ವಿಜಯಪುರ:ಎರಡು ದಿನಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ದಾಯಾದಿ ಸಹೋದರಿಯರ ಶವ ಬಾವಿಯೊಂದರಲ್ಲಿ ಪತ್ತೆಯಾಗಿವೆ. ಇಬ್ಬರ ಒಂದೊಂದು ಕೈಗಳನ್ನು ವೇಲ್​ನಿಂದ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನಗಳು ಮೂಡಿವೆ.
ನಾಪತ್ತೆಯಾಗಿ ಶವವಾಗಿ ಪತ್ತೆಯಾಗಿರುವ ಇಬ್ಬರೂ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಕುದುರಿ ಸಾಲವಾಡಗಿ ಗ್ರಾಮದವರು. ಪ್ರೀತಿ ಯಲಗೂರಪ್ಪ ಕಳ್ಳಿಮನಿ (14) ರೇಣುಕಾ ಸೂರಜಪ್ಪ ಕಳ್ಳಿಮನಿ (14) ಮೃತಪಟ್ಟವರು. ಇವರಿಬ್ಬರ ಶವ ದೇವರಹಿಪ್ಪರಗಿ ತಾಲೂಕಿನ ಕೊಂಡಗೂಳಿ ಗ್ರಾಮದ ಜಮೀನಿನ ಬಾವಿಯಲ್ಲಿ ಪತ್ತೆಯಾಗಿವೆ.
ಇದನ್ನೂ ಓದಿ:ಮಗ ಮಾಡಿದ ಆ ಒಂದು ಕೆಲಸ ಅಮ್ಮನನ್ನೂ ಬಲಿ ಪಡೆಯಿತಾ?; ಪತಿ ಸತ್ತ ಕೆಲವೇ ಕ್ಷಣಗಳಲ್ಲಿ ಪತ್ನಿಗೂ ಸಾವು!
ಒಬ್ಬಳ ಒಂದು ಕೈಯನ್ನು ಇನ್ನೊಬ್ಬಳ ಒಂದು ಕೈ ಜತೆ ವೇಲ್​ನಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ. ಬಾಲಕಿಯರಿಬ್ಬರೂ ಕೈಗಳನ್ನು ಕಟ್ಟಿಕೊಂಡು ತಾವೇ ಬಾವಿಗೆ ಹಾರಿದ್ದರೇ ಅಥವಾ ಯಾರಾದರೂ ಸಾಯಿಸಿ ಕೈಗಳನ್ನು ಕಟ್ಟಿ ಬಾವಿಗೆ ತಳ್ಳಿರಬಹುದೇ ಎಂಬ ಅನುಮಾನ ಮೂಡಿದೆ. ಸಾವಿಗೆ ಕಾರಣ ಏನು ಎಂಬುದು ಇನ್ನೂ ನಿಖರವಾಗಿ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಸವನ ಬಾಗೇವಾಡಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.
ರೆಮ್​ಡೆಸಿವಿರ್​ ನಕಲಿ ದಂಧೆಯಲ್ಲಿ ವೈದ್ಯರೇ ಕಿಂಗ್​ಪಿನ್​; ಗ್ಲುಕೋಸ್​ ತುಂಬಿ ರೆಮ್​ಡೆಸಿವಿರ್ ಎಂದು ಮಾರಾಟ, ನಾಲ್ವರ ಬಂಧನ

ಸೋಂಕಿತ ತಾಯಿ ತೀರಿಹೋದ ಮೂರೇ ದಿನಕ್ಕೆ ಅಣ್ಣ-ತಮ್ಮನೂ ಕರೊನಾಗೆ ಬಲಿ; ಅಮ್ಮಂದಿರ ದಿನವೇ ಇಬ್ಬರೂ ಏಕಕಾಲಕ್ಕೇ ನಿಧನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 9 =
Remember me
