ಕೊಡಗು:ಮನೆ ಮುಂದೆ ‘ನಾಯಿ ಇದೆ ಎಂದು ಎಚ್ಚರಿಕೆ’ ಎಂದು ಬೋರ್ಡ್ ತಗುಲಿಸಿ ಸುಮ್ಮನಾದರೆ ಸಾಕಾಗುವುದಿಲ್ಲ. ಇನ್ನುಮುಂದೆ ಮಾಲೀಕರೂ ಸಾಕುನಾಯಿ ಕುರಿತು ಎಚ್ಚರಿಕೆಯಿಂದ ಇರಬೇಕು. ಹಾಗಂತ ಪೊಲೀಸರೇ ಎಚ್ಚರಿಕೆಯನ್ನು ನೀಡಿದ್ದಾರೆ.
ಇತ್ತೀಚೆಗೆ ಕೊಡಗು ಜಿಲ್ಲೆಯ ನಾಪೊಕ್ಲು ಪೊಲೀಸ್ ಠಾಣೆ ವ್ಯಾಪ್ತಿಯ ಪಾರಾಣೆ ಗ್ರಾಮದ ನಿವಾಸಿ ಬೆಳತಂಡ ಮಾಚಯ್ಯ ಅವರ ಮನೆಗೆ ಮಗುವಿನ ಆರೋಗ್ಯ ತಪಾಸಣೆಗಾಗಿ ಬಂದಿದ್ದ ಸಮುದಾಯ ಆರೋಗ್ಯ ಅಧಿಕಾರಿಗೆ ಸಾಕುನಾಯಿ ಕಚ್ಚಿತ್ತು. ಈ ಹಿನ್ನೆಲೆಯಲ್ಲಿ ಮಾಚಯ್ಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ:ಸದ್ಯ ಈ ಬಿಯರ್ ಕುಡಿಯಬೇಡಿ!; ಸೆಡಿಮೆಂಟ್ ಶೇಖರಣೆ ಆಗಿರುವುದರಿಂದ ತಡೆ ಹಿಡಿದ ಅಬಕಾರಿ ಇಲಾಖೆ
ಇದೇ ಹಿನ್ನೆಲೆಯಲ್ಲಿ ಕೊಡಗು ಪೊಲೀಸರು ಎಚ್ಚರಿಕೆಯನ್ನು ನೀಡಿದ್ದಾರೆ. ಸಾಕುನಾಯಿಗಳು ಬೇರೆಯವರ ಮೇಲೆ ದಾಳಿ ಮಾಡಿದರೆ ಅಂಥ ನಾಯಿಗಳನ್ನು ಸಾಕಿದ ಮಾಲೀಕರ ವಿರುದ್ಧ ಸೆಕ್ಷನ್ 289 ಐಪಿಸಿ ಅನ್ವಯ ಪ್ರಕರಣ ದಾಖಲಿಸಿಕೊಂಡು ಆರು ತಿಂಗಳು ಜೈಲುವಾಸ ಹಾಗೂ ದಂಡವನ್ನು ವಿಧಿಸಲಾಗುವುದು ಎಂದು ಕೊಡಗು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.

ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ: ವಿಚ್ಛೇದನ ಘೋಷಿಸಿದ ಕಿರಿಕ್ ಕೀರ್ತಿ

ಹೃದಯಾಘಾತದಿಂದ ಸಾವು: ಪುರುಷರಿಗೆ ಸಂಬಂಧಿಸಿದಂತೆ ಹೊರಬಿದ್ದಿದೆ ಆತಂಕಕಾರಿ ಮಾಹಿತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
