ಬೆಂಗಳೂರು:ನೇಕಾರರಿಗೆ ರಿಯಾಯಿತಿ ದರದಲ್ಲಿ ವಿದ್ಯುತ್​ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್​.ಪಾಟೀಲ ತಿಳಿಸಿದರು.
ವಿಜಯನಗರ ಕಾಸಿಯಾ ಸಭಾಂಗಣದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ, ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ನಿಗಮ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ, ಕಾವೇರಿ ಹ್ಯಾಂಡ್​ಲೂಮ್ಸ್​, ನೇಕಾರರ ಸೇವಾ ಕೇಂದ್ರ ಹಾಗೂ ಕಾಸಿಯಾ ಜಂಟಿ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ 9ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಹಾಗೂ ಕೈಮಗ್ಗ ನೇಕಾರರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
ರಿಯಾಯಿತಿ ದರದಲ್ಲಿ ವಿದ್ಯುತ್​ ನೀಡುವಂತೆ ನೇಕಾರರು ಸಲ್ಲಿಸಿದ್ದ ಮನವಿಗೆ ಮುಖ್ಯಂತ್ರಿ ಸಿದ್ದರಾಮಯ್ಯ ಸಕಾರತ್ಮಾಕವಾಗಿ ಸ್ಪಂದಿಸಿದ್ದಾರೆ. ನೇಕಾರರನ್ನು ಉಳಿಸುವ ಇಚ್ಚಾಶಕ್ತಿ ಸರ್ಕಾರ ಹೊಂದಿದೆ. ಮುಂದಿನ ದಿನಗಳಲ್ಲಿ ಪಾರಂಪರಿಕ ನೇಕಾರಿಕೆ ಜತೆಗೆ ವೈಜ್ಞಾನಿಕ ಪದ್ಧತಿಯಲ್ಲಿ ನೇಕಾರಿಕೆಯನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 10 =
Remember me
