ದಾಂಡೇಲಿ (ಜೋಯಿಡಾ) :ನಗರದ ಸಮೀಪದಲ್ಲಿರುವ ಜೋಯಿಡಾ ತಾಲೂಕು ವ್ಯಾಪ್ತಿಯಲ್ಲಿ ಬರುವ ಬಿರಿಯಂಪಾಲಿ ಗ್ರಾಮದ ಅಕೋಡಾದಲ್ಲಿ ಈಜಾಡಲು ಕಾಳಿ ನದಿಗಿಳಿದ ಹುಬ್ಬಳ್ಳಿ ಮೂಲದ ಒಂದೇ ಕುಟುಂಬದ ಆರು ಜನ ಸಾವಿಗೀಡಾದ ಘಟನೆ ಭಾನುವಾರ ಸಂಜೆ ನಡೆದಿದೆ.
ಈಜಾಡಲೆಂದು ನದಿಗಳಿದಿದ್ದ ಆರು ಜನರ ಪೈಕಿ ಬಾಲಕಿಯೊಬ್ಬಳು ನೀರಲ್ಲಿ ಕೊಚ್ಚಿ ಹೋಗುತ್ತಿರುವುದನ್ನು ಗಮನಿಸಿದ ಉಳಿದ ಐವರು ಆಕೆಯನ್ನು ರಕ್ಷಣೆ ಮಾಡಲು ಹೋಗಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ಹುಬ್ಬಳ್ಳಿಯ ಈಶ್ವರ ನಗರದ 40 ವರ್ಷ ವಯಸ್ಸಿನ ನಜೀರ್ ಅಹ್ಮದ್ ಚಮನ್ ಸಾಬ್ ಹೊನ್ನಂಬಲ್ ಹಾಗೂ ಅವರ ಮಕ್ಕಳಾದ 10 ವರ್ಷ ವಯಸ್ಸಿನ ಅಲ್ಪೀಯಾ ಮತ್ತು 06 ವರ್ಷ ವಯಸ್ಸಿನ ಮೊಹಿನ್, ನಜೀರ್ ಅವರ ಸಹೋದರಿ 38 ವರ್ಷ ವಯಸ್ಸಿನ ರೇಷ್ಮಾ ಉನ್ನಿಸಾ ತೌಫೀಕ್ ಅಹ್ಮದ್ ಮತ್ತು ಅವರ ಮಕ್ಕಳಾದ 15 ವರ್ಷ ವಯಸ್ಸಿನ ಇಫ್ರಾ ಮತ್ತು 12 ವರ್ಷ ವಯಸ್ಸಿನ ಅಬಿದ್ ಎಂದು ತಿಳಿದುಬಂದಿದೆ.
ನಗರದ ಜಂಗಲ್ ಲಾಡ್ಜಸ್ ಹಾಗೂ ಸ್ಥಳೀಯರ ಸಹಕಾರದಲ್ಲಿ ಆರು ಜನರ ಶವಗಳನ್ನು ಮೇಲಕ್ಕೆ ಎತ್ತಲಾಗಿದೆ. ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
ನಟಿ ತ್ರಿಷಾ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಉದ್ಯಮಿಯನ್ನು ವರಿಸಲಿದ್ದಾರೆ 37 ವರ್ಷದ ಸ್ಟಾರ್​ ನಟಿ!

ಕೈಲಾಸ ಪರ್ವತದ ರಹಸ್ಯ! ಈವರೆಗೂ ಯಾರೊಬ್ಬರು ಶಿಖರದ ತುದಿಯನ್ನು ಮುಟ್ಟಿಲ್ಲ ಏಕೆ? ಇಲ್ಲಿದೆ ಅಚ್ಚರಿಯ ಕಾರಣ…

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 − 13 =
Remember me
