾದ ಮರಿಯಮ್ಮ ಮತ್ತು ಈಕೆಯ ಸಹೋದರಿ ಗೌರಮ್ಮ ಮೃತ ದುರ್ದೈವಿಗಳು. ಮರಿಯಮ್ಮರ ಪುತ್ರ ಶಿವಲಿಂಗ ಗಂಭೀರ ಗಾಯಗೊಂಡಿದ್ದಾರೆ. ಅಕ್ಕ ತಂಗಿ ಇಬ್ಬರೂ ವಿದ್ಯಾರಣ್ಯಪುರ ವಾರ್ಡ್​ನಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ತಾಯಿ ಮತ್ತು ಚಿಕ್ಕಮ್ಮರನ್ನು ಶಿವಲಿಂಗ ಬೈಕ್​ನಲ್ಲಿ ಕೆಲಸಕ್ಕೆ ಬಿಟ್ಟು ಬರಲು ಹೋಗುತ್ತಿದ್ದ ವೇಳೆ ಆಟೋ ಡಿಕ್ಕಿ ಹೊಡೆದಿದೆ.ಇದನ್ನೂ ಓದಿರಿತಾಯಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಬಾಲಕಿ ಆತ್ಮಹತ್ಯೆ?
ತಿಂಡ್ಲು ಬಳಿ ಆಟೋ ವ್ಹೀಲ್ ಆಕ್ಸಲ್ ಬ್ಲೇಡ್ ಕಟ್ಟಾಗಿ ನಡುರಸ್ತೆಗೆ ಬಂದಿದೆ. ಈ ವೇಳೆ ಎದುರು ಬರುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದ್ದು, ಗೌರಮ್ಮ ಸ್ಥಳದಲ್ಲೇ ಸಾವನ್ನಪ್ಪಿದರು. ಗಂಭೀರ ಗಾಯಗೊಂಡಿದ್ದ ಮರಿಯಮ್ಮರನ್ನ ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತಾದರೂ ಮಾರ್ಗಮಧ್ಯೆ ಕೊನೆಯುಸಿರೆಳೆದರು.
ಮಗ ಶಿವಲಿಂಗನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಲಹಂಕ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೊಸೆಯನ್ನ ಕೊಂದು ಮಾವ ಆತ್ಮಹತ್ಯೆ! ಊಟಕ್ಕೆ ಬಂದ ಮಗನಿಗೆ ಕಾದಿತ್ತು ಆಘಾತ…

ಸಿಐಡಿಗೆ ಸಿಡಿ ಕೇಸ್​! ಷಡ್ಯಂತ್ರ ಮಾಡಿದ್ದವರನ್ನ ಜೈಲಿಗೆ ಕಳಿಸೋದೇ ನನ್ನ ಗುರಿ: ಜಾರಕಿಹೊಳಿ

ಅಕ್ಕನ ಕಣ್ಣೆದುರಲ್ಲೇ ಭಾವನ ಕಿವಿ ಕಚ್ಚಿ ತುಂಡರಿಸಿದ ಬಾಮೈದುನ!

ನಾನು 20 ವರ್ಷ ಕಾಂಗ್ರೆಸ್​ನಲ್ಲೇ ಇದ್ದೆ, ಜಾರಕಿಹೊಳಿ ಸಿಡಿ ಮಾಡಿದ್ದೇ ಕಾಂಗ್ರೆಸ್​: ಸಚಿವರ ಸ್ಫೋಟಕ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 13 =
Remember me
