ಬೆಂಗಳೂರು:ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಗರಣವನ್ನು ‘ ಸ್ವತಂತ್ರ ತನಿಖಾ ಸಂಸ್ಥೆ ’ಯಿಂದ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಸಲ್ಲಿಕೆಯಾದ ಅರ್ಜಿಯನ್ನು ತುರ್ತು ವಿಚಾರಣೆಗೊಳಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಈ ಸಂಬಂಧ ದಾಖಲಾದ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.ಈ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಜಿ. ಆರ್. ಮೋಹನ್, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ವಿಚಾರವಾಗಿ ಹಲವಾರು ಮಹಿಳೆಯರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಅಲ್ಲದೆ, ಸಾಕ್ಷಾೃಧಾರಗಳನ್ನು ನಾಶ ಮಾಡಲಾಗುತ್ತಿದೆ.
ಇದನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.ಈ ವೇಳೆ ಪ್ರತಿಕ್ರಯಿಸಿದ ನ್ಯಾಯಪೀಠ ಪ್ರಕರಣ ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ಹಂತದಲ್ಲಿ ಮಧ್ಯಪ್ರವೇಶಿಸುವ ಯಾವುದೇ ಅವಶ್ಯಕತೆ ಇಲ್ಲ ಎಂದು ಹೇಳಿ ವಿಚಾರಣೆಯನ್ನು ಮುಂದೂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − one =
Remember me
