ಬೆಂಗಳೂರು:ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್​ನಲ್ಲಿ ಇದೀಗ ಮಾಜಿ ಶಾಸಕ ಎಚ್​.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಬಂಧನದ ಭೀತಿ ಎದುರಾಗಿದ್ದು, ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಕಳೆದ 15 ದಿನಗಳಿಂದ ನಾಪತ್ತೆಯಾಗಿರುವ ಭವಾನಿಯ ಹುಡುಕಾಟದಲ್ಲಿರುವ ಎಸ್​ಐಟಿ ಅಧಿಕಾರಿಗಳು, ಇಂದು ನೇರವಾಗಿ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಇದನ್ನೂ ಓದಿ:ಚುನಾವಣೆ ಫಲಿತಾಂಶದ ಬಗ್ಗೆ ಚಿಂತೆ ಇಲ್ಲ, ಜನ ಮೋದಿ ಜೊತೆಗಿದ್ದಾರೆ: ಜೆಪಿ ನಡ್ಡಾ
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಪ್ರಕರಣದಲ್ಲಿ ಪತಿ ಎಚ್​.ಡಿ. ರೇವಣ್ಣ ಅವರ ಬಳಿಕ ತಾನು ಕೂಡ ಸಿಲುಕಿಕೊಂಡಿರುವ ಭವಾನಿ ರೇವಣ್ಣ, ಎಸ್​ಐಟಿ ಅಧಿಕಾರಿಗಳು ನೀಡಿರುವ ವಿಚಾರಣೆ ನೋಟಿಸ್​ಗೆ ಹಾಜರಾಗದೆ, ತಲೆಮರೆಸಿಕೊಂಡಿರುವುದು ಇದೀಗ ಭಾರೀ ಅನುಮಾನಗಳಿಗೆ ಕಾರಣವಾಗಿದೆ. ಇನ್ನು ಭವಾನಿ ಹುಡುಕಾಟದಲ್ಲಿರುವ ಎಸ್​ಐಟಿ, ನೇರವಾಗಿ ಅವರ ನಿವಾಸದ ಮುಂದೆಯೇ ಕಾದಿದ್ದಾರೆ.
ನಿನ್ನೆಯಷ್ಟೇ ವಿದೇಶದಿಂದ ರಾಜ್ಯಕ್ಕೆ ಬಂದಿಳಿದಿರುವ ಪ್ರಜ್ವಲ್ ರೇವಣ್ಣರನ್ನು ಇದೀಗ ನಿರಂತರ ವಿಚಾರಣೆಗೆ ಹಾಜರುಪಡಿಸಿರುವ ಎಸ್​ಐಟಿ ಅಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದ್ದಾರೆ. ಸದ್ಯ ಭವಾನಿ ಮಾತ್ರ ಎಸ್​ಐಟಿ ಕಣ್ಣಿನಿಂದ ತಪ್ಪಿಸಿಕೊಂಡಿದ್ದು, ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಭವಾನಿಗೆ ಬಂಧನದ ಭೀತಿ ಎದುರಾಗಿದ್ದು, ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್​ ಮೊರೆ ಹೋಗಿದ್ದಾರೆ.
ಬಿಸಿ ಗಾಳಿಗೆ ತಪ್ಪದ ಅನಾಹುತ! ಕಳೆದ 36 ಗಂಟೆಗಳಲ್ಲಿ 45 ಜನರು ಮೃತ, 87ಕ್ಕೆ ತಲುಪಿದ ಸಾವಿನ ಸಂಖ್ಯೆ

ನನಗಿರುವುದು ಇದೊಂದೇ ಆಸೆ… ‘3’ರ ಹಿಂದೆ ಬಿದ್ದ ಕೆಕೆಆರ್​ ಮೆಂಟರ್ ಗೌತಮ್​ ಗಂಭೀರ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + nine =
Remember me
