ಬೆಂಗಳೂರು:ಮುಡಾದಲ್ಲಿ ಹಗರಣ ನಡೆದಿದೆ ಎಂದು ಪಾದಯಾತ್ರೆ ನಡೆಸುತ್ತಿರುವ ಬಿಜೆಪಿಯವರ ಘೋಷಣೆ, ಆರೋಪ, ಕೂಗಾಟ ನೋಡಿದರೆ ನಗು ಬರುತ್ತಿದೆ ಎಂದು ಶಾಸಕ ಲಕ್ಷ್ಮಣ ಸವದಿ ವಾಗ್ದಾಳಿ ನಡೆಸಿದರು.
ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಪಾದಯಾತ್ರೆ ಮಾಡುವ ನೈತಿಕ ಹಕ್ಕಿಲ್ಲ. ಪಾದಯಾತ್ರೆ ಮಾಡುತ್ತಿರುವವರು ನೂರು ಪಟ್ಟು ಇವರಿಗಿಂತ ಅಕ್ರಮ ಮಾಡಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ. ಹಿಂದೆ ಅಧಿಕಾರದಲ್ಲಿದ್ದಾಗ ಬಿಜೆಪಿಯವರು ಏನು ಮಾಡಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹರಿಹಾಯ್ದರು.
ಮುಡಾದಲ್ಲಿ ಅಕ್ರಮ ನಡೆದಿರುವುದು ಸಿದ್ದರಾಮಯ್ಯ ಸಿಎಂ ಇದ್ದಾಗ ಅಲ್ಲ. ಅದು 20 ವರ್ಷ ಹಳೆಯ ಕೇಸು. ಈಗ್ಯಾಕೆ ತೆಗೆದರು? ಅವರು ಪ್ರಾಸಿಕ್ಯೂಷನ್‌ಗೆ ಕೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ನೊಟೀಸ್ ಯಾಕೆ ಕೊಟ್ಟರು? ಹಿಂದುಳಿದ ವರ್ಗದ ಪ್ರಭಾವಿಯಾಗಿರುವ ಸಿದ್ದರಾಮಯ್ಯ ಅವರ ವರ್ಚಸ್ಸು ಕುಗ್ಗಿಸಲು ಸಂಚು ಇದರ ಹಿಂದಿದೆ ಎಂದರು.
ರಾಜ್ಯಪಾಲರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆಂದು ಜನರೇ ಮಾತನಾಡಿಕೊಳ್ಳುತ್ತಿದ್ದಾರೆ. ರಾಜ್ಯಪಾಲರು ಅನುಭವಿಗಳು. ಕೇಂದ್ರದಲ್ಲಿ ಅನೇಕ ವರ್ಷ ಮಂತ್ರಿಯಾಗಿ ಕೆಲಸ ಮಾಡಿದವರು. ನಾನು ಅವರನ್ನು ಹತ್ತಿರದಿಂದ ನೋಡಿದ್ದೇನೆ. ಹಾಗಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಲಾರರು ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರವರೇ ಅವರವರ ಆಸ್ತಿಗಳ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ. ಇದರಲ್ಲಿ ನಾನು ಏನೂ ಹೇಳುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.ಸಂಪುಟ ಪುನರ್‌ರಚನೆಯಲ್ಲಿ ನಿಮ್ಮ ಹೆಸರು ಕೇಳಿಬರುತ್ತಿದೆಯಲ್ಲ ಎಂಬ ಪ್ರಶ್ನೆಗೆ, ಅದು ಹೈಕಮಾಂಡ್ ಮತ್ತು ಸಿಎಂ ಸಿದ್ದರಾಮಯ್ಯನವರ ವಿವೇಚನೆಗೆ ಬಿಟ್ಟಿದ್ದು. ನಾನು ಹೈಕಮಾಂಡ್ ಮತ್ತು ಸಿಎಂ ನಿರ್ಧಾರಕ್ಕೆ ಬದ್ಧ ಎಂದರು.ಮಳೆ ಎರಡು ದಿನಗಳಿಂದ ಕಡಿಮೆಯಾಗಿದೆ. ಕೊಯ್ನ, ದೂದ್ ಗಂಗಾ ಅನೇಕ ನದಿಗಳ ಪ್ರವಾಹ ಇಳಿಕೆಯಾಗಿದೆ. ನದಿ ಪ್ರವಾಹ ಇಳಿದ ಮೇಲೆ ಬೆಳೆ ಹಾನಿ, ಮನೆ ಹಾನಿಗಳ ಸರ್ವೆ ಆರಂಭ ಮಾಡಲಾಗುವುದು. ಸಿಎಂ ಈ ಬಗ್ಗೆ ವರದಿ ಕೊಡಲು ಹೇಳಿದ್ದಾರೆ ಎಂದು ಪ್ರವಾಹ ಪರಿಹಾರ ಕುರಿತು ಲಕ್ಷ್ಮಣ ಸವದಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
