ಬಾಗಲಕೋಟೆ: ಬಿಜೆಪಿ ನೇಕಾರರಿಗೆ ಟಿಕೆಟ್ ಕೊಟ್ಟಿಲ್ಲವೆಂದು ನೇಕಾರ ಸಮೂಹದ ಪ್ರತಿನಿಧಿಯಾಗಿ ಕುರುಹಿನಶೆಟ್ಟಿ ಗುರುಪೀಠದ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದರು. ಇದೀಗ ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಸ್ವಾಮೀಜಿ ನಾಮಪತ್ರ ಹಿಂಪಡೆದಿದ್ದಾರೆ.
ತೇರದಾಳ ಕ್ಷೇತ್ರದಲ್ಲಿ ನೇಕಾರ ಮತದಾರರೇ ನಿರ್ಣಾಯಕರು. ಹೀಗಿರುವಾಗಿ ಸಮುದಾಯಕ್ಕೆ ಟಿಕೆಟ್ ನೀಡಿಲ್ಲವೆಂದು ಸ್ವತಃ ನೇಕಾರ ಸಮುದಾಯದ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ ನಾಮಪತ್ರ ಸಲ್ಲಿಸುತ್ತಿದ್ದಂತೆ ಬಿಜೆಪಿ ನಾಯಕರ ಆತಂಕಕ್ಕೆ ಕಾರಣವಾಗಿತ್ತು. ಹೀಗಾಗಿ ಕಳೆದ ನಾಲ್ಕೈದು ದಿನಗಳಿಂದ ಸ್ವಾಮೀಜಿ ಅವರನ್ನು ಚುನಾವಣಾ ಸ್ಪರ್ಧೆಯಿಂದ ಹಿಂದಕ್ಕೆ ಸರಿಸಲು ಸಾಕಷ್ಟು ಪ್ರಯತ್ನಗಳು ನಡೆದಿದ್ದವು. ಇದೀಗ ಅಂತಿಮವಾಗಿ ಹಿರಿಯ ಸ್ವಾಮೀಜಿಯೊಬ್ಬರ ಸೂಚನೆ ಮೇರಿಗೆ ಬನಹಟ್ಟಿಯಲ್ಲಿ ನಾಮಪತ್ರ ಹಿಂಪಡೆದಿದ್ದಾರೆ.
ಇದನ್ನೂ ಓದಿ:ಭಿನ್ನಮತ ಮರೆತು ಕೆಲಸ ಮಾಡಿ; ವಿಜಯಪುರ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಖಡಕ್ ಸೂಚನೆ
ಒಲ್ಲದ ಮನಸ್ಸಿನಿಂದ ನಾಮಪತ್ರ ಹಿಂಪಡೆಯಲು ಬಂದ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ‘ಗುರುಗಳ ಮಾತು ಮೀರಲಾಗದೇ ನಾಮಪತ್ರ ಹಿಂದೆ ಪಡೆಯುತ್ತಿದ್ದೇನೆ. ನಾನು ನಾಮಪತ್ರ ಸಲ್ಲಿಸುವ ವೇಳೆ ಗುರುಗಳ(ಕನೇರಿ ಮಠದ ಕಾಡಸಿದ್ದೇಶ್ವರ ಶ್ರೀಗಳು) ಪರವಾನಿಗೆ ಪಡೆಯಬೇಕಿತ್ತು. ಆಗ ಅವರಿಗೆ ತಿಳಿಸಿದ್ದರೆ ಇವತ್ತು ನಾಮಪತ್ರ ಹಿಂಪಡೆಯುವ ಪ್ರಶ್ನೆ ಬರುತ್ತಿರಲಿಲ್ಲ ಎಂದರು.
ಗುರುಗಳ ಆದೇಶವಿದ್ದು, ನಾಮಪತ್ರ ಹಿಂಪಡೆಯುತ್ತೇನೆ. ಮೊದಲು ಗುರು, ಬಳಿಕ ಸನ್ಯಾಸಿ, ನಂತರ ಮಠ, ಆ ಬಳಿಕ ಸಮಾಜ.ಮುಂದೆ ನೇಕಾರರು ಯಾರಿಗೆ ಬೆಂಬಲಿಸಬೇಕು ಎಂದು ನಾನು ಈಗ ಹೇಳಲು ಆಗುವುದಿಲ್ಲ. ಸಮಾಜದವರು ಸಭೆ ಸೇರಿ ಅವರು ಏನು ತೀರ್ಮಾನ ಮಾಡುತ್ತಾರೋ ಹಾಗೆ ಮುಂದುವರಿಯುತ್ತೇವೆ ಎಂದರು.
ಇದನ್ನೂ ಓದಿ:ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಹೇಳಿಕೆ ತಿರುಚಿದ್ದಾರೆ; ವಿವಾದ ಬಳಿಕ ಸಿದ್ದರಾಮಯ್ಯ ಸ್ಪಷ್ಟನೆ
ಇದೀಗ ಒತ್ತಡಕ್ಕೆ ಮಣಿದು ಚುನಾವಣಾ ಕಣದಿಂದ ಹಿಂದೆ ಸರಿದ ನೇಕಾರ ಸ್ವಾಮೀಜಿಯ ನಿರ್ಧಾರದಿಂದ ಬಿಜೆಪಿ ಅಭ್ಯರ್ಥಿಯ ಹಾದಿ ತೇರದಾಳ ಕ್ಷೇತ್ರದಲ್ಲಿ ಸುಗಮವಾದಂತಾಗಿದೆ. ಇಲ್ಲಿನ ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ಸಿದ್ದು ಸವದಿ ಆಗಿದ್ದಾರೆ. ಈ ಕ್ಷೇತ್ರದಲ್ಲಿ ನೇಕಾರರ ಒಲವು ಇದ್ದರೆ ಮಾತ್ರ ಗೆಲುವು ಸಾಧಿಸಬಹುದು ಎಂದು ರಾಜಕೀಯ ಲೆಕ್ಕಾಚಾರಗಳಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − two =
Remember me
